Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ, ಅಕ್ಟೋಬರ್ 7: ಶುಭ ಸೋಮವಾರ, ದ್ವಾದಶ ರಾಶಿಗಳಿಗೆ ಈ ದಿನ ಹೇಗಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ದಿನ ಭವಿಷ್ಯ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ತುಂಬಾ ಮುಖ್ಯವಾದ ದಿನ, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕೆಲಸದಲ್ಲಿ ಅಡೆತಡೆ ದೂರಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಈ ದಿನ ಸರಾಸರಿಯಾಗಿರಲಿದೆ.

ವೃಷಭ ರಾಶಿ
ನೀವು ಕೆಲಸ ಅಂತ ಹೆಚ್ಚು ಆಯಾಸ ಮಾಡಿಕೊಳ್ಳಬೇಡಿ. ಈ ದಿನ ಕೆಲಸದ ಜೊತೆಗೆ ಆರೋಗ್ಯದ ಕಡೆಯೂ ಗಮನಹರಿಸಬೇಕು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ದಿನ ಜಾಗ್ರತೆವಹಿಸಬೇಕು. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನೀವು ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು, ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ನಿಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಿ. ಕಾನೂನು ವಿಷಯವನ್ನು ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಆರೋಗ್ಯದ ವಿಷಯದಲ್ಲಿ ಮಿಶ್ರಫಲ. ಕೆಲಸದಲ್ಲಿ ಹೆಚ್ಚು ಒತ್ತಡವಿರಲಿದೆ, ಇನ್ನು ಹಣದ ಬಗ್ಗೆ ಹೇಳುವುದಾದರೆ ದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಈ ದಿನ ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ನೀವು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿ. ಅನಗ್ಯತ ಚಿಂತೆಗಳಿಂದ ದೂರವಿರಿ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ಉತ್ತಮವಾಗಿರಲಿದೆ. ಈ ದಿನ ಖುಷಿಯಿಂದ ಇರುತ್ತೀರಿ. ವ್ಯಾಪಾರಿಗಳು ಧನ ಲಾಭ ದೊರೆಯಲಿದೆ. ನಿಮ್ಮ ಹಾಗೂ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಕನ್ಯಾ ರಾಶಿ
ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ.
ನಿಮ್ಮ ನಡುವೆ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ತುಲಾ ರಾಶಿ
ಈ ದಿನ ನೀವು ಏರಳಿತವಿರಬಹುದು, ತಾಳ್ಮೆ ತುಂಬಾ ಮುಖ್ಯ. ಬೇಡದ ವಿಚಾರದ ಕಡೆಗೆ ಗಮನಹರಿಸಬೇಡಿ. ಉತ್ತಮ ಲಾಭ ಗಳಿಸಲು ವ್ಯಾಪಾರಿಗಳು ಹೆಚ್ಚಿನ ಶ್ರಮ ಹಾಕಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ನೀವು ಕೆಲವು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಇರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಧನು ರಾಶಿ
ಮನೆಯಲ್ಲಿ ನಡೆಯುತ್ತಿರುವ ಸಮಸ್ಯೆಗಳು ನಿಮ್ಮ ಚಿಂತ ಹೆಚ್ಚಿಸಬಹುದು, ನೀವು ಭಿನ್ನಾಭಿಪ್ರಾಯ ಶಾಂತ ರೀತಿಯಲ್ಲಿ ಬಗೆಹರಿಸಲು ಪ್ರಯತ್ನಿಸಿ. ಇತರ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಕೆಲಸದ ಕಡೆಗೆ ಗಮನಹರಿಸಿ. ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ನೀವು ನಿಮ್ಮ ಸಂಬಂಧದ ಕಡೆಗೆ ಗಮನಹರಿಸಿ.
ಸ್ಥಗಿತಗೊಂಡ ಹಣಕಾಸಿನ ವಹಿವಾಟುಗಳು ಪೂರ್ಣಗೊಳ್ಳುತ್ತವೆ. ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಅದರ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ಆರ್ಥಿಕವಾಗಿ ಈ ದಿನ ಏರಳಿತವಿರಬಹುದು. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ.
ಮೀನ ರಾಶಿ
ಈ ದಿನ ಶುಭವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಕುಟುಂಬದ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯಕ್ಕಾಗಿ ವಿಶ್ರಾಂತಿ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications