Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಡಿಸೆಂಬರ್‌ನಲ್ಲಿದೆ ಈ 3 ಪ್ರಮುಖ ಗ್ರಹಗಳ ಸಂಚಾರ:ಈ 3 ರಾಶಿಯವರಿಗೆ ಎಲ್ಲಾ ರೀತಿಯಲ್ಲಿಯೂ ಶುಭ ಸೂಚನೆ
ಡಿಸೆಂಬರ್ ವರ್ಷದ ಕೊನೆಯ ತಿಂಗಳು, ಈ ತಿಂಗಳಿನಲ್ಲಿಯೂ ಹಲವು ಪ್ರಮುಖ ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿದೆ. ಸೂರ್ಯ, ಶುಕ್ರ, ಬುಧನು ರಾಶಿ ಬದಲಾವಣೆ ಮಾಡಲಿದೆ, ಶುಕ್ರನು ಈ ತಿಂಗಳಿನಲ್ಲಿ ಎರಡು ಬಾರಿ ರಾಶಿ ಬದಲಾವಣೆ ಮಾಡುತ್ತಿದೆ. ಈ ಎಲ್ಲಾ ಗ್ರಹಗಳ ರಾಶಿ ಬದಲಾವಣೆ ಕೆಲ ರಾಶಿಗಳಿಗೆ ಅನುಕೂಲಕರವಾಗಿರಲಿದೆ.

ಯಾವಾಗ ಈ ರಾಶಿಗಳ ಬದಲಾವಣೆಯಿದೆ?
ಡಿಸೆಂಬರ್ 2ಕ್ಕೆ ಶುಕ್ರನು ಮಕರ ರಾಶಿಗೆ ಸಂಚರಿಸಲಿದೆ
ಡಿಸೆಂಬರ್ 15ಕ್ಕೆ ಸೂರ್ಯ ಧನು ರಾಶಿಗೆ ಪ್ರವೇಶ ಮಾಡಲಿದೆ
ಡಿಸೆಂಬರ್ 15ಕ್ಕೆ ಬುಧನು ವೃಶ್ಚಿಕ ರಾಶಿಯಲ್ಲಿ ಮಾರ್ಗಿಯಾಗಿ ಸಂಚರಿಸಲಿದೆ
ಡಿಸೆಂಬರ್ 28ಕ್ಕೆ ಶುಕ್ರನು ಕುಂಭ ರಾಶಿಗೆ ಸಂಚರಿಸಲಿದೆ
ಈ ಮೂರು ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರವಾಗಿದೆ
ಮಕರ ರಾಶಿ
ಈ ರಾಶಿ ಸಂಚಾರ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿರಲಿದೆ.
ಈ ಅವಧಿ ವ್ಯಾಪಾರಸ್ಥರಿಗೂ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಹೂಡಿಕೆ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ.
ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ಮೂರು ಗ್ರಹಗಳ ಸಂಚಾರ ತುಂಬಾನೇ ಶುಭವಾಗಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಫಲ ಅನುಭವಿಸುತ್ತೀರಿ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ, ಈ ಅವಧಿಯಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಲಾಭ ಸಿಗಲಿದೆ.
ಹಣದ ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಬೇಕು ಅಥವಾ ವಾಹನ ಖರೀದಿ ಮಾಡಬೇಕೆಂದು ಬಯಸುವವರಿಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿದೆ.
ಈ ಸಮಯದಲ್ಲಿ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಿದರೆ ತುಂಬಾನೇ ಅನುಕೂಲಕರವಾಗಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಸಿಂಹ ರಾಶಿ
ಈ ಮೂರು ಗ್ರಹಗಳ ಸಂಚಾರ ಸಿಂಹ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಧನ ಲಾಭವಾಗಲಿದೆ. ಈ ಅವಧಿಯಲ್ಲಿ ಹಣವನ್ನು ದುಪ್ಪಟ್ಟು ಮಾಡಲು ನೀವು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೂ ಈ ಅವಧಿ ಅನುಕೂಲಕರವಾಗಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಕೂಡ ಈ ಅವಧಿ ತುಂಬಾ ಉತ್ತಮವಾಗಿರಲಿದೆ.
ಈ ಅವಧಿ ಸಂಬಂಧದ ವಿಷಯದಲ್ಲಿಯೂ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಮನೆಯ ವಾತಾವರಣ ಕೂಡ ಸಂತೋಷದಿಂದ ಕೂಡಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
