Latest Updates
-
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು
ಅಕ್ಟೋಬರ್ ಮಾಸದ ಪ್ರೀತಿ ಭವಿಷ್ಯ: ಈ ಮಾಸ ಪ್ರೇಮಿಗಳಿಗೆ, ವಿವಾಹಿತರಿಗೆ, ಅವಾಹಿತರಿಗೆ ಹೇಗಿರಲಿದೆ?
ಅಕ್ಟೋಬರ್ ಮಾಸದ ಪ್ರೀತಿ ಭವಿಷ್ಯ ಪ್ರಕಾರ ಅಕ್ಟೋಬರ್ ಮಾಸ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ?
ಮೇಷ ರಾಶಿ
ಪ್ರೀತಿ ಜೀವನದ ಬಗ್ಗೆ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಲಿದೆ, ನೀವು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂಬ ದೂರು ಬರಬಹುದು. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ನವ ದಂಪತಿ ಅಥವಾ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗೆ ಖುಷಿಯ ಸುದ್ದಿ ಸಿಗಲಿದೆ.

ವೃಷಭ ರಾಶಿ
ಸಂಬಂಧದಲ್ಲಿ ಕೆಲ ಸಮಸ್ಯೆಗಳಿರಬಹುದು, ನೀವು ಕೋಪದಿಂದ ವರ್ತಿಸುವ ಬದಲಿಗೆ ಸಮಧಾನದಿಂದ ಪರಿಸ್ಥಿತಿ ಬಗೆಹರಿಸಲು ಪ್ರಯತ್ನಿಸಬೇಕು. ಅಲ್ಲದೆ ನಿಮ್ಮ ಕುಟುಂಬ ವಿಚಾರದಲ್ಲಿ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಡಿ. ಮನೆಯ ವಾತಾವರಣ ಕೂಡ ಅಷ್ಟೊಂದು ಚೆನ್ನಾಗಿರಲ್ಲ, ಅಕ್ಟೋಬರ್ ಬಳಿಕ ಪರಿಸ್ಥಿತಿ ತಿಳಿಯಾಗಲಿದೆ.
ಮಿಥುನ ರಾಶಿ
ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ಅಕ್ಟೋಬರ್ ಮಾಸ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ಪ್ರೇಮಿಗಳ ಪ್ರೀತಿ ಮದುವೆಯತ್ತ ತಿರುಗಬಹುದು. ಒಡಹುಟ್ಟಿದವರ ಜೊತೆಗೆ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಯಲಿದೆ. ಒಟ್ಟಿನಲ್ಲಿ ಮಾಸ ಸಂಬಂಧದ ದೃಷ್ಟಿಯಿಂದ ನೋಡುವುದಾದರೆ ತುಂಬಾನೆ ಅನುಕೂಲಕವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೂ ಅಕ್ಟೋಬರ್ ಮಾಸ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಬಂದರೂ ಎಲ್ಲವೂ ಬಗೆಹರಿಯಲಿದೆ. ನಿಮ್ಮ ಸಂಗಾತಿಯ ಮನಸ್ಸಿಗೆ ನೋವುಂಟು ಮಾಡದಂತೆ ನಡೆದುಕೊಂಡರೆ ಸಾಕು ಎಲ್ಲವೂ ಸರಿಯಾಗಲಿದೆ.
ಸಿಂಹ ರಾಶಿ
ಸಂಬಂಧದ ಬಗ್ಗೆ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು. ಪ್ರೇಮಿಗಳ ನಡುವೆ ಹೊಂದಾಣಿಕೆ ಕೊರತೆ ಕಂಡು ಬರುವುದು, ಇನ್ನು ಕುಟುಂಬದಲ್ಲಿಯೂ ಪರಿಸ್ಥಿತಿ ಅನುಕೂಲಕರವಲ್ಲ. ನೀವು ಈ ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು.
ಕನ್ಯಾ ರಾಶಿ
ಈ ಅವಧಿಯಲ್ಲಿ ಅವಾಹಿತರಿಗೆ ಮದುವೆ ಪ್ರಸ್ತಾಪ ಬಂದಿದ್ದರೆ ಇನ್ನೂ ಸ್ವಲ್ಪ ಕಾಯುವುದು ಒಳ್ಳೆಯದು. ವಿವಾಹಿತರ ಬದುಕಿನಲ್ಲಿ ಕೆಲ ಸವಾಲುಗಳು ಬರಬಹುದು, ನಿಮ್ಮ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ.
ತುಲಾ ರಾಶಿ
ಅಕ್ಟೋಬರ್ ಮಾಸ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ. ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ಹೆಚ್ಚುತ್ತಿರುವ ಆರ್ಥಿಕ ಹೊರೆ ನಿಯಂತ್ರಿಸಿ, ಕುಟುಂಬದ ಸದಸ್ಯರ ಜೊತೆ ಹೊಂದಿಕೊಂಡು ಹೋಗಲು ಪ್ರಯತ್ನ ಹಾಕಬೇಕು.
ವೃಶ್ಚಿಕ ರಾಶಿ
ಈ ಮಾಸ ನಿಮಗೆ ಉತ್ತಮವಾಗಿರಲಿದೆ. ಅವಾಹಿತರಿಗೆ ಈ ಅವಧಿಯಲ್ಲಿ ಮದುವೆ ಪ್ರಸ್ತಾಪ ಬರಬಹುದು. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಆರಾಮವಾಗಿ ಇರಬಹುದು.
ಧನು ರಾಶಿ
ಈ ಅವಧಿ ನಿಮಗೆ ಅನುಕೂಲಕರವಾಗಲಿದೆ, ಒಬ್ಬರನ್ನೊಬ್ಬರು ಮತ್ತಷ್ಟು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ನಡುವೆ ಇರುವ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದರಿಂದ ಒಳ್ಳೆಯ ಫಲ ಸಿಗಲಿದೆ, ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ.
ಮಕರ ರಾಶಿ
ಈ ತಿಂಗಳು ನಿಮಗೆ ವಿಶೇಷವಾಗಿರಲಿದೆ, ನೀವು ನಿಮ್ಮ ಸಂಗಾತಿಯನ್ನು ಮತ್ತಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದು. ಇನ್ನು ಅವಾಹಿತರಿಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ಮದುವೆ ಪ್ರಸ್ತಾಪ ಬರಬಹುದು.
ಕುಂಭ ರಾಶಿ
ಈ ಮಾಸ ಮಿಶ್ರ ಫಲ, ಪ್ರಾರಂಭದ ದಿನಗಳಲ್ಲಿ ಕೆಲ ಸಮಸ್ಯೆಗಳು ಎದುರಾಗಬಹುದು, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯಗಳ ಗಾಢವಾಗಬಹುದು, ಆದರೆ ನಂತರ ಎಲ್ಲವೂ ಸರಿಯಾಗಲಿದೆ. ಕುಟುಂಬದಲ್ಲಿ ಯಾವುದೇ ಸಮಸ್ಯೆ ಉಂಟಾಗದಿರಲು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ.
ಮೀನ ರಾಶಿ
ಮೀನ ರಾಶಿಯ ಪ್ರೇಮಿಗಳಿಗೆ, ವಿವಾಹಿತರಿಗೆ, ಅವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ವೈವಾಹಿಕ ಬದುಕಿನಲ್ಲಿ ಖುಷಿ ಇರಲಿದೆ. ಪ್ರೇಮಿಗಳ ನಡುವೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಲಿದೆ. ಸಂಬಂಧದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications