Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಟೋಬರ್ 24 ದಿನ ಭವಿಷ್ಯ: ಗುರು ಪುಷ್ಯ ಯೋಗದ ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನದ ಭವಿಷ್ಯ ನೀಡಲಾಗಿದೆ, ಈ ದಿನದ ವಿಶೇಷವೆಂದರೆ ಇಂದು ಗುರು ಪುಷ್ಯ ಯೋಗವೂ ಇದೆ. ಈ ದಿನ ದ್ವಾದಶ ರಾಶಿಗಳ ರಾಶಿಫಲ ನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು, ಕೆಲ ಸಮಸ್ಯೆಗಳು ಎದುರಾಗಬಹುದು, ಆದರೆ ಮಧ್ಯಾಹ್ನದ ಮೇಲೆ ಸ್ವಲ್ಪ ಆರಾಮವಾಗಬಹುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬದ ಜೊತೆಗೆ ಏನಾದರೂ ಭಿನ್ನಾಭಿಪ್ರಾಯ ಬಂದರೆ ನೀವು ಕೋಪದಿಂದ ವರ್ತಿಸಬೇಡಿ ಎಂದು ಸಲಹೆ ನೀಡಲಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿ ಇರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಆಯಾಸವಿರಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಸಂಜೆ 5 ರಿಂದ ರಾತ್ರಿ 9:15 ರವರೆಗೆ

ವೃಷಭ ರಾಶಿ
ನೀವಿಂದು ಖರ್ಚು ಬಗ್ಗೆ ಹೆಚ್ಚು ಗಮನಹರಿಸಬೇಕು, ಏಕೆಂದರೆ ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ವ್ಯಾಪಾರಿಗಳು ಕೂಡ ಹಣದ ನಷ್ಟ ಉಂಟಾಗದಂತೆ ಜಾಗ್ರತೆವಹಿಸಬೇಕು. ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಯಿಂದಾಗಿ ಆರೋಗ್ಯಕದಲ್ಲಿಯೂ ಏರಳಿತ, ಇದು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರುವುದು. ನಿಮ್ಮ ಹಾಗೂಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 6:30 ರಿಂದ 9 ರವರೆಗೆ
ಮಿಥುನ ರಾಶಿ
ಈ ದಿನ ಕೆಲಸ ಕಾರ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ, ಆದರೆ ನೀವು ಕುಟುಂಬದ ಕಡೆಯೂ ಗಮನಹರಿಸಬೇಕು, ಕುಟುಂಬಕ್ಕೆ ಸಮಯ ನೀಡಲು ಪ್ರಯತ್ನಿಸಬೇಕು, ಇಲ್ಲದಿದ್ದರೆ ನಿಮ್ಮ ವರ್ತನೆ ಸಂಗಾತಿ ಮನಸ್ಸಿಗೆ ನೋವುಂಟು ಮಾಡಬಹುದು. ಆರೋಗ್ಯ ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ ಕೇಸರಿ
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಕರ್ಕ ರಾಶಿ
ಕೆಲಸದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದು, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ, ಇದರಿಂದಾಗಿ ಮನೆಯ ವಾತಾವರಣ ಖುಷಿಯಾಗಿರಲಿದೆ.ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ, ವ್ಯಾಪಾರಿಗಳಿಗೆ ಈ ದಿನ ಲಾಭ ಪಡೆಯಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಸಂಜೆ 5:15 ರಿಂದ 7:15 ರವರೆಗೆ
ಸಿಂಹ ರಾಶಿ
ಕೆಲಸದ ಬಗ್ಗೆ ಚಿಂತೆ ಕಾಡಬಹುದು, ನಕಾರಾತ್ಮಕತೆಯಿಂದ ದೂರವಿರಿ. ಇನ್ನು ವಾದ ಮಾಡುವಾಗ ನಿಮ್ಮ ಮಾತಿನ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬದ ಬಗ್ಗೆ ಹೇಳುವುದಾದರೆ ಕೆಲವೊಂದು ಅಸಮಧಾನ ಉಂಟಾಗಬಹುದು, ಆದರೆ ನಿಮ್ಮ ಕೋಪ ನಿಯಂತ್ರಿಸಲು ಸಲಹೆ ನೀಡಲಾಗುವುದು. ಹೆಚ್ಚಿನ ಚಿಂತೆ ಆರೋಗ್ಯ ಮೇಲೆ ಪರಿಣಾಮ ಬೀರಬಹುದು, ಹಾಗಾಗಿ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಸಂಜೆ 7 ರಿಂದ 11:30 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ, ವ್ಯಾಪಾರಿಗಳಿಗೂ ಈ ದಿನ ಉತ್ತಮವಾಗಿದೆ. ಮನೆಯಲ್ಲಿನ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಿ, ಕೋಪ ಸಮಸ್ಯೆ ಹೆಚ್ಚಿಸಬಹುದು ಹಾಗಾಗಿ ಜಾಗ್ರತೆವಹಿಸಬೇಕು. ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಬೆಳಿಗ್ಗೆ 6:20 ರಿಂದ 9:20 ರವರೆಗೆ
ತುಲಾ ರಾಶಿ
ಈ ದಿನ ನೀವು ಹಣದ ವಿಷಯದಲ್ಲಿ ಅಥವಾ ಬೆಲೆ ಬಾಳುವ ವಸ್ತುಗಳ ವಿಷಯದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗುವುದು . ಈ ದಿನ ಯಾವುದೇ ಹಣಕಾಸಿನ ನಿರ್ಧಾರ ಮಾಡದಿದ್ದರೆ ಒಳ್ಳೆಯದು. ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಚಿಕ್ಕ ತಪ್ಪು ಕೂಡ ದೊಡ್ಡದಾಗಿ ಬಿಂಬಿತವಾಗಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 41
ಶುಭ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಈ ದಿನ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಕೂಡ ಈ ದಿನ ತುಂಬಾ ಲಾಭದಾಯಕವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ಬಾಂಧವ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿಯೂ ಉತ್ತಮ ವಾತಾವರಣ ಇರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ತುಂಬಾ ತುಂಬಾ ಶುಭವಾಗಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 10
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ
ಧನು ರಾಶಿ
ಧನುರಾಶಿಯವರಿಗೆ ಈ ದಿನ ಶುಭವಾಗಿದೆ, ಕೆಲಸದಲ್ಲಿಯೂ ಬಯಸಿದ ಫಲ ಸಿಗಲಿದೆ, ವ್ಯಾಪಾರಿಗಳಿಗೂ ಉತ್ತಮವಾಗಿದೆ. ಅಲ್ಲದೆ ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಹೆಚ್ಚಾಗಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ. ಈ ದಿನ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 6 ರಿಂದ ರಾತ್ರಿ 8:30 ರವರೆಗೆ
ಮಕರ ರಾಶಿ
ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಒಳ್ಳೆಯ ದಿನ. ಕೆಲಸ ಕಾರ್ಯಗಳಲ್ಲಿ ಪ್ರಗತಿಯ ಸೂಚನೆ ಕಂಡು ಬರುತ್ತದೆ. ಆರೋಗ್ಯ ಕೂಡ ತುಂಬಾ ಚೆನ್ನಾಗಿರಲಿದೆ. ಇನ್ನು ಹೂಡಿಕೆಗೂ ಈ ದಿನ ತುಂಬಾ ಉತ್ತಮವಾಗಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ. ಸಂಬಂಧದಲ್ಲಿ ಏನಾದರು ಭಿನ್ನಾಭಿಪ್ರಾಯ ಉಂಟಾಗಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 27
ಶುಭ ಸಮಯ: ಬೆಳಿಗ್ಗೆ 8 ರಿಂದ 11:30 ರವರೆಗೆ
ಕುಂಭ ರಾಶಿ
ಈ ದಿನ ಕುಂಭ ರಾಶಿಯವರಿಗೆ ಶುಭವಾಗಿದೆ, ಕೆಲಸವನ್ನು ಬೇಗನೆ ಮುಗಿಸುವಿರಿ, ವ್ಯಾಪಾರಿಗಳು ವ್ಯಾಪಾರ ವೃದ್ಧಿಗೆ ಕೆಲ ಯೋಜನೆ ಮಾಡಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ನೀವು ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ ಸೂಕ್ತ ವೈದ್ಯರನ್ನು ಕಾಣಿ ಎಂದು ಸಲಹೆ ನೀಡಲಾಗುವುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಮೀನ ರಾಶಿ
ಯಾವುದೇ ಸಮಸ್ಯೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಸೂಕ್ತ ಸಮಯ ಬಂದಾಗ ಎಲ್ಲವೂ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಸವಾಲಿನ ದಿನ. ಮನೆಯಲ್ಲಿನ ಸಮಸ್ಯೆ ವೃತ್ತಿ ಬದುಕಿನ ಮೇಲೂ ಪರಿಣಾಮ ಬೀರಬಹುದು. ಖರ್ಚು ಹೆಚ್ಚಿರಲಿದೆ. ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ಆರೋಗ್ಯದ ವಿಷಯದಲ್ಲಿಯೂ ಏರಳಿತವಿರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 38
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications