Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಫೆಬ್ರವರಿ ಮಾಸ ನಿಮಗೆ ಹೇಗಿರಲಿದೆ?
ನೀವು ಹುಟ್ಟಿದ ದಿನಾಂಕದ ಪ್ರಕಾರ ಮಾಸ ಭವಿಷ್ಯ ನೀಡಲಾಗಿದೆ, ಸಂಖ್ಯಾಶಾಸ್ತ್ರದ ಪ್ರಕಾರ ಫೆಬ್ರವರಿ ಮಾಸ ನಿಮಗೆ ಹೇಗಿರಲಿದೆ ಎಂದು ನೋಡೋಣ...
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಫೆಬ್ರವರಿ ಮಾಸ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಯಾವುದೇ ಕೆಲಸವನ್ನು ಅತಿಯಾದ ಆತ್ಮವಿಶ್ವಾಸದಿಂದ ಮಾಡಬೇಡಿ. ಆರ್ಥಿಕವಾಗಿ ತುಂಬಾ ಪ್ರಗತಿ ಹೊಂದುತ್ತೀರಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ಮಾಸ ನೀವು ಮೋಸ ಹೋಗದಂತೆ ಜಾಗ್ರತೆವಹಿಸಿ, ಹಣದ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಿ, ಯಾವುದೇ ವ್ಯವಹಾರ ಮಾಡುವುದಾದರೆ ನೀವು ಚೆನ್ನಾಗಿ ವಿಚಾರ ಮಾಡಿ ಹೂಡಿಕೆ ಮಾಡಬೇಕು. ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ಮಾಸ ಕೆಲವೊಂದು ಅಡೆತಡೆಗಳು ಪ್ರಾರಂಭದಲ್ಲಿ ಎದುರಾಗಬಹುದು, ಆದರೆ ನೀವು ನಿಮ್ಮ ಶ್ರಮಕ್ಕೆ ಪ್ರತಿಫಲ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಅಲ್ಲದೆ ವೈಯಕ್ತಿಕ ಬದುಕಿನಲ್ಲಿ ಕೆಲ ಧನಾತ್ಮಕ ಬದಲಾವಣೆ ಕಂಡು ಬರಬಹುದುಉ. ವ್ಯಾಪಾರಸ್ಥರು ವ್ಯಾಪಾರದಲ್ಲಿ ಬೆಳವಣಿಗೆ ಕಾಣಬಹುದು. ಕುಟುಂಬ ಜೊತೆ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗಲಿದೆ.
ಸಂಖ್ಯೆ 4( ಹುಟ್ಟಿದ ದಿನಾಂಕ 4,13,22,31)
ಮಹಿಳೆಯ ಜೊತೆ ವಿವಾದ ಉಂಟು ಮಾಡದಂತೆ ಸಲಹೆ ನೀಡಲಾಗುವುದು.ಸಂಬಂಧದಲ್ಲಿ ನಿಯತ್ತಿನಿಂದ ಇರಿ, ನಿಮ್ಮಿಂದ ನಿಮ್ಮ ಸಂಗಾತಿಯ ಮನಸ್ಸಿಗೆ ನೋವಾಗದಂತೆ ಜಾಗ್ರತೆವಹಿಸಿ. ಮನೆಯ ವಾತಾವರಣ ಶಾಂತವಾಗಿರಿಸಲು ನೀವು ಪ್ರಯತ್ನ ಹಾಕಿ, ವೈವಾಹಿಕ ಜೀವನದ ಸಮಸ್ಯೆಗಳನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ. ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ಮಾಸ ಯಾರು ಒಳ್ಳೆಯವರು, ಯಾರು ಒಳ್ಳೆಯವರಂತೆ ಮುಖವಾಡ ಹಾಕಿದ್ದಾರೆ ಎಂಬುವುದನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಕೆಲಸದಲ್ಲಿ ಈ ಮಾಸ ನಿಮಗೆ ಉತ್ತಮವಾಗಿದೆ, ಕೆಲಸ ಕಾರ್ಯವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಇನ್ನು ಈ ಮಾಸ ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ಮಾಸ ವ್ಯಾಪಾರಸ್ಥರು ಹೆಚ್ಚು ಜಾಗ್ರತೆವಹಿಸಿ, ಲಾಭ ಗಳಿಸಲು ಈಗ ಸ್ವಲ್ಪ ತಡವಾಗುವುದು, ಆದರೆ ನಿರಾಸೆ ಬೇಡ, ಇದರ ಫಲ ಖಂಡಿತ ಪಡದೇ ಪಡೆಯುವಿರಿ. ಹೊಸ ವ್ಯಾಪಾ ಯೋಜನೆಗೆ ಈ ಅವಧಿ ಉತ್ತಮವಾಗಿದೆ, ಉದ್ಯೋಗಿಗಳಿಗೆ ಕೆಲಸ ಬದಲಾಯಿಸಲು ಬಯಸಿದರೆ ಈ ಅವಧಿಯಲ್ಲಿ ಉತ್ತಮ ಅವಕಾಶ ದೊರೆಯಲಿದೆ. ವೈಯಕ್ತಿಕ ಜೀವನದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ.
ಸಂಖ್ಯೆ 7(ಹುಟ್ಟಿದ ದಿನಾಂಕ 7,16,25)
ಈ ಮಾಸ ನಿಮ್ಮ ಒಡಹುಟ್ಟಿದವರ ಸಹಾಯದಿಂದ ಪ್ರಮುಖ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ನಿಮ್ಮ ಕೆಲಸ ಕಾರ್ಯವು ಯಶಸ್ವಿಯಾಗಿ ಪೂರ್ಣವಾಗಲಿದೆ. ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಉತ್ತಮವಾಗಿರಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ನಿಮ್ಮ ತಂದೆಯ ಆರೋಗ್ಯದ ಕಡೆಗೆ ಗಮನಹರಿಸಿ, ಅವರ ಆರೈಕೆ ಕಡೆಗೆ ಗಮನಹರಿಸಿ. ನಿಮ್ಮ ವೃತ್ತಿ ಜೀವನದ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ಮಾಸ ಖರ್ಚು ಹೆಚ್ಚಿರಲಿದೆ, ಕುಟುಂಬಕ್ಕೆ ಹೆಚ್ಚು ಸಮಯ ಕೊಡುವುದರಿಂದ ಮನೆಯಲ್ಲಿ ಖುಷಿ ಇರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆ ಎದುರಾಗಬಹುದು. ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲ್ಲ ಎಂದು ಒತ್ತಡ ಉಂಟಾಗಬಹುದು. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಆದರೆ ತಾಳ್ಮೆಯಿಂದ ಬಗೆಹರಿಸಲು ಸಾಧ್ಯವಾಗಲಿದೆ. ಈ ಮಾಸ ತಾಳ್ಮೆಯಿಂದ ಇದ್ದಷ್ಟೂ ನಿಮಗೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications