Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಜನವರಿ 2025 ನಿಮಗೆ ಹೇಗಿರಲಿದೆ? ಶುಭವೇ?
ಸಂಖ್ಯಾಶಾಸ್ತ್ರದ ಪ್ರಕಾರ ಜನವರಿ ಮಾಸ ನಿಮ್ಮ ಜನ್ಮ ಸಂಖ್ಯೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)
ಸಂಖ್ಯಾಶಾಸ್ತ್ರ ಜನವರಿ ಮಾಸವು ನಿಮಗೆ ಅನುಕೂಲಕರವಾಗಿದೆ ಎಂದು ಹೇಳುತ್ತಿದೆ. ಆದರೆ ನೀವು ಭಾವನಾತ್ಮಕವಾಗಿ ಸ್ವಲ್ಪ ದುರ್ಬಲವಾಗಿರಬಹುದು, ಮನಸ್ಸಿನ ಮಾತು ಬದಲಿಗೆ ಬುದ್ಧಿ ಮಾತು ಕೇಳಿ. ವ್ಯಾಪಾರಸ್ಥರು ಅನುಕೂಲಕರ ಪ್ರಯೋಜನ ಪಡೆಯಬಹುದು. ಕೆಲಸ ಕಾರ್ಯದಲ್ಲಿ ಈ ಮಾಸ ಉತ್ತಮವಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ಮಾಸ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆದರೆ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು, ವೈಯಕ್ತಿಕ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡಬೇಡಿ, ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12, 21, 30)
ಈ ಮಾಸ ಮಿಶ್ರಫಲ, ಕೆಲವು ಸವಾಲುಗಳು ಬರಬಹುದು. ಆದರೆ ಆತ್ಮವಿಶ್ವಾಸದಿಂದ ಎದುರಿಸಿ, ಕೆಲವೊಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ, ಈ ಮಾಸ ನಿಮಗೆ ಹಣಕಾಸಿನ ವಿಷಯದಲ್ಲಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಕೆಲ ಸಮಸ್ಯೆಗಳು ಬರಬಹುದು, ತಾಳ್ಮೆಯಿಂದ ಬಗೆಹರಿಸಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ಸಂಖ್ಯಾಶಾಸ್ತ್ರ ಪ್ರಕಾರ ಸಂಖ್ಯೆ 4ಕ್ಕೆ ಮಿಶ್ರಫಲ. ವೃತ್ತಿ ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಇತರರ ಮೇಲೆ ಹೆಚ್ಚು ಅವಲಂಬಿಸದೆ ನಿಮ್ಮ ಕೆಲಸವನ್ನು ನೀವೇ ಮಾಡುವುದು ಒಳ್ಳೆಯದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಈ ತಿಂಗಳು ವೃತ್ತಿ ಬದುಕಿನಲ್ಲಿ ಕೆಲ ಸಮಸ್ಯೆಗಳಿರಬಹುದು, ಆದರೆ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ. ವೈವಾಹಿಕ ಬದುಕಿನಲ್ಲಿ ಕೆಲ ವಿವಾದ ತಪ್ಪಿಸುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು, ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ. ಆರ್ಥಿಕ ದೃಷ್ಟಿಯಿಂದ ಈ ಮಾಸ ನಿಮಗೆ ಅನುಕೂಲಕರವಾಗಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ಮಾಸ ನೀವು ಹಣದ ವಿಷಯದಲ್ಲಿ ಲಾಭ, ನಷ್ಟ ಅರಿತುಕೊಳ್ಳಲು ಸಾಧ್ಯವಾಗುವುದು. ಹೂಡಿಕೆಯಲ್ಲಿ ಲಾಭ ದೊರೆಯಲಿದೆ. ವ್ಯಾಪಾರಿಗಳು ಕೂಡ ಈ ಮಾಸ ಉತ್ತಮ ಪ್ರಯೋಜನ ಪಡೆಯಬಹುದು. ಕೆಲಸ ಕಾರ್ಯಗಳು ನೀವು ಯೋಚಿಸಿದಂತೆಯೇ ನಡೆಯಲಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಈ ಮಾಸ ಕೆಲಸ ಕಾರ್ಯಗಳು ಸ್ವಲ್ಪ ನಿಧಾನವಾಗುವುದು. ಈ ಮಾಸ ಕೆಲವರ ಸ್ವಭಾವ ತಿಳಿದು ಬರಲು ಸಲಹೆ ನೀಡಲಾಗುವುದು, ಹಿತೈಷಿಗಳಂತೆ ನಟಿಸುವವರು ಯಾರು ಎಂದು ತಿಳಿದು ಬರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಹಿರಿಯರ ಸಲಹೆ ಪಾಲಿಸಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಈ ಮಾಸ ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು. ಆತುರದಿಂದ ಯಾವುದೇ ಕೆಲಸ ಮಾಡಬೇಡಿ, ನಿರ್ಧಾರವಾದರೂ ಸರಿ ಆಲೋಚಿಸಿ ತೆಗೆದುಕೊಳ್ಳಬೇಕು. ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಖರ್ಚು ಹೆಚ್ಚಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಜನವರಿ ಮಾಸ ನಿಮಗೆ ಅದೃಷ್ಟಕರ, ಕೆಲಸ ಕಾರ್ಯಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಹೊಸ ಕೆಲಸ ಕಾರ್ಯ ಪ್ರಾರಂಭಿಸಲು ಈ ಮಾಸ ಉತ್ತಮವಾಗಿದೆ. ಆರ್ಥಿಕ ದೃಷ್ಟಿಯಿಂದ ಕೂಡ ಈ ಅವಧಿ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ಮಾಸ ಎಲ್ಲಾ ರೀತಿಯಿಂದಲೂ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications