Latest Updates
-
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ
ಅಕ್ಟೋಬರ್ 15, ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಅಕ್ಟೋಬರ್ 15 ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆಸ್ತಿ ವ್ಯವಹಾರ ಮಾಡುವವರಿಗೆ ಈ ದಿನ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗ್ಯಾಸ್ಟ್ರಿಕ್, ಅಸಿಡಿಟಿ ಈ ಬಗೆಯ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ 14
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಉದ್ಯಮಿಗಳು, ವ್ಯಾಪಾರಿಗಳು ಈ ದಿನ ಉತ್ತಮ ಲಾಭ ಪಡೆಯುತ್ತೀರಿ. ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನೀವು ಚೆನ್ನಾಗಿ ಆಲೋಚಿಸಿ ತೆಗೆದುಕೊಂಡರೆ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ 18
ಶುಭ ಸಮಯ: ಬೆಳಗ್ಗೆ 6:20 ರಿಂದ 9:20 ರವರೆಗೆ
ಮಿಥುನ ರಾಶಿ
ಈ ದಿನ ನಿಮ್ಮ ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳು ಕೆಲವೊಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಅನುಭವಿಗಳ ಅಭಿಪ್ರಾಯ ಕೇಳುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ 42
ಶುಭ ಸಮಯ: ಮಧ್ಯಾಹ್ನ 3:15 ರಿಂದ 6 ರವರೆಗೆ
ಕರ್ಕ ರಾಶಿ
ಈ ದಿನ ನೀವು ಕೋಪ ನಿಯಂತ್ರಿಸಬೇಕು, ಕೆಲಸದಲ್ಲಿ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಹಣಕಾಸಿನ ವ್ಯವಹಾರಕ್ಕೆ ಈ ದಿನ ನಿಮಗೆ ಅನುಕೂಲಕರವಾಗಿದೆ,ಆದರೆ ಕೆಲವೊಂದು ಹಣ ಕೈ ಸೇರದೆ ಮಾನಸಿಕ ಒತ್ತಡ ಉಂಟಾಗುವುದು. ಕೆಲಸದ ಒತ್ತಡದ ಹೆಚ್ಚಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅತಿಯಾದ ಕೆಲಸ ಅಥವಾ ಓಡಾಟ ಆಯಾಸ ಉಂಟು ಮಾಡಬಹುದು.
ಅದೃಷ್ಟದ ಬಣ್ಣ ಮರೂನ್
ಅದೃಷ್ಟದ ಸಂಖ್ಯೆ 32
ಶುಭ ಮುಹೂರ್ತ: ಬೆಳಗ್ಗೆ 10:05 ರಿಂದ ಮಧ್ಯಾಹ್ನ 12
ಸಿಂಹ ರಾಶಿ
ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳು ಯಾವುದೇ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು.ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಭಿನ್ನಾಭಿಪ್ರಾಯಗಳಿಂದ ದೂರವಿರಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಆರೋಗ್ಯದ ಬಗ್ಗೆ ನೋಡುವುದಾದರೆ ಸುಸ್ತು ಇರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸ ಖ್ಯೆ: 2
ಶುಭ ಸಮಯ: ಸಂಜೆ 7 ರಿಂದ 9 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಕೂಡ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ 6
ಶುಭ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ
ತುಲಾ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರುವುದರಿಂದ ಹೂಡಿಕೆಗೆ ಈ ದಿನ ನಿಮಗೆ ಪ್ರಯೋಜನಕಾರಿಯಾಗಿದೆ. ಉದ್ಯಮಿಗಳು ದೊಡ್ಡ ಹೂಡಿಕೆ ಮಾಡಲು ಅವಕಾಶವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ 12
ಶುಭ ಸಮಯ: ಸಂಜೆ 5:15 ರಿಂದ 7 ರವರೆಗೆ
ವೃಶ್ಚಿಕ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಆದರೆ ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ನೀವೇ ಬಗೆಹರಿಸಲು ಪ್ರಯತ್ನಿಸಿ, ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ.
ಅದೃಷ್ಟದ ಬಣ್ಣ ಕಿತ್ತಳೆ
ಅದೃಷ್ಟದ ಸಂಖ್ಯೆ 4
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಧನು ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಆತುರಪಡಬೇಡಿ. ವ್ಯಾಪಾರಿಗಳಿಗೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ 10
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಮಕರ ರಾಶಿ
ಕೆಲಸದಲ್ಲಿ ಏನಾದರು ಸಮಸ್ಯೆಯಾದರೆ ಕೋಪಗೊಳ್ಳಬೇಡಿ, ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಿ, ಆರೋಗ್ಯದ ಕಡೆಗೆ ಗಮನಹರಿಸಬೇಕು.
ಈ ದಿನ ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ 11
ಶುಭ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ವೃತ್ತಿ ಬದುಕು ಚೆನ್ನಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲಸದ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು, ಈ ದಿನ ಆಯಾಸವಿರಬಹುದು.
ಅದೃಷ್ಟದ ಬಣ್ಣ ಕಿತ್ತಳೆ
ಅದೃಷ್ಟದ ಸಂಖ್ಯೆ 6
ಶುಭ ಸಮಯ: ಬೆಳಗ್ಗೆ 8 ರಿಂದ 11 ರವರೆಗೆ
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸದಲ್ಲಿನದೊಡ್ಡ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಚೆನ್ನಾಗಿರಲಿದೆ.
ಈ ದಿನ ಅದೃಷ್ಟದ ಬಣ್ಣ ನೇರಳೆ
ಅದೃಷ್ಟದ ಸಂಖ್ಯೆ 7
ಶುಭ ಸಮಯ: ಸಂಜೆ 5 ರಿಂದ 7:30 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











