Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಕ್ಟೋಬರ್ 9, ದಿನ ಭವಿಷ್ಯ: ನವರಾತ್ರಿ 7ನೇ ದಿನ, ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಅಕ್ಟೋಬರ್ 9ಕ್ಕೆ ನವರಾತ್ರಿ 7ನೇ ದಿನ, ಈ ದಿನದ ರಾಶಿಫಲ ನೋಡುವುದಾದರೆ....
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರ. ಆದರೆ ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಯಾವುದೇ ಹಣದ ವ್ಯವಹಾರ ಮಾಡಲು ಹೋಗಬೇಡಿ. ಮನೆಯಲದಲಿ ವಾತಾವರಣ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ವೃಷಭ ರಾಶಿ
ಈ ದಿನ ಮನೆಯ ವಾತಾವರಣ ಮಾನಸಿಕ ಒತ್ತಡದ ಮೇಲೆ ಪರಿಣಾಮ ಬೀರುವುದು. ಅಲ್ಲದೆ ಆರೋಗ್ಯದ ಕಡೆಗೆ ಕೂಡ ಗಮನಹರಿಸಬೇಕು. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಜಗಳ ಹೆಚ್ಚಾಗಲು ಬಿಡಬೇಡಿ. ಅವರ ಜೊತೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಈ ದಿನ ಹಣದ ವ್ಯವಹಾರ ಮಾಡಲು ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ಆರೋಗ್ಯ ಉತ್ತಮವಾಗಿರಲಿದೆ.
ಕರ್ಕ ರಾಶಿ
ನೀವು ಆದಾಯ ಹಾಗೂ ವೆಚ್ಚಗಳ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಿ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ.ಆರೋಗ್ಯದ ಬಗ್ಗೆ ಹೇಳುವುದಾದರೆ ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ನಿಮ್ಮ ಆಪ್ತರ ಸಲಹೆ ಪಡೆಯಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಬಗೆಹರಿಯುವುದರಿಂದ ದೊಡ್ಡ ಚಿಂತೆ ದೂರಾಗಲಿದೆ. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ಈ ಅವಧಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆಹಾರಕ್ರಮದ ಕಡೆಗೆ ಗಮನಹರಿಸಬೇಕು.
ತುಲಾ ರಾಶಿ
ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಈ ದಿನ ಯಾವುದೇ ಹಣದ ವಹಿವಾಟು ಮಾಡಬೇಡಿ. ನೀವು ಇತರರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಉಂಟಾಗಬಹುದು.
ವೃಶ್ಚಿಕ ರಾಶಿ
ನೀವು ಬೆಲೆ ಬಾಳುವ ವಸ್ತುವಿನ ಬಗ್ಗೆ ಜಾಗ್ರತೆವಹಿಸಬೇಕು. ಅಲ್ಲದೆ ವೈಯಕ್ತಿಕ ಜೀವನದಲ್ಲಿ ನಿಮ್ಮ ಹಾಗೂ ಸಂಗಾತಿ ನಡುವಿನ ಕೆಲ ಮನಸ್ತಾಪವಿರಬಹುದು. ಈ ಸಮಯದಲ್ಲಿ ಕೆಲಸದಲ್ಲಿ
ನೀವು ಯಾವುದೇ ರೀತಿಯ ಬದಲಾವಣೆಯನ್ನು ತಪ್ಪಿಸಬೇಕು. ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಸಮಸ್ಯೆಗಳಿರಬಹುದು.
ಧನು ರಾಶಿ
ಯಾವುದೇ ಆಸ್ತಿ ಸಂಬಂಧಿತ ವಿಷಯ ನಡೆಯುತ್ತಿದ್ದರೆ ಅದು ಬಗೆಹರಿಯುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಕೆಲಸದ ಜಾಗದಲ್ಲಿ ನಿಮ್ಮ ಕೆಲಸವು ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಕುಟುಂಬದವರ ಮನಸ್ಸು ನೋಯಿಸುವ ಕಾರ್ಯ ಮಾಡಬೇಡಿ. ನಿಮ್ಮ ಸಂಸಾರದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡದಂತೆ ಜಾಗ್ರತೆವಹಿಸಿ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಮಕರ ರಾಶಿ
ನೀವು ಮಾತಿನ ಕಡೆಗೆ ಗಮನಹರಿಸಬೇಕು, ವ್ಯಾಪಾರಿಗಳು ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯ ಸಮಸ್ಯೆಯಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ಮೇಲಾಧಿಕಾರಿಗಳ ಮಾತು ನಿರ್ಲಕ್ಷ್ಯ ಮಾಡಬೇಡಿ. ಒಟ್ಟಿನಲ್ಲಿ ಈ ದಿನ ಸ್ವಲ್ಪ ಜಾಗ್ರತೆವಹಿಸಿದರೆ ಒಳ್ಳೆಯದು.
ಕುಂಭ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಬಹುದು. ಕೆಲಸದ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಸಂಬಂಧಗಳಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಮೀನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಹೊಸ ವ್ಯಾಪಾರ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಲು ದಿನವು ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿಡಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಕತ್ತಿ ಮುಂತಾದ ವಸ್ತು ಬಳಸುವಾಗ ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










