Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ
ಜುಲೈನಲ್ಲಿ ನಡೆಯಲಿರುವ ಈ 4 ಗ್ರಹಗಳ ಸಂಚಾರದಿಂದ ಈ 5 ರಾಶಿಯವರು ಹೆಚ್ಚು ಪ್ರಯೋಜನ ಪಡೆಯಲಿದ್ದಾರೆ
ಗ್ರಹಗಳ ಸಂಚಾರದ ದೃಷ್ಟಿಯಿಂದ ನೋಡುವುದಾದರೆ ಜುಲೈ ಮಾಸದಲ್ಲಿ 7ರಿಂದ ಗ್ರಹ ಸಂಚಾರ ಶುರುವಾಗುವುದು. ಮಂಗಳ, ಬುಧ, ಸೂರ್ಯ ಮತ್ತು ಶುಕ್ರ ಈ ನಾಲ್ಕು ಪ್ರಮುಖ ಗ್ರಹಗಳು ರಾಶಿ ಬದಲಾವಣೆ ಮಾಡಲಿದೆ .
ಮೊದಲಿಗೆ ಶುಕ್ರವು ಕರ್ಕ ರಾಶಿಗೆ ಜುಲೈ 7ಕ್ಕೆ ಪ್ರವೇಶ ಮಾಡಿದರೆ , ಈ ಮಾಸ ಸಿಂಹ ಸಂಕ್ರಾಂತಿ ಇದೆ. ಅಲ್ಲದೆ ಪ್ರಮುಖ ಗ್ರಹಗಳ ಸಂಯೋಗದಿಂದ ಲಕ್ಷ್ಮಿ ನಾರಾಯಣ ಯೋಗ ಕೂಡ ಉಂಟಾಗಲಿದೆ. ಈ ಎಲ್ಲಾ ಗ್ರಹಗಳ ಸಂಚಾರ ಕೆಲವು ರಾಶಿಯವರಿಗೆ ಅದ್ಭುತವಾಗಿದೆ, ಹಾಗಾಗಿ ಈ ಮಾಸ ಆ ರಾಶಿಯವರು ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯಬಹುದು.

ಬುಧ, ಶುಕ್ರದ ಸಂಯೋಗವಿದೆ, ಸೂರ್ಯ ಮತ್ತು ಗುರುವಿನ ಸಂಯೋಗವಿದೆ, ಅಲ್ಲದೆ ಅರ್ಧ ಮಾಸ ಸೂರ್ಯ ಶುಕ್ರ ಸಂಯೋಗವಿದೆ. ಹೀಗೆ ಜ್ಯೋತಿಷ್ಯದ ದೃಷ್ಟಿಯಿಂದ ಗ್ರಹಗಳ ಸಂಚಾರ ಈ ತಿಂಗಳು ಬಹಳ ವಿಶೇಷವಾಗಿದೆ, ಅಲ್ಲದೆ ಈ ಗ್ರಹಗಳ ಸಂಚಾರದಿಂದಾಗಿ ಈ ರಾಶಿಯವರು ಉತ್ತಮ ಪ್ರಯೋಜನ ಪಡೆಯಲಿದ್ದಾರೆ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಗ್ರಹಗಳ ಸಂಚಾರ ತುಂಬಾನೇ ಅನುಕೂಲಕರವಾಗಿದೆ, ನೀವು ನಿಮ್ಮ ಯೋಜನೆಯಂತೆಯೇ ಕೆಲಸವನ್ನು ಪೂರ್ಣಗೊಳಿಸಲಿದೆ. ಆರ್ಥಿಕವಾಗಿ ಈ ಮಾಸ ನಿಮಗೆ ಉತ್ತಮವಾಗಿದೆ. ವೈಯಕ್ತಿಕವಾಗಿ ಪ್ರಗತಿಯನ್ನು ಕಾಣುತ್ತೀರಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ನಿಮ್ಮ ಕ್ಷೇತ್ರದಲ್ಲಿ ಕೆಲವು ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಬಹುದು. ಇದು ನಿಮ್ಮ ವೃತ್ತಿ ಬದುಕಿನಲ್ಲಿ ಸಹಾಯ ಮಾಡುತ್ತದೆ. ಇನ್ನು ಮನೆಯಲ್ಲಿ ಕೆಲ ಶುಭ ಘಟನೆಗಳು ನಡೆಯಬಹುದು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಪ್ರೀತಿಯಲ್ಲಿದ್ದರೆ ಮದುವೆಯ ನಿರ್ಧಾರ ತೆಗೆದುಕೊಳ್ಳುತ್ತೀರಿ. ಆದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರನ್ನು ಭೇಟಿಯಾಗಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ನಾಲ್ಕೂ ಗ್ರಹಗಳ ಸಂಚಾರ ಅತ್ಯುತ್ತಮ ಲಾಭವನ್ನು ತಂದು ಕೊಡಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಬಹುದು. ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮದಿಂದ ನೀವು ಬಯಸಿದ ಫಲಿತಾಂಶಗಳನ್ನು ಪಡೆಯಬಹುದು. ಇನ್ನು ಹೊಸ ಕೆಲಸಕ್ಕೆ ಪ್ರಯತ್ನ ಪಡುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು. ಆರ್ಥಿಕ ಪ್ರಯತ್ನಗಳು ಫಲ ನೀಡಲಿದೆ. ಇನ್ನು ಕೆಲ ಅನಗ್ಯತ ಸಮಸ್ಯೆ ತಡೆಗಟ್ಟಲು ನೀವು ಕೋಪವನ್ನು ನಿಯಂತ್ರಿಸಿ. ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ, ಶುಭ ಕಾರ್ಯಗಳು ನಡೆಯಬಹುದು, ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ಗ್ರಹಗಳ ಸಂಚಾರದಿಂದ ಸಿಂಹ ರಾಶಿಯವರು ಕೂಡ ಉತ್ತಮ ಪ್ರಯೋಜನ ಪಡೆಯಬಹುದು. ಜುಲೈ ಮಾಸ ನಿಮಗೆ ಹೆಚ್ಚಿನ ಆರ್ಥಿಕ ಲಾಭ ನೀಡಲಿದೆ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಈ ಅವಧಿ ಇನ್ನಷ್ಟು ಉತ್ತಮವಾಗಿರಲಿದೆ, ಕೀರ್ತಿ ಹೆಚ್ಚಾಗಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ, ನಿಮ್ಮ ಗೌರವ ಹೆಚ್ಚಾಗುತ್ತದೆ. ಇನ್ನು ಒಂದು ಸಲಹೆಯೆಂದರೆ ಕಣ್ಮುಚ್ಚಿ ಯಾರನ್ನೂ ನಂಬದಿರಿ.
ತುಲಾ ರಾಶಿ
ಗ್ರಹಗತಿಗಳ ಸಂಚಾರ ತುಲಾ ರಾಶಿಯವರಿಗೆ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಗೊತ್ತು ಮಾಡಬಹುದು. ಇನ್ನು ನೀವು ಸ್ವಲ್ಪ ಸಮಯದಿಂದ ನೀವು ಆಸ್ತಿ ಅಥವಾ ವಾಹನ ಇತ್ಯಾದಿಗಳನ್ನು ಖರೀದಿಸಲು ಬಯಸಿದರೆ ಅದು ಈ ಮಾಸ ಕೈಗೂಡಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮಕರ ಸಂಕ್ರಾಂತಿ
ಮಕರ ರಾಶಿಯವರಿಗೆ ಈ ಮಾಸ ತುಂಬಾ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮ್ಮ ಪ್ರಮುಖ ಕೆಲಸ ಪೂರ್ಣವಾಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ನೀವು ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಇನ್ನು ವ್ಯಾಪಾರಿಗಳು ಈ ಸಮಯದಲ್ಲಿ ಮಾಡುವ ಪ್ರಯಾಣದಿಂದ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಆರ್ಥಿಕ ಲಾಭ ಗಳಿಸಲು ಸಾಧ್ಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











