Latest Updates
-
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು
ಸಂಖ್ಯಾಶಾಸ್ತ್ರ ಪ್ರಕಾರ ಫೆಬ್ರವರಿ ಮಾಸ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಫೆಬ್ರವರಿ ಮಾಸ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 (ಜನ್ಮ ಸಂಖ್ಯೆ 1, 10, 19, 28 )
ಈ ತಿಂಗಳಿನಲ್ಲಿ ಆರ್ಥಿಕ ತೊಂದರೆ ಕೆಲಸದಲ್ಲಿ ಅಡೆತಡೆಗಳಿರಬಹುದು. ಆದರೆ ತುಂಬಾ ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಕಠಿಣ ಶ್ರಮಕ್ಕೆ ಖಂಡಿತ ಫಲ ಸಿಗಲಿದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ.
ಅದೃಷ್ಟದ ಸಂಖ್ಯೆ - 21
ಅದೃಷ್ಟದ ಬಣ್ಣ - ಕಿತ್ತಳೆ

ಸಂಖ್ಯೆ 2 (ಜನ್ಮ ಸಂಖ್ಯೆ 2, 11, 20, 29)
ಅವಾಹಿತರಿಗೆ ಸಂಬಂಧ ಕೂಡಿ ಬರಲಿದೆ, ನೀವು ನಿಮ್ಮ ಕೆಲಸವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಸಂಖ್ಯೆ-11
ಅದೃಷ್ಟದ ಬಣ್ಣ- ಕಂದು
ಸಂಖ್ಯೆ 3 (ಜನ್ಮ ಸಂಖ್ಯೆ 3, 12, 21, 30 )
ಕೆಲಸದಲ್ಲಿ ನಿಮಗೆ ಹೊಸ ಅವಕಾಶಗಳು ದೊರೆಯಲಿದೆ. ನಿಮ್ಮ ಕೌಶಲ್ಯಗೆ ಮನ್ನಣೆ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಸಂಖ್ಯೆ- 19
ಅದೃಷ್ಟದ ಬಣ್ಣ - ಹಸಿರು
ಸಂಖ್ಯೆ 4 (ಜನ್ಮ ಸಂಖ್ಯೆ 4, 13, 22, 31 )
ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದನಿಸಬಹುದು, ಆದರೆ ನಿಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿದ್ದರೆ ಮುಕ್ತವಾಗಿ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಅದೃಷ್ಟದ ಸಂಖ್ಯೆ-23
ಅದೃಷ್ಟದ ಬಣ್ಣ- ಹಳದಿ
ಸಂಖ್ಯೆ 5 (ಜನ್ಮ ಸಂಖ್ಯೆ 5, 14, 23)
ಈ ಸಮಯದಲ್ಲಿ ನೀವು ಯಾರನ್ನೂ ನಂಬಲು ಹೋಗಬೇಡಿ. ನಿಮ್ಮ ಬುದ್ಧಿವಂತಿಕೆ ಮತ್ತು ನಿಮ್ಮ ಕುಟುಂಬದ ಸದಸ್ಯರ ಸಲಹೆಯೊಂದಿಗೆ, ನೀವು ನಿಮ್ಮ ಸೋಲನ್ನು ಗೆಲುವಾಗಿ ಪರಿವರ್ತಿಸಬಹುದು.
ಅದೃಷ್ಟದ ಸಂಖ್ಯೆ - 9
ಶುಭ ಬಣ್ಣ - ಕೇಸರಿ
ಸಂಖ್ಯೆ 6 (ಜನ್ಮ ಸಂಖ್ಯೆ 6, 15, 24)
ಈ ಅವಧಿಯಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಕುಟುಂಬ ಜೀವ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿಯೂ ಈ ಅವಧಿ ಅನುಕೂಲಕರವಾಗಿದೆ.
ಅದೃಷ್ಟದ ಸಂಖ್ಯೆ-16
ಅದೃಷ್ಟದ ಬಣ್ಣ- ನೀಲಿ
ಸಂಖ್ಯೆ 7 (ಜನ್ಮ ಸಂಖ್ಯೆ 7, 16 , 25 )
ಈ ತಿಂಗಳಿನಲ್ಲಿ ನೀವು ಮಾಡುವ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಫಲಿತಾಂಶವನ್ನು ಪಡೆಯುತ್ತೀರಿ. ನೀವು ಹೊಸ ಅವಕಾಶಗಳನ್ನು ಸಹ ಪಡೆಯುತ್ತೀರಿ, ಅದು ನಿಮ್ಮನ್ನು ಆರ್ಥಿಕವಾಗಿ ಸದೃಢಗೊಳಿಸುತ್ತದೆ. ಈ ತಿಂಗಳು ನಿಮ್ಮ ಖರ್ಚು ಹೆಚ್ಚಾಗಬಹುದು. ಅನಾವಶ್ಯಕ ಖರ್ಚು ಮಾಡದಂತೆ ಎಚ್ಚರ ವಹಿಸಬೇಕು. ನಿಮ್ಮ ಸಂಬಂಧಗಳಲ್ಲಿ ಪಾರದರ್ಶಕವಾಗಿರಿ. ಆರೋಗ್ಯದ ದೃಷ್ಟಿಯಿಂದ ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಸಂಖ್ಯೆ - 18
ಅದೃಷ್ಟದ ಬಣ್ಣ - ಬೂದು
ಸಂಖ್ಯೆ 8 (8, 17, 26)
ಫೆಬ್ರವರಿ ತಿಂಗಳು ನಿಮಗೆ ಸ್ವಲ್ಪ ಕಷ್ಟವಾಗಬಹುದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶಗಳನ್ನು ಪಡೆಯದಿದ್ದರೆ ನೀವು ನಿರಾಶೆಗೊಳ್ಳಬಹುದು. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಈ ಸಮಯವು ನಿಮಗೆ ತುಂಬಾ ಒಳ್ಳೆಯದು. ನೀವು ಉದ್ಯೋಗದಲ್ಲಿದ್ದರೂ, ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ಈ ತಿಂಗಳು ಪ್ರೇಮಿಗಳಿಗೆ ಉತ್ತಮವಾಗಿರುತ್ತದೆ, ಆದರೆ ನಿಮ್ಮ ಸಂಗಾತಿಯಿಂದ ನಿಮ್ಮ ನಿರೀಕ್ಷೆಗಳು ಈಡೇರದಿದ್ದರೆ ನೀವು ದುಃಖಿತರಾಗಬಹುದು. ವಿವಾಹಿತರಿಗೆ ಈ ತಿಂಗಳು ಉತ್ತಮವಾಗಿರುತ್ತದೆ.
ಅದೃಷ್ಟದ ಸಂಖ್ಯೆ-6
ಶುಭ ಬಣ್ಣ- ಕೆಂಪು
ಸಂಖ್ಯೆ 9 (9, 18, 27)
ಈ ತಿಂಗಳು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ನೀವು ಯಾವುದೇ ಕೆಲಸವನ್ನು ಆತುರದಿಂದ ಮಾಡಬೇಡಿ, ನಿಮ್ಮ ಕೋಪವನ್ನು ನಿಯಂತ್ರಿಸದಿದ್ದರೆ, ನೀವು ಕೆಟ್ಟ ಪರಿಣಾಮಗಳನ್ನು ಅನುಭವಿಸಬೇಕಾಗಬಹುದು. ಈ ತಿಂಗಳು ನಿಮ್ಮ ಸಂಗಾತಿಯೊಂದಿಗೆ ಪ್ರಣಯ ಪ್ರವಾಸಕ್ಕೆ ಹೋಗುವ ಅವಕಾಶವನ್ನು ನೀವು ಪಡೆಯಬಹುದು. ಆರೋಗ್ಯದ ವಿಷಯದಲ್ಲಿ, ಕಳೆದ ತಿಂಗಳಿಗಿಂತ ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಸಂಖ್ಯೆ-29
ಅದೃಷ್ಟದ ಬಣ್ಣ - ಗುಲಾಬಿ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications