Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ನವೆಂಬರ್ 8: ತುಲಾ ರಾಶಿಗೆ ಈ ದಿನ ಅನುಕೂಲಕರ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ ನೋಡೋಣ....
ಮೇಷ ರಾಶಿ
ಈ ದಿನ ನೀವು ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳು ವ್ಯವಹಾರದ ಕಡೆಗೆ ಗಮನಹರಿಸಬೇಕು, ಭಾವನಾತ್ಮಕವಾಗಿ ಈ ದಿನ ದುರ್ಬಲವಾಗಿರಬಹುದು, ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನ , ಯೋಗದ ಕಡೆಗೆ ಗಮನಹರಿಸಬೇಕು.

ವೃಷಭ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು, ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಪ್ರತಿಕೂಲ ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ವರ್ತಿಸಿ. ನೀವು ಕೆಲಸ ಕಾರ್ಯದ ಕಡೆಯೂ ಗಮನಹರಿಸಬೇಕು.
ಮಿಥುನ ರಾಶಿ
ಈ ದಿನ ನೀವು ನೀವಾಡುವ ಮಾತಿನಿಂದ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಬೇಕು. ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ. ಆರೋಗ್ಯಕ್ಕಾಗಿ ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ.
ಕರ್ಕ ರಾಶಿ
ಕುಟುಂಬದ ವಾತಾವರಣ ಅಷ್ಟು ಸರಿಯಿರಲ್ಲ, ಮನೆಯಲ್ಲಿನ ಭಿನ್ನಾಭಿಪ್ರಾಯ ತುಂಬಾನೇ ಮಾನಸಿಕ ಒತ್ತಡ ಉಂಟು ಮಾಡಬಹುದು, ಯಾವುದೇ ಸಮಸ್ಯೆಯಾಗಿರಲಿ, ಕೂತು ಬಗೆಹರಿಸಲು ಪ್ರಯತ್ನಿಸಬೇಕು. ವೃತ್ತಿ ಜೀವ ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ಈ ದಿನ ಯಾವುದೇ ಸಮಸ್ಯೆ ಇರಲ್ಲ, ಕುಟುಂಬದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮಗೆ ಇಷ್ಟವಾದದ್ದನ್ನು ಮಾಡಲು ಈ ದಿನ ನಿಮಗೆ ಅನುಕೂಲಕರವಾಗಿದೆ. ಸಂಬಂಧದ ದೃಷ್ಟಿಯಿಂದಲೂ ಈ ದಿನ ನಿಮಗೆ ಉತ್ತಮವಾಗಿರಲಿದೆ. ಆದರೆ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಕನ್ಯಾ ರಾಶಿ
ನೀವು ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಂಡು ಹೋಗಲು ಪ್ರಯತ್ನಿಸಬೇಕು. ಈ ದಿನ ಹಣದ ವಿಷಯದಲ್ಲಿ ಹೆಚ್ಚಿನ ಜಾಗ್ರತೆವಹಿಸಿ, ಹಣ ಕೊಡುವುದು-ಪಡೆಯುವುದು ಮಾಡಬೇಡಿ, ವೈವಾಹಿಕ ಜೀವನದಲ್ಲಿನ ಭಿನ್ನಾಭಿಪ್ರಾಯ ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಕುಟುಂಬದ ಕಡೆಗೆಗಮನಹರಿಸುತ್ತೀರಿ, ಕೆಲಸದಲ್ಲಿಯೂ ಹೆಚ್ಚಿ ಒತ್ತಡವಿರಲ್ಲ, ಆರೋಗ್ಯ ಚೆನ್ನಾಗಿರಲಿದೆ. ನೀವು ಕುಟುಂಬದ ಜೊತೆ ಹೆಚ್ಚು ಸಮಯ ಕಳೆದರೆ ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಖುಷಿಯಿಂದ ದಿನ ಕಳೆಯುವಿರಿ.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸೇಕು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿಯೂ ಉತ್ತನವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಒಟ್ಟಿನಲ್ಲಿ ಈ ದಿನ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ಕೆಲಸ ಕಾರ್ಯಗಳನ್ನು ಯೋಜನೆಯಂತೆಯೇ ಪೂರ್ಣಗೊಳಿಸುವುದು ಒಳ್ಳೆಯದು, ನೀವು ಆರ್ಥಿಕ ಜೀವನದ ಕಡೆಗೆ ಗಮನಹರಿಸಬೇಕು. ನೀವು ಉಳಿತಾಯದ ಕಡೆಗೆ ಗಮನಹರಿಸಿ. ಈ ದಿನ ಕೋಪ ನಿಯಂತ್ರಿಸಿ.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ದಿನ ನಿಮ್ಮ ನಿರ್ಧಾರಗಳಿಗೆ ಉತ್ತಮ ಫಲ ಸಿಗಲಿದೆ.
ಮೀನ ರಾಶಿ
ಈ ದಿನ ನೀವು ಮಾನಸಿಕ ಒತತಡ ಕಡಿಮೆ ಮಾಡಲು ಗಮನಹರಿಸಬೇಕು, ನೀವು ಕಲ್ಪನೆ ಬಿಟ್ಟು ವಾಸ್ತವದ ಕಡೆಗೆ ಗಮನಹರಿಸಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನ, ವೈವಾಹಿಕ ಬದುಕು ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










