Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ನವೆಂಬರ್ ತಿಂಗಳಿನಲ್ಲಿ ವಿವಾಹಿತರ, ಪ್ರೇಮಿಗಳ ಪ್ರೀತಿ ಭವಿಷ್ಯ ಹೇಗಿರಲಿದೆ?
ವರ್ಷದ 11ನೇ ತಿಂಗಳು ಶುರುವಾಗಿದೆ, ಈ ನವೆಂಬರ್ ಮಾಸದ ರಾಶಿಫಲ ನೋಡುವುದಾದರೆ ಗ್ರಹಗತಿಗಳ ಸ್ಥಾನದ ಪ್ರಕಾರ ಕೆಲ ರಾಶಿಗಳಿಗೆ ಅನುಕೂಲಕರವಾಗಿದ್ದರೆ ಇನ್ನು ಕೆಲ ರಾಶಿಯವರು ಜಾಗ್ರತೆವಹಿಸಬೇಕು. ಈ ಮಾಸ ನಿಮ್ಮ ಪ್ರೀತಿ ಜೀವನ ಹೇಗಿರಲಿದೆ? ವ ವೈವಾಹಿಕ ಬದುಕು ಹೇಗಿರಲಿದೆ? ಅವಾಹಿತರಿಗೆ ಮದುವೆ ಸಂಬಂಧ ಬರಲಿದೆಯೇ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಸಂಬಂಧದ ದೃಷ್ಟಿಯಿಂದ ಈ ಮಾಸ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಪ್ರೀತಿ, ಸಾಮರಸ್ಯ ಹೆಚ್ಚಾಗಲಿದೆ. ಪ್ರೇಮಿಗಳಿಗೂ ಈ ಸಮಯ ಉತ್ತಮವಾಗಿದೆ. ಮದುವೆಯ ತೀರ್ಮಾನ ಕೂಡ ಮಾಡಬಹುದು. ಅವಾಹಿತರಿಗೆ ಮದುವೆ ಸಂಬಂಧ ಬರಲಿದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ಸ್ವಲ್ಪ ಏರಳಿತವಿರಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು. ಸಮಸ್ಯೆ ದೊಡ್ಡದು ಮಾಡದೆ ಮಾತನಾಡಿ ಬಗೆಹರಿಸಲು ಪ್ರಯತ್ನ ಹಾಕಿ. ಅವಾಹಿತರಿಗೆ ಮದುವೆ ಸಂಬಂಧ ಬಂದರೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ.
ಮಿಥುನ ರಾಶಿ
ಕುಟುಂಬದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮ್ಮ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಕೆ ಕಾಣಬಹುದು. ಪ್ರೇಮಿಗಳಿಗೂ ಈ ಅವಧಿ ಚೆನ್ನಾಗಿರಲಿದೆ.
ಕರ್ಕ ರಾಶಿ
ವೃತ್ತಿ ಬದುಕು, ಆರ್ಥಿಕ ಬದುಕಿನಲ್ಲಿ ಕೆಲ ಸವಾಲುಗಳಿದ್ದರೂ ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ, ಪ್ರತಿಕೂಲ ಸಂದರ್ಭದಲ್ಲಿ ಸಂಗಾತಿಯ ಬೆಂಬಲ ಸಿಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರು ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯಗಳು ಬರಬಹುದು, ಈ ಬಗ್ಗೆ ಜಾಗ್ರತೆವಹಿಸಿ, ಚಿಕ್ಕ ಪುಟ್ಟ ವಿಷಯ ನಿರ್ಲಕ್ಷ್ಯ ಮಾಡಿದರೆ ಒಳ್ಳೆಯದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಸಂಬಂಧದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ.
ತುಲಾ ರಾಶಿ
ನವೆಂಬರ್ ಮಾಸ ತುಲಾ ರಾಶಿಯವರಿಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ, ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಸಂಬಂಧದ ದೃಷ್ಟಿಯಿಂದ ನವೆಂಬರ್ ಮಾಸ ಅನುಕೂಲಕರವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಕುಟುಂಬ ಜೀವದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ಕೆಲ ವಿಷಯಗಳಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಚಿಕ್ಕ ವಿಷಯ ಸಂಬಂಧವನ್ನು ಹಾಳು ಮಾಡಬಹುದು, ಈ ಬಗ್ಗೆ ಜಾಗ್ರತೆವಹಿಸಿ.
ಮಕರ ರಾಶಿ
ಕುಟುಂಬ ಜೀವನದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಪ್ರೇಮಿಗಳು ಮದುವೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಈ ಅವಧಿ ಅನುಕೂಲಕರವಾಗಿದೆ.
ಕುಂಭ ರಾಶಿ
ಸಂಬಂಧದ ದೃಷ್ಟಿಯಿಂದ ನವೆಂಬರ್ ಮಾಸ ಕುಂಭ ರಾಶಿಯವರಿಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಮನೆಯಲ್ಲಿ ಸಂತೋಷ ಇರಲಿದೆ. ಇಬ್ಬರು ಚಿಕ್ಕ ಟ್ರಿಪ್ ಪ್ಲ್ಯಾನ್ ಮಾಡಬಹದು.
ಮೀನ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಮೀನ ರಾಶಿಯವರಿಗೆ ಈ ಅವಧಿಯಲ್ಲಿ ಕುಟುಂಬದ ಕಡೆಗೆ ಸ್ವಲ್ಪ ಗಮನಹರಿಸಲು ಸಲಹೆ ನೀಡಲಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಏನೇಸಮಸ್ಯೆ ಉಂಟಾದರು ಬಗೆಹರಿಸಲು ಪ್ರಯತ್ನ ಹಾಕಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications