Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ದೀಪಾವಳಿ ಬಳಿಕ ಈ 5 ರಾಶಿಯವರ ಲಕ್ಷ್ಮಿ ಕೃಪೆ ಅಧಿಕವಿರಲಿದೆ, ಆರ್ಥಿಕ ಸಮಸ್ಯೆಗಳಿರಲ್ಲ
ನವೆಂಬರ್ ಮಾಸದ ಮೊದಲ ದಿನವೇ ದೀಪಾವಳಿ ಅದಾದ ಬಳಿಕ ಗೋವರ್ಧನ ಪೂಜೆ, ಕಾರ್ತಿಕ ಪೂಜೆ ಅಂತ ಖರ್ಚುಗಳು ತುಂಬಾ ಇರಲಿದೆ. ಆದರೆ ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ನವೆಂಬರ್ ಮಾಸ 5 ರಾಶಿಗಳಿಗೆ ತುಂಬಾ ಚೆನ್ನಾಗಿರಲಿದೆ. ಈ ರಾಶಿಯವರಿಗೆ ಯಾವುದೇ ಆರ್ಥಿಕ ಸಮಸ್ಯೆಗಳಿರಲ್ಲ.
ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ಆ ಕಾರಣಕ್ಕೆ ಪ್ರಮುಖ ಕೆಲಸದಲ್ಲಿ ಅಡೆತಡೆ ಉಂಟಾಗುವುದಿಲ್ಲ. ಉಳಿತಾಯದ ಬಗ್ಗೆ ಆಲೋಚನೆ ಮಾಡಬಹುದು ಅಥವಾ ಹೂಡಿಕೆಗೆ ಚಿಂತಿಸುತ್ತಿದ್ದರೆ ಆ ಬಗ್ಗೆ ಆಲೋಚಿಸಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಲು ಆಲೋಚಿಸಬಹುದು.
ಈ ರಾಶಿಗಳಲ್ಲಿ ಗುರು ಮತ್ತು ಶುಕ್ರನ ಸ್ಥಾನ ಪ್ರಬಲವಾಗಿದೆ ಈ 5 ರಾಶಿಯವರ ಮೇಲೆ ಲಕ್ಷ್ಮಿ ಕೃಪೆ ಹೆಚ್ಚಿದೆ, ಹಾಗಾಗಿ ಈ ರಾಶಿಯವರು ನವೆಂಬರ್ ಮಾಸದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುವಿರಿ...

ಮೇಷ ರಾಶಿ
ಈ ದೀಪಾವಳಿ ಬಳಿಕ ಮೇಷ ರಾಶಿಯವರಿಗೆ ಗ್ರಹಗಳ ಸ್ಥಾನ ಅನುಕೂಲಕವಾಗಿರುವುದರಿಂದ ಒಳ್ಳೆಯ ಫಲಿತಾಂಶ ಸಿಗಲಿದೆ. ನವೆಂಬರ್ ಮಾಸದಲ್ಲಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಆದಾಯದಲ್ಲಿ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಹಣದ ಹೂಡಿಕೆಗೆ ಈ ಸಮಯ ಉತ್ತಮವಾಗಿದೆ. ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ವೃಷಭ ರಾಶಿ
ನವೆಂಬರ್ ಮಾಸ ವೃಷಭ ರಾಶಿಯವರಿಗೆ ತುಂಬಾನೇ ಪ್ರಯೋಜನಜಕಾರಿಯಾಗಿದೆ. ವೃತ್ತಿ ಜೀವನ ಚೆನ್ನಾಗಿರಲಿದೆ. ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಆ ಕೆಲಸ ಸಿಗಲಿದೆ. ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಸಾಧ್ಯವಾಗಲಿದೆ. ಆರ್ಥಿಕ ದೃಷ್ಟಿಯಂದ ಈ ಸಮಯ ನಿಮಗೆ ಪ್ರಯೋಜನಕಾರಿಯಾಗಿದೆ. ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ನೀವು ಏನಾದರು ಹೊಸ ಹೂಡಿಕೆ ಮಾಡಲು ಆಲೋಚನೆ ಮಾಡುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ:
ನವೆಂಬರ್ ಮಾಸ ಮಿಥುನ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಹಣವನ್ನು ಹೂಡಿಕೆ ಮಾಡಿದರೆ ಲಾಭ ಗಳಿಸುತ್ತೀರಿ. ಹಣದ ಉಳಿತಾಯದ ದೃಷ್ಟಿಯಿಂದಲೂ ಈ ಸಮಯ ಚೆನ್ನಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ಹಣಕ್ಕೆ ಸಂಬಂಧಿಸಿದ ವ್ಯವಹಾರಕ್ಕೆ ಯಾವುದೇ ಅಡೆತಡೆ ಇರಲ್ಲ.
ಕನ್ಯಾ ರಾಶಿ
ವೃತ್ತಿ ಬದುಕಿನಲ್ಲ ಉತ್ತಮ ಪ್ರಯೋಜನ ಪಡೆಯುತ್ತೀರಿ, ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ಆದಾಯದ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನೀವು ಯಾವುದಾದರು ವಸ್ತು ಖರೀದಿಸಲು ಬಯಸಿದರೆ ಈ ಅವಧಿಯಲ್ಲಿ ಖರೀದಿ ಮಾಡಲು ಸಾಧ್ಯವಾಗಲಿದೆ. ಹೀಗಾಗಿ ಈ ತಿಂಗಳು ತುಂಬಾ ಖುಷಿಯಾಗಿರುತ್ತದೆ, ಆರ್ಥಿಕ ಸ್ಥಿತಿ ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಿಸಲಿದೆ.
ವೃಶ್ಚಿಕ ರಾಶಿ
ನವೆಂಬರ್ ಮಾಸ ವೃಶ್ಚಿಕ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಪ್ರಯೊಜನ ಪಡೆಯುತ್ತೀರಿ. ಹಣದ ಹೂಡಿಕೆಗೆ ಈ ಸಮಯ ಅನುಕೂಲಕರವಾಗಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಲು ಯೋಚನೆ ಮಾಡಬಹುದು. ಈ ಅವಧಿಯಲ್ಲಿ ನೀವು ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ಪಡೆಯುತ್ತೀರಿ.
ಗ್ರಹಗಳ ಸ್ಥಾನ ಈ 5 ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ, ಇತರ ರಾಶಿಗಳಿಗೆ ಮಿಶ್ರ ಫಲ, ಅದರಲ್ಲಿಯೂ ಕರ್ಕ, ಸಿಂಹ, ತುಲಾ, ಕುಂಭ, ಮೀನ ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು, ಈ ರಾಶಿಯವರು ಯಾವುದೇ ಹೂಡಿಕೆಗೆ ಸೂಕ್ತವಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications