Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
07 October Horoscope: ದಿಢೀರ್ ಹಣ ಖರ್ಚಾಗಬಹುದು, ಪ್ರಯಾಣ ಸಂಭವ!
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 07 (07 October Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಶುಭದಾಯಕ ದಿನ. ವೃತ್ತಿಯಲ್ಲಿ ಉನ್ನತಿಗೆ ಹಲವು ಅವಕಾಶಗಳು ದೊರೆಯಲಿವೆ. ಕುಟುಂಬದ ಸಲಹೆಗಳನ್ನು ನಿರ್ಲಕ್ಷಿಸಬೇಡಿ. ಹೊಸ ಪಾಲುದಾರಿಕೆಗಳು ವ್ಯಾಪಾರ ಮಾಡುವ ಜನರನ್ನು ಆಕರ್ಷಿಸಬಹುದು.
ವೃಷಭ ರಾಶಿ
ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಕುಟುಂಬದೊಂದಿಗೆ ಮೋಜಿನ ಕ್ಷಣಗಳನ್ನು ಆನಂದಿಸುವಿರಿ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಇರಲಿದೆ. ಆಪ್ತರಿಂದ ಹಣಕಾಸಿನ ಬೆಂಬಲ ಇದೆ.

ಮಿಥುನ ರಾಶಿ
ಇಂದು ಹೊಸ ಯೋಜನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಜೀವನದಲ್ಲಿ ಶಕ್ತಿ ಮತ್ತು ಉತ್ಸಾಹದ ವಾತಾವರಣ ಇರುತ್ತದೆ. ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ. ಪ್ರತಿದಿನ ಯೋಗ ಮತ್ತು ವ್ಯಾಯಾಮ ಮಾಡುವುದು ಉತ್ತಮ. ಸಹೋದರರೊಂದಿಗೆ ಮನಸ್ತಾಪಗಳಿರಬಹುದು.
ಕರ್ಕ ರಾಶಿ
ಇಂದು ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಅದರಲ್ಲೂ ಉದರ ಸಂಬಂಧಿ ಸಮಸ್ಯೆಗಳಿಂದ ನೋವು ಅನುಭವಿಸಬಹುದು. ಅನೇಕ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ವೃತ್ತಿಪರ ಜೀವನದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ನಿಮ್ಮ ದೈಹಿಕ ಆರೋಗ್ಯದ ಕಡೆ ಗಮನ ಕೊಡುವುದು ಉತ್ತಮ. ವೃತ್ತಿಪರ ಜೀವನದಲ್ಲಿ ನೀವು ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ.
ಕನ್ಯಾ ರಾಶಿ
ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಆದರೆ ಕೌಟುಂಬಿಕ ಜವಾಬ್ದಾರಿಗಳೂ ಹೆಚ್ಚಾಗುತ್ತವೆ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಿ. ವ್ಯಾಪಾರಿಗಳಿಗೆ ಉತ್ತಮ ದಿನ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಇಂದು ಮಿಶ್ರ ಫಲದ ದಿನ. ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನೀವು ಎಲ್ಲಾ ಕ್ಷೇತ್ರಗಳಲ್ಲಿ ಅಪೇಕ್ಷಿತ ಯಶಸ್ಸನ್ನು ಪಡೆಯುತ್ತೀರಿ. ಪ್ರಯಾಣಗಳ ಮಾಡಬೇಕಾಗುತ್ತದೆ.
ವೃಶ್ಚಿಕ ರಾಶಿ
ಇಂದು ನಿಮಗೆ ಶುಭ ದಿನವಾಗಲಿದೆ. ಹಳೆಯ ಹೂಡಿಕೆಗಳಿಂದ ಆರ್ಥಿಕ ಲಾಭವಿದೆ. ವೃತ್ತಿ ಜೀವನದಲ್ಲಿ ಪ್ರಗತಿಗೆ ಹಲವು ಅವಕಾಶಗಳಿವೆ. ಕೆಲವರು ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸಹ ಹೊರಡುವ ಕುರಿತಾಗಿ ಆಲೋಚಿಸಬಹುದು. ಪೂರ್ವ ನಿಗದಿತ ಕೆಲಸದಲ್ಲಿ ಭಾಗಿಯಾಗುತ್ತೀರಿ.
ಧನು ರಾಶಿ
ಧನು ರಾಶಿ ಜನರಿಗೆ ಇಂದು ಆರ್ಥಿಕ ಲಾಭದ ಸಾಧ್ಯತೆಗಳಿವೆ. ದೊಡ್ಡ ಬದಲಾವಣೆಗಳಿಗೆ ಸಿದ್ಧರಾಗಿ. ದೈಹಿಕ ಆರೋಗ್ಯದ ಕಡೆ ಗಮನ ಕೊಡಿ. ಉಳಿತಾಯದ ಕಡೆಗೆ ಹೆಚ್ಚು ಗಮನವಿಡಿ. ಪ್ರಯಾಣಗಳ ಮಾಡಬೇಕಾಗಬಹುದು.
ಮಕರ ರಾಶಿ
ಮಕರ ರಾಶಿಯವರಿಗೆ ಇಂದು ಮಿಶ್ರ ಫಲ ದಿನ. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿಯು ಸದೃಢವಾಗಲಿದೆ. ಆದ್ರೆ ನಿಮ್ಮ ಕೆಲವು ನಿರ್ಧಾರಗಳಿಂದ ಭವಿಷ್ಯದ ಸಮಸ್ಯೆಗಳಿಗೆ ಕಾರಣವಾಗಬಹುದು. ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಇಂದು ಉತ್ತಮ ದಿನವಾಗಿದೆ. ನೀವು ಯಾರಿಗಾದರೂ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ವಿಪರೀತ ಖರ್ಚುಗಳಿಂದ ಒತ್ತಡವು ಎದುರಾಗಬಹುದು. ವ್ಯಾಪಾರಿಗಳಿಗೆ ಇಂದು ಉತ್ತಮ ದಿನವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಇಂದು ಉತ್ತಮ ದಿನವಾಗುತ್ತಿದೆ. ಹಣದ ವಿಚಾರದಲ್ಲಿ ನಿಮ್ಮ ಸಂಗಾತಿಯಿಂದ ಸಲಹೆ ಪಡೆಯುವುದು ಒಳ್ಳೆಯದು.. ಆದಾಯವನ್ನು ಹೆಚ್ಚಿಸಿಕೊಳ್ಳಲು ಹಲವು ಸುವರ್ಣಾವಕಾಶಗಳಿರುತ್ತವೆ. ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ.



Click it and Unblock the Notifications