Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
08 October Horoscope: ವಾಹನ ಪ್ರಯಾಣ ನಿಮಗೆ ಕಷ್ಟ ತರಬಹುದು!
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 08 (08 October Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಮಂದಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ನಿಮ್ಮ ಕುಟುಂಬದೊಂದಿಗೆ ಸಂತೋಷದ ಕ್ಷಣ ಕಳೆಯುತ್ತೀರಿ. ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ಪ್ರಗತಿ ಹೊಂದುವಿರಿ. ಸಹೋದ್ಯೋಗಿಗಳು ಕಚೇರಿಯಲ್ಲಿ ಬೆಂಬಲವನ್ನು ಪಡೆಯುತ್ತಾರೆ. ಹಲವು ದಿನದಿಂದ ಬಯಸಿದ್ದ ವಸ್ತು ಖರೀದಿಸಬಹುದು.
ವೃಷಭ ರಾಶಿ
ಇಂದು ವೃಷಭ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕುಟುಂಬ ಜೀವನ ಸಂತೋಷವಾಗಿರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆಯಬಹುದು. ನಿಮ್ಮ ಮಾತುಕತೆಯಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಿ. ಹಳೆಯ ಹೂಡಿಕೆಗಳಿಂದ ಆರ್ಥಿಕ ಲಾಭ ಪಡೆಯಬಹುದು.

ಮಿಥುನ ರಾಶಿ
ನಿಮಗಿಂದು ಮಿಶ್ರಫಲದ ದಿನ. ಇಂದು ನಿಮ್ಮ ಮಾನಸಿಕ ಆರೋಗ್ಯ ಹದಗೆಡಬಹುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ದಾಂಪತ್ಯದಲ್ಲಿ ಮಾಧುರ್ಯತೆ ಇರಲಿದೆ.
ಕರ್ಕ ರಾಶಿ
ಇಂದು ಹಣಕಾಸಿನ ವಿಷಯಗಳಲ್ಲಿ ಅದೃಷ್ಟವು ನಿಮಗೆ ಅನುಕೂಲಕರವಾಗಿರುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನವಾಗಲಿದೆ. ಉದರ ಸಂಬಂಧಿ ಸಮಸ್ಯೆಗಳಿಂದ ಮುಕ್ತರಾಗುವ ಅವಕಾಶವಿದೆ. ಕುಟುಂಬದಲ್ಲಿ ಹಣದ ಸಮಸ್ಯೆ ಬಗೆಹರಿಯಲಿದೆ.
ಸಿಂಹ ರಾಶಿ
ಇಂದು ಹಣಕಾಸಿನ ವಿಷಯಗಳಲ್ಲಿ ನೀವು ಅದೃಷ್ಟವಂತರು. ಚಿಂತನಶೀಲವಾಗಿ ಮಾಡಿದ ಹೂಡಿಕೆಯು ಉತ್ತಮ ಲಾಭ ತರಲಿದೆ. ಪ್ರೀತಿ ಪ್ರೇಮದ ವಿಚಾರದಲ್ಲಿ ಮಧುರವಾದ ದಿನ. ಪ್ರಯಾಣ ಮಾಡಬಹುದು. ನಿಮ್ಮ ವಾಹನವನ್ನು ಬೇರೆಯವರ ಬಳಕೆಗೆ ನೀಡುವಾಗ ಎಚ್ಚರಿಕೆ ಇಡಿ.
ಕನ್ಯಾ ರಾಶಿ
ಇಂದು ತುಲಾ ರಾಶಿಯ ಜನರು ವ್ಯಾಪಾರದಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಪ್ರಯಾಣಗಳಲ್ಲಿ ಸುಖವಿದೆ. ಆರ್ಥಿಕವಾಗಿ ನಿಮ್ಮ ಕ್ಷೇತ್ರದಲ್ಲಿ ಲಾಭವಿದೆ. ವಾಹನ ಸಂಬಂಧಿ ಖರ್ಚು ಇದೆ.
ತುಲಾ ರಾಶಿ
ಇಂದು ತುಲಾ ರಾಶಿಯ ಜನರಿಗೆ ಹಳೆಯ ಹೂಡಿಕೆಗಳಿಂದ ಉತ್ತಮ ಲಾಭವನ್ನು ಪಡೆಯುತ್ತಾರೆ. ಕಠಿಣ ಪರಿಶ್ರಮವು ಫಲಿತಾಂಶವನ್ನು ನೀಡುತ್ತದೆ. ಕಚೇರಿಯಲ್ಲಿ ಬಾಸ್ ನಿಮ್ಮ ಕೆಲಸವನ್ನು ಹೊಗಳುತ್ತಾರೆ. ರಾತ್ರಿ ವೇಳೆ ಜಾಗರೂಕತೆಯಿಂದ ವಾಹನ ಚಲಾಯಿಸಿ.
ವೃಶ್ಚಿಕ ರಾಶಿ
ಇಂದು ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ತರಾತುರಿಯಲ್ಲಿ ಹಣವನ್ನು ಖರ್ಚು ಮಾಡಲು ನಿರ್ಧರಿಸಬೇಡಿ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಿ. ಅಪಾಯಕಾರಿ ಕೆಲಸಗಳಲ್ಲಿ ತೊಡಗುವವರು ಎಚ್ಚರಿಕೆ ವಹಿಸಿ.
ಧನು ರಾಶಿ
ಇಂದು ಹಣವನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಆದಾಯವನ್ನು ಹೆಚ್ಚಿಸಲು ಹೊಸ ಆಯ್ಕೆಗಳನ್ನು ನೋಡಿ. ಆಸ್ತಿ ಸಂಬಂಧಿತ ವಿವಾದಗಳಿಂದ ಕೆಲವರಿಗೆ ಇಂದು ಪರಿಹಾರ ದೊರೆಯಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.
ಮಕರ ರಾಶಿ
ಇಂದು ಹಣಕಾಸಿನ ವಿಷಯಗಳಲ್ಲಿ ಅದೃಷ್ಟವಿರುತ್ತದೆ. ಆದರೆ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರಿಗೆ ಬಡ್ತಿ ಸಿಗಬಹುದು. ಮನೆಗೆ ಅತಿಥಿಗಳ ಆಗಮನವು ಸಮೃದ್ಧಿಯನ್ನು ತರುತ್ತದೆ. ಆದಾಯದಲ್ಲಿ ಹೊಸ ಮೂಲಗಳು ಸೃಷ್ಟಿಯಾಗಲಿವೆ.
ಕುಂಭ ರಾಶಿ
ಇಂದು ಕುಂಭ ರಾಶಿಯ ಜನರಲ್ಲಿ ಅನುಕೂಲಕರ ದಿನ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಹಣವನ್ನು ಬುದ್ಧಿವಂತಿಕೆಯಿಂದ ನಿರ್ವಹಿಸಿ. ವೃತ್ತಿಪರ ಜೀವನದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ಬರಲಿವೆ.
ಮೀನ ರಾಶಿ
ಮೀನ ರಾಶಿಯವರಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಇಂದು ವ್ಯಾಪಾರದಲ್ಲಿ ಲಾಭ ಇರುತ್ತದೆ. ಹಣಕಾಸು ವಿಚಾರದಲ್ಲಿ ನಿಮ್ಮ ಪ್ರಯತ್ನಗಳು ಫಲ ನೀಡಲಿವೆ.



Click it and Unblock the Notifications










