Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಕ್ಟೋಬರ್ 14, ಸೋಮವಾರದ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭ ದಿನ, ದ್ವಾದಶಿಯ ಈ ದಿನ ನಿಮ್ಮ ರಾಶಿಗೆ ಹೇಗಿದೆ?
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಹಣಕಾಸಿನ ವಿಚಾರದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆದರೆ ಕೆಲಸದಲ್ಲಿ ಜಾಗ್ರತೆಹಿಸಬೇಕು, ನಿರ್ಲಕ್ಷ್ಯ ಮಾಡಬೇಡಿ.
ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಸಂಜೆ 4:50 ರಿಂದ ರಾತ್ರಿ 8:20 ರವರೆಗೆ

ವೃಷಭ ರಾಶಿ
ಈ ದಿನ ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ಅನಗ್ಯತ ವಾದಗಳನ್ನು ತಪ್ಪಿಸಿ, ಕೆಲಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಬಹಳ ಆಲೋಚಿಸಿ, ದುಡುಕದೆ ತೆಗೆದುಕೊಂಡರೆ ಒಳ್ಳೆಯದು. ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಆದರೆ ಹೂಡಿಕೆಗೆ ಈ ದಿನ ಸೂಕ್ತವಲ್ಲ. ಇನ್ನು ಸಂಗಾತಿ ಜೊತೆ ಮಾತನಾಡುವಾಗ ಕೋಪ ನಿಯಂತ್ರಿಸಿ ನಿಮ್ಮ ಮಾತುಗಳು ಅವರಿಗೆ ನೋವುಂಟು ಮಾಡಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1 ರವರೆಗೆ
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳು ಈ ದಿನ ಪ್ರಯಾಣ ಮಾಡಬೇಕಾಗಿ ಬರಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನವೂ ಚೆನ್ನಾಗಿರಲಿದೆ. ಕೆಲಸ ಅಂತ ತುಂಬಾ ಆಯಾಸ ಮಾಡಿಕೊಳ್ಳದೆ ಆರೋಗ್ಯದ ಕಡೆಯೂ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಬೇಡದ ವಿಚಾರಗಳ ಬಗ್ಗೆ ಚಿಂತೆ ಬಿಡಿ, ಈ ದಿನ ಖರ್ಚು ಕೂಡ ಅಧಿಕ ಬರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಅಥವಾ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೂ ಗಮನಹರಿಸಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಬೆಳಗ್ಗೆ 7 ರಿಂದ 9:50 ರವರೆಗೆ
ಸಿಂಹ ರಾಶಿ
ಈ ದಿನ ನೀವು ತಾಳ್ಮೆಯಿಂದಿರಬೇಕು. ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಬರಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ನೀವು ಚುರುಕುಗೊಳಿಸಿ, ಉಳಿತಾಯದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೂ ನಿರೀಕ್ಷೆ ಮಾಡಿದ ಲಾಭ ಪಡೆಯಲು ಕಷ್ಟವಾಗಬಹುದು. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಸಂಜೆ 5:20 ರಿಂದ ರಾತ್ರಿ 9:15 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಈ ದಿನ ಕೆಲಸ ಹೆಚ್ಚಿರಲಿದೆ, ಆದರೆ ನಿರೀಕ್ಷೆ ಮಾಡಿದ ಫಲ ಸಿಗುವುದರಿಂದ ಖುಷಿಯಾಗುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 6:15 ರಿಂದ ಮಧ್ಯಾಹ್ನ 12:20 ರವರೆಗೆ
ತುಲಾ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು. ಕೆಲಸದಲ್ಲಿ ಒತ್ತಡ ಪರಿಸ್ಥಿತಿ ಇರಬಹುದು, ಹಣಕಾಸಿನ ದೃಷ್ಟಿಯಿಂದಲೂ ಈ ಅವಧಿ ಉತ್ತಮವಲ್ಲ. ಆರೋಗ್ಯ ಸಮಸ್ಯೆ ಕೂಡ ಕೆಲಸದಲ್ಲಿ ಅಡೆತಡೆ ಉಂಟು ಮಾಡಬಹುದು. ಇಂದು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಆದರೆ ನೀವು ಕೋಪ ನಿಯಂತ್ರಿಸಿ, ಸಮಸ್ಯೆ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಕುಟುಂಬ ಜೀವನ ಕೂಡ ಉತ್ತವಾಗಿರಲಿದೆ. ಈ ದಿನ ಯಾವುದೇ ಆರ್ಥಿಕ ವ್ಯವಹಾರ ಮಾಡಲು ಹೋಗಬೇಡಿ. ಕೆಲಸದ ಮೇಲೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಅನಗತ್ಯ ಚಿಂತೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಧನು ರಾಶಿ
ಕೆಲಸದ ವಿಷಯದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ವ್ಯಾಪಾರಿಗಳಿಗೆ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಕಷ್ಟವಾಗಬಹುದು. ನಿಮ್ಮ ಸಂಗಾತಿ ಮೇಲೆ ಅನುಮಾನ ಒಳ್ಳೆಯದಲ್ಲ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಮಕರ ರಾಶಿ
ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಲಿದೆ. ನೀವು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಮನೆಯಲ್ಲಿ ಧನಾತ್ಮಕ ವಾತಾವರಣ ಇರುತ್ತದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 27
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ
ಕುಂಭ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಆರ್ಥಿಕವಾಗಿಯೂ ಈ ದಿನ ಯಾವುದೇ ಸಮಸ್ಯೆಯಿರಲ್ಲ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ನೀವು ಉತ್ತಮ ಲಾಭವನ್ನು ಪಡೆಯಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 16
ಶುಭ ಮುಹೂರ್ತ: ಬೆಳಗ್ಗೆ 8:30 ರಿಂದ ಮಧ್ಯಾಹ್ನ 12
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆದರೆ ಕೆಲಸದ ಸ್ಥಳದಲ್ಲಿ ವಿರೋಧಿಗಳು ಸಕ್ರಿಯರಾಗಿರುತ್ತಾರೆ. ನೀವು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಹಣಕಾಸಿನ ಯೋಜನೆಗಳನ್ನು ರಹಸ್ಯವಾಗಿಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಸಂಜೆ 7 ರಿಂದ 9 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










