Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಕ್ಟೋಬರ್ 18, ದಿನ ಭವಿಷ್ಯ: 12 ರಾಶಿಗಳಲ್ಲಿ ಈ ದಿನ ಯಾರಿಗೆ ಶುಭ, ಯಾರು ಜಾಗ್ರತೆವಹಿಸಬೇಕು
ಜ್ಯೋತಿಷ್ಯಪ್ರಕಾರ ಅಕ್ಟೋಬರ್ 18 ಶುಕ್ರವಾರದ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಆದರೆ ವ್ಯಾಪಾರಿಗಳು ಆರ್ಥಿಕ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ಆರೋಗ್ಯದ ಬಗ್ಗೆ ಜಾಗ್ರತೆವಹಿಸಬೇಕು. ಮನೆಯ ವಾತಾವರಣ ಚೆನ್ನಾಗಿರಲಿದೆ, ವೈವಾಹಿಕ ಬದುಕು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ನೀವು ಅನಗ್ಯತ ಚಿಂತೆ ಬಿಡಿ, ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ಈ ದಿನ ಖರ್ಚು ಹೆಚ್ಚಿರಲಿದೆ, ಇದು ಕೂಡ ನಿಮ್ಮ ಚಿಂತೆಗೆ ಕಾರಣವಾಗಿರಲಿದೆ. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸಿ, ಇಲ್ಲದಿದ್ದರೆ ಸಮಸ್ಯೆ ಬರಬಹುದು. ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಬಹುದು, ಆದರೆ ನೀವು ಧನಾತ್ಮಕ ವಿಷಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ
ಮಿಥುನ ರಾಶಿ
ಈ ದಿನ ನೀವು ತಾಳ್ಮೆಯಿಂದಿರಿ, ಬೇಡದ ವಿಷಯಗಳು ಮನಸ್ಸಿನ ಒತ್ತಡ ಹೆಚ್ಚಿಸಬಹುದು, ನೀವು ನಕರಾತ್ಮಕ ವಿಷಯಗಳ ಕಡೆಗೆ ಗಮನಹರಿಸಬೇಡಿ. ಈ ದಿನ ಖರ್ಚು ಹೆಚ್ಚು ಬರಲಿದೆ. ಕೆಲಸದಲ್ಲಿ ಸವಾಲುಗಳು ಬರಹುದು, ಕೆಲಸ ಬದಲಾಯಿಸುವ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 33
ಶುಭ ಸಮಯ: ಬೆಳಗ್ಗೆ 6 ರಿಂದ 8 ರವರೆಗೆ
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ಉತ್ತಮ ಧನ ಲಾಭ ಪಡೆಯಬಹುದು. ಈ ದಿನ ಖರ್ಚು ಹೆಚ್ಚಿರಲಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ:42
ಶುಭ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಹಣದ ಚಿಂತೆ ಹೆಚ್ಚಿರಲಿದೆ. ನೀವು ಬಜೆಟ್ ಪ್ಲ್ಯಾನ್ ಯೋಚಿಸಿ ಮಾಡಿದರೆ ಒಳ್ಳೆಯದು. ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳು ಹಣದ ವ್ಯವಹಾರದ ಬಗ್ಗೆ ಗಮನಹರಿಸಬೇಕು. ಮನೆಯಲ್ಲಿನ ಸಮಸ್ಯೆ ಕೂಡ ನಿಮ್ಮಲ್ಲಿ ಮಾನಸಿಕ ಒತ್ತಡ ಹೆಚ್ಚಿಸಬಹುದು. ಕೋಪ, ಆತುರದ ನಿರ್ಧಾರ ಒಳ್ಳೆಯದಲ್ಲ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 31
ಶುಭ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 1 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ತಂದೆಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಸಂಜೆ 5 ರಿಂದ 7 ರವರೆಗೆ
ತುಲಾ ರಾಶಿ
ನೀವು ಬೇಡದ ವಿಷಯಗಳನ್ನು ಕೆಲಸದ ಕಡೆಗೆ ಗಮನಹರಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ನೀವು ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು, ಹಣದ ಕೊರತೆಯಿಂದ ನಿಮ್ಮ ಪ್ರಮುಖ ಕೆಲಸದಲ್ಲಿ ಅಡೆತಡೆ ಎದುರಾಗಬಹುದು.ಹಣದ ಕೊರತೆಯಿಂದ ಕೆಲವು ಪ್ರಮುಖ ಕೆಲಸಗಳಿಗೆ ಅಡಚಣೆ ಉಂಟಾಗಬಹುದು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಈ ದಿನ ಆರೋಗ್ಯ ಕೂಡ ಅಷ್ಟೊಂದು ಉತ್ತಮವಾಗಿರುವುದಿಲ್ಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಬದುಕು, ಆರ್ಥಿಕ ಬದುಕು ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕಿನ ದೃಷ್ಟಿಯಿಂದಲೂ ದಿನ ಉತ್ತಮವಾಗಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ: ಗೋಲ್ಡನ್
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಬೆಳಗ್ಗೆ 7:30 ರಿಂದ 11 ರವರೆಗೆ
ಧನು ರಾಶಿ
ನಿಮ್ಮ ರಹಸ್ಯ ಶತ್ರುಗಳ ಬಗ್ಗೆ ನೀವು ಜಾಗರೂಕರಾಗಿರಬೇಕು. ಕೆಲಸದ ಸ್ಥಳದಲ್ಲಿ ನೀವು ಹೊಸ ಸವಾಲನ್ನು ಎದುರಿಸಬಹುದು, ನೀವು ಬುದ್ಧಿವಂತಿಕೆ ಹಾಗೂ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ವೈವಾಹಿಕ ಬದುಕು ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 4:20 ರಿಂದ ರಾತ್ರಿ 8:20 ರವರೆಗೆ
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಎರಡೂ ಚೆನ್ನಾಗಿರಲಿದೆ. ಖರ್ಚು ಹೆಚ್ಚು ಬರಲಿದೆ, ಹಾಗಾಗಿ ಹಣದ ಚಿಂತೆ ಕೂಡ ಕಾಡಬಹುದು. ಆರೋಗ್ಯ ಸಮಸ್ಯೆವಿರುವವರು ಆಹಾರ ಕ್ರಮದ ಕಡೆಗೆ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ.ಆರೋಗ್ಯ ಚೆನ್ನಾಗಿರಲಿದೆ
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 27
ಶುಭ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12:30 ರವರೆಗೆ
ಕುಂಭ ರಾಶಿ
ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಒಳ್ಳೆಯ ಸುದ್ದಿ ಪಡೆಯಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಬೆಳಗ್ಗೆ 8 ರಿಂದ 11 ರವರೆಗೆ
ಮೀನ ರಾಶಿ
ಈ ದಿನ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸಕ್ಕೆ ಸಂಬಂಧಿಸಿದ ಯೋಜನೆ ಪ್ರಕಾರ ಮಾಡಿದರೆ ಕೆಲಸ ಕರ್ಯಗಳು ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ನೀವು ಹಣಕಾಸಿನ ವಹಿವಾಟುಗಳನ್ನು ಚಿಂತನಶೀಲವಾಗಿ ಮಾಡಬೇಕಾಗುತ್ತದೆ. ವ್ಯಾಪಾರಿಗಳು ಜಾಗ್ರತೆವಹಿಸಬೇಕು. ಕುಟುಂಬದಲ್ಲಿ ಕೆಲ ಸಮಸ್ಯೆಗಳಿರಬಹುದಯ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










