Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಕ್ಟೋಬರ್ 5, ದಿನ ಭವಿಷ್ಯ: ದಿನದ ರಾಶಿಫಲ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ?
ಶುಭ ದಿನ, ಅಕ್ಟೋಬರ್ 5 ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಹಾಗಾಗಿ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಅರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಉದ್ಯಮಿಗಳ ಯಾವುದೇ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕ ಒತ್ತಡ ಕಡಿಮೆ ಇರಲಿದೆ, ವ್ಯಾಪಾರಿಗಳಿಗೆ ಧನಲಾಭವಾಗಲಿದೆ.ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಚಿಕ್ಕ ಭಿನ್ನಾಭಿಪ್ರಾಯವಿದ್ದರೂ ಸರಿಪಡಿಸಲು ಪ್ರಯತ್ನಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ಆರ್ಥಿಕ ದೃಷ್ಟಿಯಿಂದ ಈ ಸಮಯ ನಿಮಗೆ ಉತ್ತಮವಾಗಿದೆ. ಈ ದಿನ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ಕುಟುಂಬದಲ್ಲಿ ಸಾಮರಸ್ಯ ಕಾಪಾಡಲು ನೀವು ಕೋಪ ನಿಯಂತ್ರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ, ಮಾತನಾಡಿ ಬಗೆಹರಿಸಲು ಪ್ರಯತ್ನಿಸಬೇಕು. ತಲೆನೋವಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆವಿರಬಹುದು.
ಕರ್ಕ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸದ ಒತ್ತಡ ಮತ್ತು ಆಯಾಸದಿಂದ ಆರೋಗ್ಯ ಹದಗೆಡಬಹುದು, ಹಾಗಾಗಿ ವಿಶ್ರಾಂತಿ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಸಂಗಾತಿ ಜೊತೆಗೆ ಕೋಪಗೊಳ್ಳಬೇಡಿ, ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ.
ಮನೆಯಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಇಂದು ಹಿರಿಯರೊಂದಿಗೆ ಚರ್ಚೆ ನಡೆಸಬಹುದು. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ವ್ಯಾಪಾರಿಗಳಿಗೆ ಹಣದ ಹೂಡಿಕೆ ಮಾಡಲು ಜಾಗ್ರತೆವಹಿಸಬೇಕೆಂದು ಸಲಹೆ ನೀಡಲಾಗುವುದು. ಹಿರಿಯರ ಮಾತು ನಿರ್ಲಕ್ಷ್ಯ ಮಾಡಬೇಡಿ, ಕೆಲಸದ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲವು ಚರ್ಮ ಸಂಬಂಧಿ ಸಮಸ್ಯೆಗಳಿರಬಹುದು.
ತುಲಾ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ಉತ್ತಮ ಲಾಭ ಪಡೆಯಬಹುದು. ಈ ದಿನ ಸಾಲ ಕೊಡುವುದು, ಪಡೆಯುವುದು ಮಾಡಬೇಡಿ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ.
ಪ್ರೇಮಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ
ಈ ದಿನ ನಿಮ್ಮ ಗೌರವ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರಬಹುದು. ಕೆಲಸದ ಸ್ಥಳದಲ್ಲಿ ನೀವು ಕೆಲವು ಹೊಸ ಸವಾಲುಗಳನ್ನು ಎದುರಿಸಬಹುದು, ಆದರೆ ಆತ್ಮವಿಶ್ವಾಸದಿಂದ ಎದುರಿಸಿ. ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಆತುರದಲ್ಲಿ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಮೈಕೈ ನೋವಿನ ಸಮಸ್ಯೆವಿರಬಹುದು.
ಧನು ರಾಶಿ
ನೀವು ಅವಿವಾಹಿತರಾಗಿದ್ದರೆ ಮದುವೆ ಪ್ರಸ್ತಾಪ ಬರಬಹುದು. ಈ ದಿನ ನಿಮ್ಮ ಕೆಲಸ ಕಾರ್ಯಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ವಿವಾಹಿತರು ಸಂಗಾತಿಯ ಮನಸ್ಸು ನೋಯಿಸದಂತೆ ಜಾಗ್ರತೆವಹಿಸಿ. ಇನ್ನು ಆರೋಗ್ಯದ ಬಗ್ಗೆ ನೀವು ಕಾಳಜಿವಹಿಸಬೇಕು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಮಕರ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ಖರ್ಚು ಕೂಡ ಹೆಚ್ಚಾಗಬಹುದು. ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರಯತ್ನಿಸಬೇಕು. ದೊಡ್ಡ ಆರ್ಥಿಕ ಲಾಭಗಳಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಕುಂಭ ರಾಶಿ
ನೀವು ಕೆಲವು ಶುಭ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯಬಹುದು. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳು ಜಾಗ್ರತೆವಹಿಸಬೇಕು. ಪ್ರಮುಖ ಕೆಲಸ ಮಾಡುವಾಗ ಆತುರಪಡಬೇಡಿ, ಕುಟುಂಬ ಜೀವನದ ಕಡೆಗೆ ಗಮನಹರಿಸಿ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ.
ಮೀನ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗುತ್ತವೆ. ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಪರಿಹಾರವಾಗುತ್ತವೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರ ಸಿಗಲಿದೆ. ನೀವು ನಿರುದ್ಯೋಗಿಯಾಗಿದ್ದರೆ ಬಯಸಿದ ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ನೀವು ದೊಡ್ಡ ಸುಧಾರಣೆ ಕಂಡು ಬರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










