Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಶನಿಯಿಂದ ರೂಪುಗೊಳ್ಳಲಿದೆ ಧನಯೋಗ: 2024ರಲ್ಲಿ ಈ 3 ರಾಶಿಯವರ ಸಂಪತ್ತು ವೃದ್ಧಿಸಲಿದೆ
ವೈದಿಕ ಶಾಸ್ತ್ರದ ಪ್ರಕಾರ 2024ರಲ್ಲಿ ಶನಿಯು ರಾಜಯೋಗವನ್ನು ಉಂಟು ಮಾಡುತ್ತದೆ. ಇದರಿಂದ ಕೆಲವು ರಾಶಿಗಳ ಸಂಪತ್ತು ಹೆಚ್ಚಾಗಲಿದೆ. 2024ರಲ್ಲಿ ನಿಮ್ಮ ಆಸೆಗಳು ನೆರವೇರಲಿದೆ. ವ್ಯವಹಾರದಲ್ಲಿ, ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು.
ಶನಿದೇವನ ಕೃಪೆಯಿಂದಾಗಿ ನೀವು ಆರ್ಥಿಕವಾಗಿ ತುಂಬಾನೇ ಬೆಳವಣಿಗೆ ಕಾಣುವಿರಿ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಸಿಗಲಿದೆ. ಇನ್ನು ಯಾವುದಾದರೂ ಉದ್ಯಮ ಪ್ರಾರಂಭಿಸಿದರೆ ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. 2024ರಲ್ಲಿ ಶನಿಯಿಂದಾಗಿ ರೂಪುಗೊಳ್ಳುವ ರಾಜಯೋಗದಿಂದಾಗ ಈ 3 ರಾಶಿಯವರಿಗೆ ಧನಯೋಗವಿದೆ. ಈ ರಾಶಿಯವರಿಗೆ 2024 ಆರ್ಥಿಕವಾಗಿ ತುಂಬಾನೇ ಒಳ್ಳೆಯದಿದೆ:

ಮಕರ ರಾಶಿ
ಧನ ಯೋಗದಿಂದಾಗಿ ಮಕರ ರಾಶಿಯವರು 2024ರಲ್ಲಿ ಒಳ್ಳೆಯ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ನೀವು ನಿಮ್ಮ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆಯುತ್ತೀರಿ, ನೀವು ವ್ಯವಹಾರದಲ್ಲಿ ಮಾಡುವ ಯೋಜನೆಗಳಲ್ಲಿ ಯಶಸ್ಸು ಕಾಣುವಿರಿ. ಅಲ್ಲದೆ ನಿಮಗೆ ಬರಬೇಕಾಗಿರುವ ಹಣ ಕೂಡ ಕೈ ಸೇರಲಿದೆ. ಇನ್ನು ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ 2024ರಲ್ಲಿ ಉತ್ತಮ ಅವಕಾಶ ಸಿಗಲಿದೆ. ಈ ಅವಧಿ ಹೂಡಿಕೆಗೆ ಅನುಕೂಲಕರವಾಗಿದೆ. ನೀವು ಏನಾದರೂ ಹೊಸ ವ್ಯವಹಾರ ಮಾಡಲು ಯೋಚಿಸುತ್ತಿದ್ದರೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಆರೋಗ್ಯದಲ್ಲಿ ಚಿಕ್ಕ-ಪುಟ್ಟ ಸಮಸ್ಯೆಗಳಿರಬಹುದು.
ವೃಷಭ ರಾಶಿ
2024ರಲ್ಲಿ ಶನಿಯು ವೃಷಭ ರಾಶಿಯವರಿಗೆ ಶನಿಯ ಸ್ಥಾನದಿಂದಾಗ ಧನಯೋಗ ಇರಲಿದೆ. ಆದ್ದರಿಂದ ಈ ಅವಧಿಯಲ್ಲಿ ನೀವು ಅತ್ಯಧಿಕ ಲಾಭವನ್ನು ಪಡೆಯಲು ಸಾಧ್ಯವಾಗುವುದು. ಈ ಅವಧಿಯಲ್ಲಿ ನೀವು ನಿಮ್ಮ ಹೂಡಿಕೆಯಿಂದ ಉತ್ತಮ ಲಾಭ ಗಳಿಸುತ್ತೀರಿ. ಇನ್ನು ನಿರುದ್ಯೋಗಿಗಳಾಗಿದ್ದರೆ ಅಥವಾ ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. 2024ರಲ್ಲಿ ನೀವು ಒಳ್ಳೆಯ ಉದ್ಯೋಗವನ್ನು ಪಡೆಯಲು ಸಾಧ್ಯವಾಗುವುದು. ಆರೋಗ್ಯ ಚೆನ್ನಾಗಿರಲಿದೆ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ. ಬಾಕಿಯುಳಿದಿರುವ ನಿಮ್ಮ ಕೆಲಸ ಕಾರ್ಯಗಳು ಸಂಪೂರ್ಣವಾಗುವುದು. 2024 ನಿಮಗೆ ಆರ್ಥಿಕ ದೃಷ್ಟಿಯಿಂದ ತುಂಬಾನೇ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ 2024ರಲ್ಲಿ ಅನೇಕ ಒಳ್ಳೆಯ ಘಟನೆಗಳು ಸಂಭವಿಸಲಿದೆ. ಧನಯೋಗದಿಂದಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ. ನಿಮ್ಮ ಹೂಡಿಕೆಗಳಿಗೆ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ. ಇನ್ನು ಕೋರ್ಟ್‌ನಲ್ಲಿ ಏನಾದರೂ ಕೇಸ್ ಇದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. 2024ರಲ್ಲಿ ನಿಮ್ಮ ಉಳಿತಾಯ ಹೆಚ್ಚಾಗಲಿದೆ. ಶನಿ ಧನ ಯೋಗ ಉಂಟು ಮಾಡುವುದರಿಂದ 2024 ನಿಮಗೆ ತುಂಬಾ ಉತ್ತಮವಾಗಿರಲಿದೆ.
ಯಾವಾಗ ಶನಿ ಗ್ರಹದಿಂದ ರಾಜಯೋಗ ಉಂಟಾಗುವುದು?
ಶನಿಯು ಮಕರ ಅಥವಾ ತುಲಾ ರಾಶಿಯ 1, 4, 7 ಅಥವಾ 10ನೇ ಮನೆಗೆ ಬಂದಾಗ ರಾಜಯೋಗ ಉಂಟಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications