Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವೆಂಬರ್ 07, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿದೆ?
ವೈದಿಕಶಾಸ್ತ್ರದ ಪ್ರಕಾರ ನವೆಂಬರ್ 7ರಂದು ನಿಮ್ಮ ದ್ವಾದಶ ರಾಶಿಗಳ ಫಲ ಏನಿರಲಿದೆ ನೋಡಿ
ಮೇಷ ರಾಶಿ
ವ್ಯಾಪಾರಸ್ಥರಿಗೆ ಬಹಳ ಲಾಭದಾಯಕ ದಿನವಾಗಿದೆ. ಇಂದು ನೀವು ದುಪ್ಪಟ್ಟು ಲಾಭವನ್ನು ಪಡೆಯಬಹುದು. ಉದ್ಯೋಗಿಗಳಿಗೆಈ ದಿನ ಕಾರ್ಯನಿರತವಾಗಿರಲಿದೆ. ಈ ದಿನ ಕೆಲಸದ ಕಾರಣಕ್ಕೆ ಪ್ರಯಾಣಿಸಬೇಕಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ .

ವೃಷಭ ರಾಶಿ
ನೀವು ಸರ್ಕಾರಿ ಕೆಲಸ ಮಾಡಲು ಬಯಸಿದರೆ, ನೀವು ಹೆಚ್ಚು ಶ್ರಮಿಸಬೇಕು. ವ್ಯಾಪಾರಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಉದ್ಯಮಿಗಳು ಈ ದಿನ ಬಯಸಿದ ಫಲಿತಾಂಶ ಪಡೆಯಬಹುದು. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಾಣಲಿದೆ.
ಮಿಥುನ ರಾಶಿ
ಬಹಳ ದಿನಗಳಿಂದ ಬಾಕಿಯಿದ್ದ ಹಣವನ್ನು ಮರಳಿ ಪಡೆಯಬಹುದು. ಕೆಲವು ಸಹೋದ್ಯೋಗಿಗಳು ನಿಮ್ಮ ಇಮೇಜ್ ಹಾಳು ಮಾಡಲು ಪ್ರಯತ್ನಿಸಬಹುದು, ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದ ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಇಂದು ನೀವು ಹಣದ ವಿಷಯದಲ್ಲಿ ಹೆಚ್ಚು ಅದೃಷ್ಟಕರವಲ್ಲ. ನೀವು ಸಣ್ಣ ಹೂಡಿಕೆ ಮಾಡಿದ್ದರೆ, ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯದಿರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ದುಬಾರಿಯಾಗಿದೆ. ಜೀವನಶೈಲಿ ಕಡೆಗೆ ಗಮನಹರಿಸುವುದು ಒಳ್ಳೆಯದು.
ಸಿಂಹ ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಇಂದು ನೀವು ಹಣ ಗಳಿಸುವ ಅವಕಾಶಗಳಿವೆ. ನೀವು ಖರೀದಿಸಿದ ಹೊಸ ವಸ್ತು ನಿಮಗೆ ನೆಮ್ಮದಿ ತರಲಿದೆ. ಆರೋಗ್ಯ, ಹಾಗೂ ಧನ ಲಾಭದವಿದೆ. ಅವಿವಾಹಿತರಿಗೆ ಒಳ್ಳೆಯ ದಿನ
ಕನ್ಯಾ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ನೋಡುವುದಾರೆ ಈ ದಿನ ಅದೃಷ್ಟದ ದಿನ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಕೌಟುಂಬಿಕ ಜೀವನದಲ್ಲಿ ಖುಚಿ ಇರಲಿದೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಮಾನಸಿಕವಾಗಿಯೂ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಇಂದು ನೀವು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡುವಿರಿ. ನೀವು ಉನ್ನತ ಅಧಿಕಾರಿಗಳ ಬೆಂಬಲವನ್ನು ಸಹ ಪಡೆಯುತ್ತೀರಿ. ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಆರೋಗ್ಯದ ಬಗ್ಗೆ ಗಮನಹರಿಸಿ.
ವೃಶ್ಚಿಕ ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಇಂದು ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.
ಧನು ರಾಶಿ
ಕೆಲಸದ ಜಾಗದಲ್ಲಿ ಒತ್ತಡ ಅಧಿಕವಿರಲಿದೆ. ಇಂದು ಮನಸ್ಸಿನಲ್ಲಿ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆ ಹೆಚ್ಚಿರಲಿದೆ. ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯುತ್ತಾರೆ.
ಮಕರ ರಾಶಿ
ವ್ಯಾಪಾರಿಗಳು ಅದರಲ್ಲೂ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿರುವವರು ಉತ್ತಮ ಲಾಭ ಪಡೆಯುತ್ತಿದ್ದಾರೆ. ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ. ಸಣ್ಣ ಪುಟ್ಟ ಮನಸ್ಥಾಪಗಳ ಬಗೆಹರಿಸಿಕೊಳ್ಳಲು ಮುಂದಾಗಿ.
ಕುಂಭ ರಾಶಿ
ನಿಮ್ಮ ಕೆಲವು ಪ್ರಮುಖ ಕೆಲಸಗಳು ಇಂದು ಅಪೂರ್ಣವಾಗಿ ಉಳಿಯುತ್ತವೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಹಣದ ವಿಷಯಗಳಲ್ಲಿ ನೀವು ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ನಿಮ್ಮ ಹೊಸ ಆಲೋಚನೆಗೆ ಮತ್ತಷ್ಟು ಬಲ ಬರಲಿದೆ. ದೂರ ಪ್ರಯಾಣ ಸಾಧ್ಯತೆ ಇದೆ. ದಿನದ ಅಂತ್ಯದಲ್ಲಿ ಶುಭ ಸುದ್ದಿ ಕೇಳುವಿರಿ.
ಮೀನ ರಾಶಿ
ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಸಾಲ ನೀಡುವುದನ್ನು ಇಂದು ತಪ್ಪಿಸುವುದು ಉತ್ತಮ. ಪಂಚೇಂದ್ರಿಯಕ್ಕೆ ಸಂಬಂಧಿಸಿದ ಸಮಸ್ಯೆಗೆ ಒಳಗಾಗಬಹುದು. ವಾಹನ ಮಾಲೀಕರಿಗೆ ಲಾಭವಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications