Latest Updates
-
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ! -
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ!
ನವೆಂಬರ್ 17 ದಿನ ಭವಿಷ್ಯ: ಭಾನುವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಭಾನುವಾರದ ದಿನ ನಿಮಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ, ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ.

ವೃಷಭ ರಾಶಿ
ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿರಲಿದೆ,ಹಿರಿಯರ ಸಲಹೆ ಕೇಳಿದರೆ ತುಂಬಾ ಒಳ್ಳೆಯದು, ನೀವು ತೆಗೆದುಕೊಳ್ಳುವ ನಿರ್ಧಾರಗಳಿಂದ ಉತ್ತಮ ಫಲಿತಾಂಶ ಪಡೆಯುತ್ತೀರಿ.ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳಿಗೂ ಅನುಕೂಲಕರವಾಗಿರಲಿದೆ, ಸಂಬಂಧದಲ್ಲಿ ಸಮಸ್ಯೆಗಳಿರಬಹುದು, ಅದನ್ನು ಬಗೆಹರಿಸಲು ಪ್ರಯತ್ನಿಸಿ, ಮಕ್ಕಳಿದ್ದರೆ ಅವರ ಜೊತೆ ಸಂತೋಷದಿಂದ ಕಳೆಯಿರಿ, ಮಾನಸಿಕ ಒತ್ತಡ ಕಡಿಮೆ ಇರಲಿದೆ.
ಕರ್ಕ ರಾಶಿ
ನಿಮ್ಮ ಪೋಷಕರಿಗೆ ಆರೋಗ್ಯ ಸರಿಯಿಲ್ಲದಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ, ಅವರ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ. ನಿಮ್ಮ ಆಸಕ್ತಿಯ ಹವ್ಯಾಸದ ಕಡೆಗೆ ಗಮನಹರಿಸುತ್ತೀರಿ, ಕೆವರು ಹವ್ಯಾಸವನ್ನು ವೃತ್ತಿಯಾಗಿ ತೆಗೆದುಕೊಳ್ಳಲು ನಿರ್ಧರಿಸಬಹುದು. ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ.
ಸಿಂಹ ರಾಶಿ
ನೀವು ವೃತ್ತಿ ಹಾಗೂ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೀರಿ, ಅದು ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ, ಹೊಸ ಅವಕಾಶಗಳು ನಿಮಗೆ ದೊರೆಯಲಿದೆ. ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದ ಅಥವಾ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದರೆ ಅದು ಬಗೆಹರಿಯಲಿದೆ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುವುದು. ನಿಮಗೆ ವಹಿಸಿದ ಕೆಲಸವನ್ನು ಸಮಯದೊಳಗೆ ನಿಭಾಯಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನೀವು ಹೂಡಿಕೆ ಮಾಡಲು ಬಯಸಿದ್ದರೆ ಈ ದಿನ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಪ್ರಮುಖ ಕೆಲಸದತ್ತ ಗಮನಹರಿಸಿ. ನೀವು ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮತೋಲನ ಕಾಪಾಡಲು ಪ್ರಯತ್ನಿಸಿ. ನೀವು ನಿಮ್ಮ ಮಕ್ಕಳ ಬಗ್ಗೆ ಚಿಂತೆ ಕಾಡಬಹುದು, ಅವರ ಭವಿಷ್ಯದ ಬಗ್ಗೆ ನೀವು ತುಂಬಾ ಚಂತೆ ಮಾಡಬಹುದು, ಅವರಿಗೆ ನೀವು ಸೂಕ್ತ ಸಲಹೆ ಸೂಚನೆ ನೀಡಿ, ಅವರ ಜೊತೆ ತಾಳ್ಮೆಯಿಂದ ವರ್ತಿಸಿ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಪ್ರಮುಖ ಕೆಲಸದತ್ತ ಗಮನಹರಿಸಿ, ಯಶಸ್ಸು ಸಿಗಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದಲ್ಲಿ ಒತ್ತಡ ಕಡಿಮೆ ಇರಲಿದೆ, ನೀವು ಕೆಲಸದಲ್ಲಿ ಚಿಕ್ಕ ಬ್ರೇಕ್ ತೆಗೆದುಕೊಂಡು ರಿಲ್ಯಾಕ್ಸ್ ಮೂಡ್‌ಗೆ ಜಾರಬಹುದು.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ. ನೀವು ವೃತ್ತಿ ಬದುಕಿನ ಕಡೆಗೆ ಗಮನಹರಿಸಿ, ಈ ದಿನ ವೃತ್ತಿ ಹಾಗೂ ವೈಯಕ್ತಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಈ ದಿನ ಕುಟುಂಬದ ಜೊತೆಗೆ ಸಂತೋಷದಿಂದ ಕಳೆಯುತ್ತೀರಿ. ನೀವು ನಿಮ್ಮ ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು, ವೃತ್ತಿ ಬದುಕಿನಲ್ಲಿ ಬೆಳೆಯಲು ಹೊಸ ಅವಕಾಶಗಳು ದೊರೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











