Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
11 October Horoscope: ಹಣ ಖರ್ಚಾಗುವ ಸಂಭವ, ಕೇಡು ಬಯಸುವವರಿಂದ ದೂರವಿರಿ!
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 11 (11 October Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಇಂದು ನೀವು ಬುದ್ಧಿವಂತಿಕೆಯಿಂದ ಹಣವನ್ನು ಖರ್ಚು ಮಾಡಿ. ಮಕ್ಕಳ ಆರೋಗ್ಯದ ಕಡೆ ಗಮನ ಕೊಡಿ. ಮಾನಸಿಕ ಅಡಚಣೆ ಉಂಟಾಗಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗ ಮತ್ತು ವ್ಯಾಪಾರದ ದೃಷ್ಟಿಯಿಂದ ಉತ್ತಮ ದಿನವಾಗುತ್ತದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಇಂದು ಕಠಿಣ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಇಂದು ಹಿನ್ನಡೆ ಅನುಭವಿಸಬಹುದು. ಆಪ್ತರೊಬ್ಬರಿಂದ ನೋವಿನ ಮಾತುಗಳ ಕೇಳಬಹುದು. ದೂರ ಪ್ರಯಾಣಗಳಲ್ಲಿ ಫಲಿತಾಂಶ ಉತ್ತಮ ಆಗಿರದೆ ಇರಬಹುದು.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಇಂದು ಬಹಳ ಉತ್ತಮ ದಿನ. ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳಿಂದ ಮಾತುಗಳ ಕೇಳಬಹುದು. ಇಂದು ನಿಮ್ಮ ಭಾವನೆಗಳು ಏರುಪೇರಾಗಬಹುದು. ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳಿಗೆ ನಷ್ಟ ದಿನ.
ಕರ್ಕ ರಾಶಿ
ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಹೆಚ್ಚು ಕಠಿಣ ಪರಿಶ್ರಮ ಇರುತ್ತದೆ. ಕೌಟುಂಬಿಕ ಸಮಸ್ಯೆಗಳಿಂದಾಗಿ ಮನಸ್ಸು ಸ್ವಲ್ಪ ಚಿಂತೆಯಲ್ಲಿ ಉಳಿಯಬಹುದು. ಇಂದು ಪಿತ್ರಾರ್ಜಿತ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ. ನೀವು ಪೋಷಕರ ಬೆಂಬಲವನ್ನು ಪಡೆಯುತ್ತೀರಿ.
ಸಿಂಹ ರಾಶಿ
ಸಿಂಹ ರಾಶಿಯ ಮಂದಿಗೆ ಇಂದು ಉತ್ತಮ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಶುಭವಿದೆ. ಕಚೇರಿ ಕೆಲಸದಲ್ಲಿ ನೀವು ಬಯಸಿದ ಫಲಿತಾಂಶ ಪಡೆಯಲಿದ್ದೀರಿ. ಆಪ್ತರಿಂದ ಹಣ ಬರುವ ನಿರೀಕ್ಷೆ ಇದೆ. ಯಾವುದಾದರು ಹೊಸ ಉದ್ಯೋಗ ಹುಡುಕುವ ನಿಮ್ಮ ಪ್ರಯತ್ನದಲ್ಲಿ ಶುಭವಿದೆ.
ಕನ್ಯಾ ರಾಶಿ
ನಿಮಗೆ ಇಂದು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ, ಆದರೆ ನೀವು ಕೆಲಸದ ಸ್ಥಳದಲ್ಲಿ ಹೆಚ್ಚು ಶ್ರಮಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ತಾಳ್ಮೆಯಿಂದ ಎಲ್ಲವನ್ನು ಎದುರಿಸುವುದು ಉತ್ತಮ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಇಂದು ಮಿಶ್ರ ಫಲದ ದಿನವಾಗುತ್ತಿದೆ. ಇಂದು ನೀವು ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ.
ವೃಶ್ಚಿಕ ರಾಶಿ
ಇಂದು ನಿಮ್ಮ ಜೀವನದಲ್ಲಿ ಏರಿಳಿತಗಳಿರುತ್ತವೆ. ಕುಟುಂಬ ಸದಸ್ಯರಿಂದ ನಿಮ್ಮ ಮೇಲೆ ಹಣಕಾಸು ಸಂಬಂಧ ಒತ್ತಡಗಳು ಬರಬಹುದು. ವ್ಯಾಪಾರದಲ್ಲಿ ಲಾಭವಿದೆ. ಕೆಲಸಗಳಲ್ಲಿನ ಸವಾಲುಗಳನ್ನು ಎದುರಿಸಿ ಗೆಲ್ಲುವಿರಿ. ನಿಮ್ಮ ಹಣಕಾಸು ಸ್ಥಿತಿ ಸುಧಾರಿಸಲಿದೆ.
ಧನು ರಾಶಿ
ಧನು ರಾಶಿಯ ಜನರಿಗೆ ಇಂದು ಉತ್ತಮ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಶುಭವಾಗುತ್ತಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ. ಸಾಂಸಾರಿಕ ಸಮಸ್ಯೆಗಳಿದ್ದರು ಅದರಿಂದ ಹೊರಬರುವ ದಾರಿಯೂ ನಿಮಗೆ ತಿಳಿಯಲಿದೆ. ಮಕ್ಕಳ ಕುರಿತು ಎಚ್ಚರಿಕೆ ವಹಿಸಿ.
ಮಕರ ರಾಶಿ
ನಿಮ್ಮ ವೃತ್ತಿ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ವಾಹನ ವಿಚಾರವಾಗಿ ಎಚ್ಚರಿಕೆಯಿಂದ ಇರಿ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ.
ಕುಂಭ ರಾಶಿ
ಕುಂಭ ರಾಶಿಯ ಜನರಲ್ಲಿ ಇಂದು ಅನುಕೂಲಕರ ವಾತಾವರಣ ಇದೆ. ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸುತ್ತೀರಿ. ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಆದ್ರೆ ಬಹಳ ಸಮಯದಿಂದ ಎದುರಿಸಿದ್ದ ಹಣಕಾಸಿನ ಸಮಸ್ಯೆಯೊಂದಕ್ಕೆ ಪರಿಹಾರ ಮಾರ್ಗ ಸುಲಭವಾಗಲಿದೆ.
ಮೀನ ರಾಶಿ
ಮೀನ ರಾಶಿಯ ಜನರಿಗೆ ಇಂದು ಮಿಶ್ರಫಲದ ದಿನ. ಪ್ರಯಾಣ ಮಾಡುವ ದಿನ. ಹಾಗೆ ನಿಮ್ಮ ಕುಟುಂಬದಲ್ಲಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ಪಡೆಯುವ ದಿನ. ನಿಮ್ಮ ಆದಾಯದಷ್ಟೇ ಖರ್ಚು ಕೂಡ ಇರಲಿದೆ. ಆರೋಗ್ಯದ ಕಡೆ ಗಮನವಿಡಿ.



Click it and Unblock the Notifications