Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರೀತಿ ಭವಿಷ್ಯ ಪ್ರಕಾರ ಈ ವಾರ ನಿಮ್ಮ ಪ್ರೀತಿ, ವೈವಾಹಿಕ ಜೀವ ಹೇಗಿರಲಿದೆ?
ಈ ವಾರದ ರಾಶಿಫಲ ಪ್ರಕಾರ ನಿಮ್ಮ ಪ್ರೇಮಿಗಳಿಗೆ, ವಿವಾಹಿತರಿಗೆ ಹೇಗಿರಲಿದೆ? ಎಂದು ಇಲ್ಲಿ ಹೇಳಲಾಗಿದೆ, ಈ ಪ್ರೀತಿ ಭವಿಷ್ಯ ಕುಟುಂಬದಲ್ಲಿನ ಸಮಸ್ಯೆ ಬಗೆಹರಿಸಲು ಸಹಾಯವಾಗುವುದು. ಈ ವಾರ ಪ್ರೀತಿ ವಿಷಯದಲ್ಲಿ ಯಾರಿಗೆ ಹೇಗಿದೆ ಎಂದು ನೋಡೋಣ:

ಮೇಷ ರಾಶಿ
ಈ ವಾರ ನಿಮ್ಮ ಹಾಗೂ ಸಂಗಾತಿ ನಡುವೆ ಅಭಿಪ್ರಾಯ ವ್ಯತ್ಯಾಸ ಬರಬಹುದು, ಚಿಕ್ಕ ವಿಷಯ ದೊಡ್ಡದಾಗಬಹುದು, ಪ್ರೇಮಿಗಳ ನಡುವೆ ಕೂಡ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಕುಟುಂಬದ ಸಮಸ್ಯೆ ನಿಮ್ಮ ಮಾನಸಿಕ ಒತ್ತಡ ಹೆಚ್ಚಿಸಬಹುದು. ಏನೇ ಸಮಸ್ಯೆಯಿದ್ದರೂ ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ವೃಷಭ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಇರಲಿದೆ. ಪ್ರೇಮಿಗಳು ತಮ್ಮ ಪ್ರೀತಿಗೆ ನೆಯವರ ಒಪ್ಪಿಗೆ ಪಡೆಯಲು ಬಯಸಿದರೆ ಈ ವಾರ ನಿಮ್ಮ ವಿಷಯ ಹೇಳಬಹುದು, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಈ ವಾರ ಖುಷಿ ಖುಷಿಯಿಂದ ಕಳೆಯುವಿರಿ.
ಮಿಥುನ ರಾಶಿ
ನಿಮ್ಮ ಪ್ರೀತಿ ಜೀವನದಲ್ಲಿ ಕೆಲ ಸಮಸ್ಯೆಗಳು ಉಂಟಾಗಬಹುದು,ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ಚಿಕ್ಕ ವಿಷಯಕ್ಕೆ ಸಂಗಾತಿ ನೊಂದುಕೊಳ್ಳಬಹುದು, ಮುಕ್ತ ಮಾತಿನ ಮೂಲಕ ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ವಾರ ಕರ್ಕ ರಾಶಿಯವರ ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ಏನಾದರೂ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರ ಪ್ರೀತಿ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಈ ಅವಧಿ ಉತ್ತಮವಾಗಿದೆ, ಒಟ್ಟಿನಲ್ಲಿ ಈ ಸಮಯ ಖುಷಿಯಿಂದ ಕಳೆಯತ್ತೀರಿ.
ಕನ್ಯಾ ರಾಶಿ
ಕೆಲ ಸಮಸ್ಯೆಗಳಿರಬಹುದು, ಅದನ್ನು ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ. ಸಂಗಾತಿ ಮೇಲೆ ಕೋಪದಿಂದ ವರ್ತಿಸಬೇಡಿ, ಸಮತೋಲಿತ ರೀತಿಯಲ್ಲಿ ವರ್ತಿಸಿದರೆ ಪರಿಸ್ಥಿತಿ ತಿಳಿಯಾಗಿಸಲು ಸಹಾಯವಾಗುವುದು. ಮೂರನೇಯ ವ್ಯಕ್ತಿ ನಿಮ್ಮ ಬದುಕಿನಲ್ಲಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ನಿಮ್ಮ ಬದುಕು ಸರಿಪಡಿಸಲು ಪ್ರಯತ್ನ ಹಾಕಿ.
ತುಲಾ ರಾಶಿ
ಸ್ವಲ್ಪ ಸಮಯದಿಂದ ನಿಮ್ಮ ನಡುವೆ ಏನಾದರು ಅಸಮಧಾನವಿದ್ದರೆ ಅದನ್ನು ಹಾಗೆಯೇ ಬಿಡಿಬೇಡಿ, ಮಾತನಾಡಿ ಬಗೆಹರಿಸಲು ಪ್ರಯತ್ನಿಸಬೇಕು. ನಿಮ್ಮ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು, ಕಡ್ಡಿಯನ್ನು ಗುಡ್ಡ ಮಾಡಲು ಹೋಗಬೇಡಿ, ಚಿಕ್ಕ ಪುಟ್ಟ ವಿಷಯಗಳನ್ನು ನಿರ್ಲಕ್ಷ್ಯ ಮಾಡಿದರೆ ಒಳ್ಳೆಯದು.
ಧನು ರಾಶಿ
ಈ ವಾರ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷವಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಕೂಡ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರುವುದರಿಂದ ಈ ಅವಧಿ ಉತ್ತಮವಾಗಿರಲಿದೆ.
ಮಕರ ರಾಶಿ
ಮಕರ ರಾಶಿಯವರು ಕುಟುಂಬದ ಕಡೆಗೆ ಗಮನಹರಿಸಬೇಕು. ಕೆಲವೊಂದು ವಿಷಯಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ಮುಂದುವರೆಯುವುದು ಒಳ್ಳೆಯದು, ಹೀಗೆ ಮಾಡಿದರೆ ಸಂಸಾರ ಚೆನ್ನಾಗಿರುತ್ತದೆ.
ಕುಂಭ ರಾಶಿ
ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ, ಪ್ರೇಮಿಗಳಿಗೂ ಈ ವಾರ ವಿಶೇಷವಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಮೀನ ರಾಶಿ
ಮೀನ ರಾಶಿಯವರ ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಪ್ರೇಮಿಗಳು ಮದುವೆಯ ಬಗ್ಗೆ ಆಲೋಚಿಸಬಹುದು, ಮದುವೆಗೆ ಸಂಬಂಧ ಹುಡುಕುತ್ತಿರುವವರಿಗೆ ಈ ವಾರ ಮದುವೆ ಪ್ರಸ್ತಾಪ ಬರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications