Latest Updates
-
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್!
ರಾಹು-ಶುಕ್ರ ಸಂಯೋಗದಿಂದ ರೂಪುಗೊಂಡಿದೆ 3 ಶುಭಯೋಗ: ಈ 5 ರಾಶಿಯವರಿಗೆ ಶುಕ್ರದೆಸೆ
ಈ ವರ್ಷ ಮಾರ್ಚ್ 31ಕ್ಕೆ ಶುಕ್ರ ಮೀನ ರಾಶಿಗೆ ಸಂಚರಿಸಿದೆ, ಈ ಏಪ್ರಿಲ್ 24ರವರೆಗೆ ಶುಕ್ರ ಮೀನ ರಾಶಿಯಲ್ಲಿಯೇ ಇರಲಿದೆ. ಮೀನ ರಾಶಿಯಲ್ಲಿ ರಾಹು ಕೂಡ ಇದೆ. ಶುಕ್ರನು ರಾಹುವಿನೊಡನೆ ಸಂಯೋಗವಾಗಿರುವುದರಿಂದ ಅನೇಕ ರೀತಿಯ ರಾಜಯೋಗ ಉಂಟಾಗುದೆ.
ಲಕ್ಷ್ಮೀ ನಾರಾಯಣ ಯೋಗ, ವಿಪರೀತ ರಾಜಯೋಗ, ಮಾಲವ್ಯ ರಾಜಯೋಗ ಹೀಗೆ ಹಲವು ರಾಜಯೋಗ ರೂಪುಗೊಂಡಿದೆ. ಈ ಎಲ್ಲಾ ಯೋಗಗಳು ಒಂದೇ ಸಮಯದಲ್ಲಿ ರೂಪುಗೊಂಡಿರುವುದರಿಂದ ಕೆಲವು ರಾಶಿಗಳಿಗೆ ತುಂಬಾನೇ ಒಳ್ಳೆಯದು. ಈ 5 ರಾಶಿಗಳಿಗೆ ಶುಕ್ರದೆಸೆ:

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಸಮಯವು ತುಂಬಾ ಒಳ್ಳೆಯದು. ಈ ಸಮಯದಲ್ಕಿ ಉದ್ಯೋಗ, ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಈ ಸಮಯದಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ. ಹಠಾತ್ ಆರ್ಥಿಕ ಲಾಭ ಉಂಟಾಗಲಿದೆ. ಕೆಲಸ ಹುಡುಕುತ್ತಿರುವವರೆಗೆ ಹೊಸ ಉದ್ಯೋಗ ಅವಕಾಶ ಸಿಗಲಿದೆ. ನಿಮ್ಮ ಸೌಕರ್ಯಗಳು ಹೆಚ್ಚಲಿದೆ.
ಕರ್ಕ ರಾಶಿ
ಶುಕ್ರ ಮತ್ತು ರಾಹುಗಳ ಸಂಯೋಗದಿಂದಾಗಿ ಕರ್ಕ ರಾಶಿಯವರಿಗೆ ತುಂಬಾನೇ ಒಳ್ಳೆಯದು. ಉದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಬಹುದು ಮತ್ತು ಅವರ ಸಂಬಳವೂ ಹೆಚ್ಚಾಗಬಹುದು. ವ್ಯವಹಾರದಲ್ಲಿ ಉತ್ತಮ ಲಾಬ ಗಳಿಸಲು ಸಾಧ್ಯವಾಗುವುದು, ಈ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ಹಣದ ಕೊರತೆ ಇಲ್ಲದ ಕಾರಣ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳುವುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ತುಂಬಾನೇ ಉತ್ತಮವಾಗಿದೆ. ಈ ಸಮಯದಲ್ಲಿ ಶುಕ್ರ ಮತ್ತು ರಾಹುವಿನ ಸಂಯೋಗ ನಡೆಯುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಆರ್ಥಿಕ ಲಾಭ ಮತ್ತು ಅದೃಷ್ಟವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣುವಿರಿ. ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶ ಸಿಗಲಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ.
ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿ. ಮಾಲವ್ಯ ರಾಜಯೋಗವು ನಿಮ್ಮಏಳನೇ ಮನೆಯಲ್ಲಿ ರೂಪುಗೊಂಡಿದೆ. ಇದರಿಂದ ವೃತ್ತಿ ಹಾಗೂ ವೈಯಕ್ತಿಕ ಬದುಕು ತುಂಬಾನೇ ಚೆನ್ನಾಗಿರಲಿದೆ. ಉದ್ಯೋಗಿಗಳು ಹೊಸ ಅವಕಾಶಗಳನ್ನು ಪಡೆಯಬಹುದು, ಕೆಲಸದ ಸ್ಥಳದಲ್ಲಿ ಯಶಸ್ಸನ್ನು ಸಾಧಿಸಬಹುದು.
ಧನು ರಾಶಿ
ಧನು ರಾಶಿಯವರಿಗೆ ಈ ಅವಧಿ ತುಂಬಾನೇ ಒಳ್ಳೆಯದಿದೆ. ವಾಹನ ಅಥವಾ ಮನೆ ಖರೀದಿಸಲು ಬಯಸುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗುವುದು. ಈ ರಾಶಿಯ ರಾಜಕಾರಣಿಗಳಿಗೆ ತುಂಬಾನೇ ಒಳ್ಳೆಯದು. ವೈಯಕ್ತಿಕ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications