Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಪೂರ್ವ ಭಾದ್ರಪದ ನಕ್ಷತ್ರಕ್ಕೆ ರಾಹು ಸಂಚಾರದಿಂದ ಈ 3 ರಾಶಿಯವರಿಗೆ ಅದೃಷ್ಟಕರ
ನವಗ್ರಹಗಳಲ್ಲಿ ರಾಹು ಮತ್ತು ಕೇತು ನೆರಳಿನ ಗ್ರಹವಾಗಿದ್ದು ಹಿಮ್ಮುಖವಾಗಿ ಚಲಿಸುವ ಗ್ರಹಗಳಾಗಿವೆ. ಈ ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು 18 ತಿಂಗಳು ತೆಗೆದುಕೊಳ್ಳುತ್ತದೆ.
ಇದೀಗ ರಾಹು ಗ್ರಹವು ಮೀನ ರಾಶಿಯಲ್ಲಿದೆ ಇದೆ, ಈ ರಾಹು ನಕ್ಷತ್ರ ಬದಲಾವಣೆ ಮಾಡಲಿದೆ. ರಾಹು ಶನಿ ಇರುವ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಸಂಚರಿಸಿದೆ. ಈ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಅಥವಾ ನಕ್ಷತ್ರದಲ್ಲಿ ಇರುವುದು ಒಳ್ಳೆಯದಲ್ಲ.

ರಾಹು ಜುಲೈ 8ಕ್ಕೆ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಸಂಚರಿಸಲಿದೆ, ಅಲ್ಲಿ ಶನಿ ಜೊತೆ ಸಂಯೋಗವಾಗಲಿದೆ, ಈ ಸಂಯೋಗ ಬಹುತೇಕ ರಾಶಿಗಳಿಗೆ ಒಳ್ಳೆಯದಲ್ಲ, ಆದರೆ 12 ರಾಶಿಗಳ ಮೇಲೂ ಒಂದೇ ರೀತಿ ಪ್ರಭಾವ ಬೀರುತ್ತದೆ ಎಂದೇನೂ ಇಲ್ಲ, ಈ ರಾಶಿಯವರು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯಲಿದ್ದಾರೆ:
ವೃಷಭ ರಾಶಿ
ರಾಹು ಪೂರ್ವಭಾದ್ರಪದ ನಕ್ಷತ್ರಕ್ಕೆ ಸಂಚರಿಸಿದಾಗ ವೃಷಭ ರಾಶಿಯ ಜನರಿಗೆ ಮಂಗಳಕರವಾಗಿರುತ್ತದೆ. ಈ ಅವಧಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಇನ್ನು ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಇನ್ನು ಈ ಅವಧಿಯಲ್ಲಿ ಉದ್ಯೋಗ ಹುಡುಕುತ್ತಿರುವವರೆಗೆ ಉತ್ತಮ ಕೆಲಸ ಸಿಗಲಿದೆ. ಇನ್ನು ಕೆಲಸ ಬದಲಾವಣೆ ಮಾಡಬೇಕೆಂದು ಇರುವವರೆಗೆ ಈ ಅವಧಿ ಒಳ್ಳೆಯದಿದೆ. ಆದಾಯ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಒಳ್ಳೆಯ ಯಶಸ್ಸು ಸಿಗಲಿದೆ.
ತುಲಾ ರಾಶಿ
ರಾಹು ನಿಮ್ಮ ಆರನೇ ಮನೆಯಲ್ಲಿ ನಕ್ಷತ್ರ ಬದಲಾಯಿಸುತ್ತಿದೆ. ಈ ರಾಶಿಯವರು ಜನರು ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಅವಧಿಯಲ್ಲಿ ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು, ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿ ಇರುವುದರಿಂದ ಹಣದ ಕೊರತೆಯಿಂದ ನಿಂತ ಕೆಲಸ ಮತ್ತು ಚುರುಕುಗೊಳ್ಳಲಿದೆ. ಉದ್ಯೋಗಿಗಳು ಬಡ್ತಿ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಸಂಬಳ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನ ಲಾಭವಾಗಲಿದೆ.
ವೃಶ್ಚಿಕ ರಾಶಿ
ರಾಹು ಮತ್ತು ಶನಿಯ ಸ್ಥಾನವು ನಿಮಗೆ ಮಂಗಳಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಉದ್ತೋಗಿಗಳಿಗೆ ಬಡ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕಾಗಿ ಚೆನ್ನಾಗಿ ಇರುವುದರಿಂದ ಮನೆಯ ಸೌಕರ್ಯ ಹೆಚ್ಚಾಗಲಿದೆ.
ಈ ಮಂತ್ರಗಳ ಪಠಣೆ ಮಾಡಿದರೆ ಇನ್ನೂ ಒಳ್ಳೆಯದು
ರಾಹು ಬೀಜ ಮಂತ್ರ
ಓಂ ಭ್ರಂ ಭ್ರೂಂ ಸಃ ರಾಹವೇ ನಮಃ
ರಾಹು ಮಂತ್ರ
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಂ ಸಿಂಘಿಕ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ ।
ರಾಹು ಗಾಯತ್ರಿ ಮಂತ್ರ
ಓಂ ನಾಕಧ್ವಜಾಯ ವಿದ್ಮಹೇ ಪದ್ಮ ಹಸ್ತಾಯ ಧೀಮಹಿ ತನ್ನೋ ರಾಹು ಪ್ರಚೋದಯಾತ್"
ರಾಹು ಶಾಂತಿ ಮಂತ್ರ
ಓಂ ರಾಹುವೇ ದೇವಯೇ ಶಾಂತಿಂ ರಾಹುವೇ ಕೃಪಯೇ ಕರೋತಿ ರಾಹುವಾಯೇ ಚಾಮಯೇ ಅಭಿಲಾಷತ್ ಓಂ ರಾಹುವೇ ನಮಃ ನಮಃ
ಈ ಮಂತ್ರಗಳ ಪಠಣೆಯಿಮದ ಅತ್ಯುತ್ತಮವಾದ ಪ್ರಯೋಜನ ಪಡೆಯಬಹುದು.
ಶನಿಯ ಈ ಮಂತ್ರಗಳನ್ನೂ ಪಠಿಸಿ
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ
ಈ ಮಂತ್ರಗಳ ಪಠಣೆಯಿಂದ ಶನಿಯ ಕೃಪೆಗೆ ಪಾತ್ರರಾಗಬಹುದು, ಅಲ್ಲದೆ ಶನಿ ಹಾಗೂ ರಾಹು ಕೃಪೆಯಿಂದ ನೀವು ಅತ್ಯುತ್ತಮ ಪ್ರಯೊಜನ ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
