ಅಕ್ಟೋಬರ್ 8, ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ವೈದಿಕಶಾಸ್ತ್ರದ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ಕೆಲಸವನ್ನು ಪೂರ್ಣಗೊಳಿಸಲು ಅಡೆತಡೆ ಉಂಟಾಗಬಹುದು. ಆದರೆ ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ನೀವು ವೈವಾಹಿಕ ಜೀವನದ ಕಡೆಯೂ ಗಮನಹರಿಸಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.

October 8 Daily Horoscope

ವೃಷಭ ರಾಶಿ

ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಆದರೆ ಹೂಡಿಕೆಗೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಿ. ಇನ್ನು ಕೆಲಸದ ಜಾಗದಲ್ಲಿ ಒಳ ರಾಜಕೀಯದಿಂದ ದೂರವಿರಿ. ಇನ್ನು ನಿಮ್ಮ ಹಾಗು ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.

ಮಿಥುನ ರಾಶಿ

ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ, ಮನೆಯಲ್ಲಿ ಮದುವೆ ವಯಸ್ಸಿನ ಸದಸ್ಯರಿದ್ದರೆ ಶೀಘ್ರವೇ ಶುಭ ಕಾರ್ಯ ನಡೆಯಲಿದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಕಂಡು ಬರುವುದು.

ಕರ್ಕ ರಾಶಿ

ಈ ದಿನ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರು ಅದರಿಂದ ಕುಟುಂಬಕ್ಕೆ ತೊಂದರೆಯಾಗುವುದೇ ಎಂದು ನೋಡುವುದು ಒಳ್ಳೆಯದು. ಯಾವುದಾದರು ಕೆಲಸ ಅರ್ಧದಲ್ಲಿ ನಿಂತಿದ್ದರೆ ಅದನ್ನು ಪ್ರಾರಂಭಿಸಲು ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.

ಸಿಂಹ ರಾಶಿ

ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಆದರೆ ಹೂಡಿಕೆ ಮಾಡುವುದಾದರೆ ಮಾತ್ರ ಅವಸರ ಪಡಬೇಡಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಕನ್ಯಾ ರಾಶಿ

ಕನ್ಯಾ ರಾಶಿಯವರು ವೈಯಕ್ತಿಕ ಜೀವನದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರಿಗಳು ಕೂಡ ಈ ದಿನ ಹೆಚ್ಚು ಒತ್ತಡ ಹಾಕಬೇಕು. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೆಗಡಿ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳಿರಬಹುದು.

ತುಲಾ ರಾಶಿ

ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನೀವು ಪಾಲುದಾರಿಕೆಯಲ್ಲಿ ಯಾವುದೇ ವ್ಯವಹಾರವನ್ನು ಮಾಡಲು ಬಯಸಿದರೆ ನಿಮ್ಮ ಯೋಜನೆಯನ್ನು ಕಾರ್ಯಗತಗೊಳಿಸಲು ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗ್ಯಾಸ್, ಮಲಬದ್ಧತೆ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.

ವೃಶ್ಚಿಕ ರಾಶಿ

ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಪ್ರಗತಿಯ ಬಲವಾದ ಸಾಧ್ಯತೆಯಿದೆ. ವ್ಯವಹಾರರ್ಸತರು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ಆದರೆ ಸಂಗಾತಿಯ ಜೊತೆಗೆ ಕೆಲ ವಿಷಯಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ಧನು ರಾಶಿ

ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು. ನಿಮ್ಮ ಹಾಗೂ ಸಂಗಾತಿಯೊಂದಿಗಿನ ಬಾಂಧವ್ಯ ಸುಧಾರಿಸಲಿದೆ.
ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪ್ರೀತಿಪಾತ್ರರಿಂದ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ನೋಡುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.

ಮಕರ ರಾಶಿ

ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಉದ್ಯೋಗದಲ್ಲಿರುವ ಅಡೆತಡೆ ಬಗೆಹರಿಯಲಿದೆ. ಸಂಗಾತಿಯನ್ನು ಅನುಮಾನಿಸಬೇಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಕುಂಭ ರಾಶಿ

ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸಕ್ಕೆ ಹುಡುಕುತ್ತಿದ್ದರೆ ಈ ದಿನ ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುತ್ತವೆ. ನಿಮ್ಮ ಕೆಲಸವನ್ನು ಉತ್ತಮವಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಗ್ರೇನ್‌ ಸಮಸ್ಯೆವಿರಬಹುದು.

ಮೀನ ರಾಶಿ

ಕೆಲಸದ ಜಾಗದಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಬಂಧದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

October 8, Daily Horoscope: Effects n 12 Zodiac Signs In Kannada

October 8, Daily Horoscope: Here how it effects on your zodiac signs on this day, read on..
Story first published: Monday, October 7, 2024, 19:40 [IST]
X
Desktop Bottom Promotion