Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಇದೇ ತಿಂಗಳಿನಲ್ಲಿ ಆಗಲಿದೆ ರಾಹು-ಶುಕ್ರನ ಸಂಯೋಗ : ಈ 5 ರಾಶಿಗಳಿಗೆ ಚಿನ್ನದಂಥ ಅವಕಾಶ
ಜ್ಯೋತಿಷ್ಯದಲ್ಲಿ ರಾಹುವನ್ನು ನೆರಳಿನ ಗ್ರಹ ಎಂದು ಕರೆದರೆ ಶುಕ್ರನನ್ನು ಅದೃಷ್ಟದ ಗ್ರಹವೆಂದು ಕರೆಯುತ್ತಾರೆ. ಈ ನೆರಳಿನ ಗ್ರಹವಾದ ರಾಹು ಮತ್ತು ಶುಕ್ರ ಈ ತಿಂಗಳಿನಲ್ಲಿ ಒಂದೇ ರಾಶಿಯಲ್ಲಿ ಈ ಎರಡು ಗ್ರಹಗಳ ಸಂಯೋಗವಾಗುತ್ತಿದೆ. ಶುಕ್ರನು ಜನವರಿ 28ಕ್ಕೆ ಕುಂಭ ರಾಶಿಯನ್ನು ಬಿಟ್ಟು ಮೀನ ರಾಶಿಗೆ ಸಂಚರಿಸಿದಾಗ ಈ ಸಂಯೋಗವಾಗಲಿದೆ,ಈ ಎರಡು ಗ್ರಹಗಳ ಸಂಯೋಗವಾದಾಗ ಇದರ ಪ್ರಯೋಜನ ಈ ತಾಸಿಯವರು ಪಡೆಯಲಿದ್ದಾರೆ:

ಮಿಥುನ ರಾಶಿ
ಮಿಥುನ ರಾಶಿಯಲ್ಲಿ 10ನೇ ಮನೆಯಲ್ಲಿ ರಾಹು ಮತ್ತು ಶುಕ್ರ ಗ್ರಹದ ಸಂಯೋಗವಾಗುತ್ತಿದೆ. 10ನೇ ಮನೆಯನ್ನು ಕರ್ಮದ ಮನೆಯೆಂದು ಕರೆಯಲಾಗುವುದು.ಕರ್ಮದ ಮನೆಯಲ್ಲಿ ಎರಡು ಗ್ರಹಗಳ ಸಂಯೋಗ ನಿಮಗೆ ಒಳಿತು ಮಾಡುತ್ತದೆ. ವೃತ್ತಿ ಜೀವನದಲ್ಲಿ ಯಶಸ್ಸು ದೊರೆಯಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಇನ್ನು ಉದ್ಯೋಗ ಬದಲಾವಣೆಗೆ ಈ ಅವಧಿಯಲ್ಲಿ ಪ್ರಯತ್ನ ಮಾಡುತ್ತಿದ್ದರೆ ಈ ಸಂಯೋಗದ ಬಲದಿಂದ ನಿಮ್ಮ ಪ್ರಯತ್ನಕ್ಕೆ ಒಳ್ಳೆಯ ಫಲ ಸಿಗಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ಸಂಯೋಗ ನಿಮಗೆ ಎಲ್ಲಾ ರೀತಿಯಲ್ಲಿ ಒಳಿತು ಮಾಡಲಿದೆ.
ವೃಶ್ಚಿಕ ರಾಶಿ
ರಾಹು ಮತ್ತು ಶುಕ್ರ ಸಂಯೋಗ ವೃಶ್ಚಿಕ ರಾಶಿಯವರಿಗೆ ಹೆಚ್ಚು ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ವೈಯಕ್ತಿಕ ಜೀವನ ತುಂಬಾ ಚೆನ್ನಾಗಿರಲಿದೆ, ಸಂಬಂಧದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಆರ್ಥಿಕ ಜೀವನ ಚೆನ್ನಾಗಿರಲಿದೆ, ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಪಡೆಯಬಹುದು, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ. ಉಳಿತಾಯ ಮಾಡಲು ಸಾಧ್ಯವಾಗಲಿದೆ.
ಧನು ರಾಶಿ
ಮೀನ ರಾಶಿಯಲ್ಲಿ ಶುಕ್ರ ಮತ್ತು ರಾಹು ಗ್ರಹಗಳ ಸಂಯೋಗ ಧನು ರಾಶಿಯವರಿಗೆ ಶುಭವಾಗಿದೆ. ಈ ಸಮಯದಲ್ಲಿ ನಿಮ್ಮ ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಬಡ್ತಿಗಾಗಿ ಕಾಯುತ್ತಿರುವವರೆಗೆ ಈ ಸಮಯ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರ್ಥಿಕ ಪ್ರಯತ್ನಗಳು ಕೂಡ ಉತ್ತಮ ಫಲ ನೀಡಲಿದೆ. ಇನ್ನು ಮನೆ ಖರೀದಿ ಅಥವಾ ವಾಹನ ಖರೀದಿ ಬಗ್ಗೆ ಕೆಲ ಸಮಯದಿಂದ ಆಲೋಚನೆ ಮಾಡುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಕನಸು ನನಸಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ 2ನೇ ಮನೆಯಲ್ಲಿ ಶುಕ್ರ ಮತ್ತು ರಾಹು ಗ್ರಹಗಳ ಸಂಯೋಗವಾಗಲಿದೆ. ಈ ಸಮಯವು ನಿಮ್ಮ ವೃತ್ತಿ ಬದುಕಿಗೆ ತುಂಬಾನೇ ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ. ಹಣಕಾಸಿನ ದೃಷ್ಟಿಯಿಂದಲೂ ಉತ್ತಮವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ಮೀನ ರಾಶಿ
ಮೀನ ರಾಶಿಯಲ್ಲಿ ರಾಹುವಿದೆ, ಇದೀಗ ಶುಕ್ರನು ಮೀನ ರಾಶಿಗೆ ಸಂಚರಿಸಲಿದೆ. ಈ ರಾಹು-ಶುಕ್ರ ಯುತಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಬದುಕು ಸುಂದರವಾಗಿರಲಿದೆ. ವ್ಯಾಪಾರಿಳು ಉತ್ತಮ ಲಾಭ ಪಡೆಯುತ್ತೀರಿ. ಹಣದ ಸಮಸ್ಯೆ ಬಗೆಹರಿಯುವುದರಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಕಾಣಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications