Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ವಿಜಯದಶಮಿಯಂದು ನಿಮ್ಮ ರಾಶಿಫಲದಲ್ಲಿ ಏನಿದೆ? ಯಾರಿಗೆ ಶುಭದಿನ ನೋಡಿ
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 12ರ ವಿಜಯದಶಮಿಯಂದು ನಿಮಗೆ ಹೇಗಿರಲಿದೆ ಎಂದು ನೋಡೋಣ....
ಮೇಷ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಖರ್ಚು ಸ್ವಲ್ಪ ಕಡಿಮೆ ಮಾಡುವುದು ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ವಿಜಯ ದಶಮಿ ಹಿನ್ನೆಲೆ ದೇವಾಲಯ, ಪೂಜೆಯಲ್ಲಿ ಭಾಗಿಯಾಗಿ.

ವೃಷಭ ರಾಶಿ
ದಿನವು ಉತ್ತಮವಾಗಿ ಪ್ರಾರಂಭವಾಗುತ್ತದೆ. ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. ಹಠಾತ್ ಆರ್ಥಿಕ ಲಾಭದ ಸಾಧ್ಯತೆಗಳಿವೆ. ಉದ್ಯೋಗಸ್ಥರಿಗೆ ಕೆಲವು ಉತ್ತಮ ಅವಕಾಶಗಳು ದೊರೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರಲಿದೆ.
ಮಿಥುನ ರಾಶಿ
ಸವಾಲುಗಳಿಗೆ ಹೆದರುವ ಬದಲು ಧೈರ್ಯದಿಂದ ಎದುರಿಸಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕೆಲವು ಜನರು ನಿಮಗೆ ಕಿರಿಕಿರಿಯನ್ನು ಉಂಟುಮಾಡಬಹುದು. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಯಾವುದೇ ಸಮಸ್ಯೆ ಇರಲ್ಲ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ
ನೀವು ಕೆಲಸದ ಸ್ಥಳದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯಬಹುದು.
ಸಿಂಹ ರಾಶಿ
ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಆರೋಗ್ಯದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಈ ದಿನ ಕೆಲಸದ ಕಡೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಿಮ್ಮ ಕೆಲಸಗಳು ಅಪೂರ್ಣವಾಗಿ ಉಳಿಯುವ ಸಾಧ್ಯತೆ ಇದೆ. ದೇವರ ಪೂಜೆ ಮಾಡಿ. ದೂರ ಪ್ರಯಾಣಗಳ ಆದಷ್ಟು ತಪ್ಪಿಸಿ.
ಕನ್ಯಾ ರಾಶಿ
ಸಂಬಂಧಗಳ ವಿಷಯದಲ್ಲಿ ದಿನವು ಏರಿಳಿತಗಳಿಂದ ತುಂಬಿರುತ್ತದೆ. ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ.
ತುಲಾ ರಾಶಿ
ಇಂದು ನಿಮಗೆ ದಿನದ ಆರಂಭವು ಉತ್ತಮವಾಗಿರುತ್ತದೆ. ನೀವು ಮುಂಜಾನೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ವಿಷಯದಲ್ಲಿಯೂ ಈ ದಿನ ಉತ್ತಮವಾಗಿರಲಿದೆ. ಮನೆಯಲ್ಲಿ ಶಾಂತಿ ಇರಲಿದೆ. ಹೊರಗಡೆಯ ಆಹಾರ ಸೇವನೆ ಇಂದು ತಪ್ಪಿಸಿ.
ವೃಶ್ಚಿಕ ರಾಶಿ
ರಹಸ್ಯ ಶತ್ರುಗಳ ಬಗ್ಗೆ ಜಾಗರೂಕರಾಗಿರಿ ಇಲ್ಲದಿದ್ದರೆ ಅವರು ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಸೌಕರ್ಯ ಹೆಚ್ಚಳವಾಗಲಿದೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇಡುವುದು ಉತ್ತಮ.
ಧನು ರಾಶಿ
ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ನೀವು ಕುಟುಂಬದ ಸದಸ್ಯರಿಂದ ಉಡುಗೊರೆ ಇತ್ಯಾದಿಗಳನ್ನು ಪಡೆಯಬಹುದು. ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವೂ ಪೂರ್ಣಗೊಳ್ಳುತ್ತದೆ. ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ.
ಮಕರ ರಾಶಿ
ಇಂದು ನಿಮಗೆ ಒಳ್ಳೆಯ ದಿನ. ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವನ್ನು ಮಾಡುವುದನ್ನು ತಪ್ಪಿಸಿ. ಇಂದಿನಿಂದ ನಿಮ್ಮ ಆರ್ಥಿಕ ಸಮಸ್ಯೆಗಳು ದೂರಾಗಬಹುದು. ಒಳ್ಳೆಯ ದಿನಗಳು ಹತ್ತಿರವಾಗಲು ಈ ದಿನ ಆರಂಭಿಕ ಹೆಜ್ಜೆಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.
ಕುಂಭ ರಾಶಿ
ಶೀಘ್ರದಲ್ಲೇ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಚಿಲ್ಲರೆ ವ್ಯಾಪಾರಿಗಳು ಲಾಭ ಪಡೆಯಬಹುದು. ದೇವಾಲಯ ಭೇಟಿ ಸಂಭವವಿದೆ. ಬಗೆಹರಿಯದ ಬಹುಕಾಲದ ಸಮಸ್ಯೆಗಳು ಬಗೆಹರಿಯಬಹುದು.
ಮೀನ ರಾಶಿ
ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಇಂದು ನಿಮಗೆ ಒಳ್ಳೆಯ ಸುದ್ದಿ ಸಿಗಬಹುದು. ನಿಮ್ಮ ವೈವಾಹಿಕ ಜೀವನದ ಯಾವುದೇ ಒಳ್ಳೆಯ ನೆನಪು ನಿಮ್ಮನ್ನು ಖುಷಿಯಾಗಿಡಲಿದೆ. ಇಂದು ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
