Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸೆಪ್ಟೆಂಬರ್‌ನಲ್ಲಿದೆ 3 ಗ್ರಹಗಳ ಸಂಚಾರ: 4 ರಾಶಿಯವರು ಈ ಬಗ್ಗೆ ಜಾಗ್ರತೆ
ಸೆಪ್ಟೆಂಬರ್‌ನಲ್ಲಿದೆ 3 ಪ್ರಮುಖ ಗ್ರಹಗಳ ಸಂಚಾರವಿದೆ. ಸೂರ್ಯ, ಬುಧ ಹಾಗೂ ಶುಕ್ರ ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿವೆ. ಮೊದಲಿಗೆ ಬುಧನು ಸೆಪ್ಟೆಂಬರ್ 4ಕ್ಕೆ ಕರ್ಕ ರಾಶಿಯಿಂದ ಸಿಂಹ ರಾಶಿಗೆ ಸಂಚರಿಸಲಿದೆ. ಸೆಪ್ಟೆಂಬರ್ 16ಕ್ಕೆ ಸೂರ್ಯನು ಕನ್ಯಾ ರಾಶಿಗೆ ಸಂಚರಿಸಲಿದೆ. ಸೆಪ್ಟೆಂಬರ್ 18ಕ್ಕೆ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಸಂಚರಿಸಲಿದೆ.

ಬುಧಾದಿತ್ಯ ಯೋಗ ಇದೆ
ಸೆಪ್ಟೆಂಬರ್ 4ಕ್ಕೆ ಬುಧನು ಸಿಂಹ ರಾಶಿಗೆ ಸಂಚರಿಸಲಿದೆ. ಸೂರ್ಯನು ಕೂಡ ಸೆಪ್ಟೆಂಬರ್ 16ರವರೆಗೆ ಸಿಂಹ ರಾಶಿಯಲ್ಲಿಯೇ ಇರುವುದರಿಂದ ಬುಧಾದಿತ್ಯ ಯೋಗ ಉಂಟಾಗುವುದು.
ಈ ಗ್ರಹಗಳ ಸಂಚಾರ ಕೆಲ ರಾಶಿಗಳಿಗೆ ಅನುಕೂಲಕರವಲ್ಲ. ಈ ಗ್ರಹಗಳ ಸಂಚಾರದಿಂದಾಗಿ ಈ ರಾಶಿಯವರು ಕೆಲ ಸವಾಲುಗಳನ್ನು ಎದುರಿಸಬಹುದು:
ಕರ್ಕ ರಾಶಿ
ಈ ತಿಂಗಳ ಆರಂಭವು ನಿಮಗೆ ಉತ್ತಮವಾಗಿರುತ್ತದೆ. ಆದರೆದ ತಿಂಗಳ ಮಧ್ಯದಲ್ಲಿ ವೃತ್ತಿ ಜೀವನಕ್ಕೆ ಹಾಗೂ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಕೆಲ ಸವಾಲುಗಳನ್ನು ಎದುರಿಸಬಹುದು. ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಹಲವವು ಅಡೆತಡೆ ಉಂಟಾಗಬಹುದು. ನಿಮ್ಮ ಶತ್ರುಗಳು ನಿಮಗೆ ತೊಂದರೆಯನ್ನುಂಟು ಮಾಡಬಹುದು. ಈ ಅವಧಿಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗುವುದು, ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು.
ಮಿಥುನ ರಾಶಿ
ಗ್ರಹಗಳ ಸ್ಥಾನದಿಂದಾಗಿ ಜೀವನದಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು. ಅದೇ ಸಮಯದಲ್ಲಿ, ಈ ತಿಂಗಳಲ್ಲಿ ಸೂರ್ಯನು ನಿಮ್ಮನ್ನು ತಾಯಿಯ ಮನೆ ಎಂದು ಕರೆಯಲ್ಪಡುವ ನಾಲ್ಕನೇ ಮನೆಯಲ್ಲಿ ಪ್ರವೇಶಿಸಲಿದ್ದಾನೆ. ಈ ಅವಧಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಅವಧಿಯಲ್ಲಿ ಆರ್ಥಿಕ ಖರ್ಚು ಕೂಡ ಅಧಿಕವಿರಲಿದೆ.
ಕನ್ಯಾರಾಶಿ
ತಿಂಗಳ ಮಧ್ಯದಲ್ಲಿ ಸೂರ್ಯನು ನಿಮ್ಮ ಲಗ್ನ ಮನೆಗೆ ಪ್ರವೇಶಿಸಿದಾಗ ನಿಮ್ಮಲ್ಲಿ ಕೋಪ, ಅಹಂಕಾರ ಹೆಚ್ಚಿಸಬಹುದು, ಆತುರ ಆತುರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಹಣದ ಬಗ್ಗೆ ಕೂಡ ಜಾಗ್ರತೆವಹಿಸಬೇಕು.
ಮಕರ ರಾಶಿ
ಗ್ರಹಗತಿಗಳ ಸ್ಥಾನದಿಂದಾಗಿ ನಿಮ್ಮ ಖರ್ಚುಗಳು ಹೆಚ್ಚಾಗಲಿದೆ, ಬಜೆಟ್ ಮೀರಿ ಖರ್ಚು ಮಾಡಲು ಹೋಗಲೇಬೇಡಿ. ಇನ್ನು ಆರೋಗ್ಯದ ಬಗ್ಗೆ ಕೂಡ ಜಾಗ್ರತೆವಹಿಸಬೇಕು. ತುಂಬಾ ಸಮಯದಿಂದ ಆರೋಗ್ಯ ಸಮಸ್ಯೆಯಿದ್ದರೆ ಹೆಚ್ಚಿನ ಜಾಗ್ರತೆವಹಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications