Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Dina Bhavishya: ಸೆಪ್ಟೆಂಬರ್ 05ರ ಶುಕ್ರವಾರ ಯಾರಿಗೆಲ್ಲಾ ಶುಭಕರ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 05ರಂದು ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಮಂದಿಗೆ ಇಂದು ಸಮಸ್ಯೆಗಳ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಅಡ್ಡಿ ಎದುರಾಗಬಹುದು. ಹಲವು ರೀತಿಯ ಸಮಸ್ಯೆಗಳಿಗೆ ನಿಮ್ಮ ಹಣಕಾಸು ಕಾರಣವಾಗಬಹುದು. ಆಪ್ತರೊಬ್ಬರ ಅನಾರೋಗ್ಯ ಸಂಬಂಧವಾಗಿ ನಿಮಗೆ ಚಿಂತೆ ಕಾಡಬಹುದು.
ವೃಷಭ ರಾಶಿ
ವೃಷಭ ರಾಶಿಯ ಜನರಿಗೆ ಇಂದು ಬಹಳ ಅನುಕೂಲಕರ ದಿನ. ನಿಮ್ಮ ಹೊಸ ಕೆಲಸಗಳು ಲಾಭದಾಯಕವಾಗಲಿವೆ. ಅನೇಕರಲ್ಲಿ ಇಂದು ಪ್ರಯಾಣ ಮಾಡಬೇಕಾಗಿ ಬರಬಹುದು. ನಿಮ್ಮ ಹಣಕಾಸು ಕೆಲಸದಲ್ಲಿ ಅಚ್ಚರಿ ಪರಿಣಾಮ ನೋಡಬಹುದು.

ಮಿಥುನ ರಾಶಿ
ಮಿಥುನ ರಾಶಿಯ ಜನರಲ್ಲಿ ಇಂದು ಪ್ರಯಾಣ ಮಾಡುವಿರಿ. ನಿಮ್ಮ ಹಣಕಾಸು ಕುರಿತಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ. ನಿಮ್ಮ ಸಾಲದ ಪ್ರಮಾಣ ಹೆಚ್ಚಾಗಬಹುದು. ಮಕ್ಕಳ ಕುರಿತ ಖರ್ಚ ಹೆಚ್ಚಾಗಬಹುದು. ದಾಂಪತ್ಯ ಸಂಬಂಧವಾಗಿ ಉತ್ತಮ ದಿನವಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯ ಜನರಲ್ಲಿ ಇಂದು ಮಿಶ್ರ ಫಲದ ದಿನ. ನಿಮ್ಮ ಕೆಲಸಗಳಲ್ಲಿ ಅಡ್ಡಿಗಳು ಎದುರಾಗುವ ಸಂಭವ. ವಾಹನ ಸಂಬಂಧಿ ವಿಚಾರವಾಗಿ ನಿಮ್ಮಲ್ಲಿ ಹಣಕಾಸು ಖರ್ಚು ಬರಬಹುದು. ಸರ್ಕಾರಿ ನೌಕರರಲ್ಲಿ ಇಂದು ಉತ್ತಮ ದಿನವಾಗುತ್ತದೆ. ದೂರ ಪ್ರಯಾಣಗಳು ಸಂತಸ ತರಲಿವೆ.
ಸಿಂಹ ರಾಶಿ
ಸಿಂಹ ರಾಶಿಯ ಜನರಲ್ಲಿ ಇಂದು ಉತ್ತಮ ದಿನ. ಹಣಕಾಸು ವಿಚಾರದಲ್ಲಿ ಧನಾತ್ಮಕ ವಿಚಾರಗಳು ನಡೆಯಲಿವೆ. ಕೆಲಸದ ಸ್ಥಳದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ. ವಿವಾಹಿತರಲ್ಲಿ ಬಹಳ ಖರ್ಚಾಗುವ ದಿನವಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಅನುಕೂಲಕರ ದಿನವಾಗಿ ನೋಡಬಹುದು. ನಿಮ್ಮ ಹಲವು ಕೆಲಸಗಳನ್ನು ಪೂರ್ಣಗೊಳಿಸಲು ನೀವು ಯಶಸ್ವಿಯಾಗುತ್ತೀರಿ. ಅನೇಕರಲ್ಲಿ ಅತ್ಯುತ್ತಮ ದಿನವಾದರೂ ಖರ್ಚು ಹೆಚ್ಚಾಗಲಿದೆ. ಶುಭ ಕಾರ್ಯಕ್ರಮದಲ್ಲಿ ನೀವು ಭಾಗಿಯಾಗುತ್ತೀರಿ. ವ್ಯಾಪಾರಿಗಳಿಗೆ ಉತ್ತಮ ದಿನ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಇಂದು ಮಿಶ್ರಫಲದ ದಿನ. ನಿಮ್ಮ ಹಲವು ಕೆಲಸಗಳನ್ನು ಪೂರ್ಣ ಮಾಡುವಿರಿ. ಇಂದು ನಿಮ್ಮ ಆದಾಯಕ್ಕಿಂತ ಖರ್ಚು ಕೂಡ ಹೆಚ್ಚಾಗಲಿದೆ. ಸ್ವಂತ ಉದ್ಯೋಗ ಮಾಡುವವರು ಇಂದು ಬಹಳ ಶ್ರಮ ಹಾಕಬೇಕಾಗುತ್ತದೆ. ಆಸ್ಪತ್ರೆ ಸಂಬಂಧಿ ಖರ್ಚು ಇರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಗೃಹಿಣಿಯರಲ್ಲಿ ಇಂದು ಅನುಕೂಲಕರ ದಿನ, ಗೃಹಿಣಿಯರ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಇಂದು ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಹಣಕಾಸು ವ್ಯವಹಾರ ಮಾಡುವಾಗ ಎಚ್ಚರಿಕೆ ವಹಿಸಿ.
ಧನು ರಾಶಿ
ಧನು ರಾಶಿಯ ಜನರಲ್ಲಿ ಇಂದು ಮಿಶ್ರಫಲ. ನಿಮ್ಮ ಅನೇಕ ಕೆಲಸಗಳು ನಿಮ್ಮ ಆಯಾಸಕ್ಕೆ ಕಾರಣವಾಗಲಿದೆ. ಮನೆಯಲ್ಲಿ ಹಣಕಾಸು ಸಂಬಂಧವಾಗಿ ಒತ್ತಡ ಇರಲಿದೆ. ಹೊಸ ಕೆಲಸಗಳ ಆರಂಭಿಸುವಿರಿ. ನಿಮ್ಮ ಕೆಲಸಗಳಲ್ಲಿ ಅಡ್ಡಿ ಇರಬಹುದು. ದೇವಾಲಯ ಭೇಟಿಯಲ್ಲಿ ನೀವು ಆಸಕ್ತಿ ಹೊಂದಬಹುದು.
ಮಕರ ರಾಶಿ
ಮಕರ ರಾಶಿಯ ಜನರಲ್ಲಿ ಇಂದು ಬಹಳ ಅನುಕೂಲಕರ. ದಾಂಪತ್ಯ ವಿಚಾರವಾಗಿ ಬಹಳ ಸಮಯದಿಂದ ಕಾಡಿದ್ದ ಸಮಸ್ಯೆಯೊಂದು ನಿವಾರಣೆಯಾಗಲಿದೆ. ಇದು ನಿಮ್ಮ ಮನಃಶಾಂತಿಗೆ ಕಾರಣವಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಇಂದು ಅನುಕೂಲವಿದೆ. ನಿಮ್ಮ ಬಹಳ ಹಳೆಯ ಕೆಲಸಗಳ ಪೂರ್ಣ ಮಾಡಬಹುದು. ಮನೆಯಲ್ಲಿ ಶಾಂತಿ ಇರಲಿದೆ. ದ್ವಿಚಕ್ರ ವಾಹನ ಖರೀದಿಯ ಆಸಕ್ತಿ ಹೊಂದಿದ್ದರೆ ಆ ಕುರಿತಾಗಿ ಧನಾತ್ಮಕ ವಿಚಾರಗಳಿವೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಇಂದು ಮಿಶ್ರ ಫಲದ ದಿನ. ರಿಯಲ್ ಎಸ್ಟೇಟ್ ಹಾಗೆ ಸಣ್ಣ ಪುಟ್ಟ ಸ್ವಂತ ಉದ್ಯೋಗ ಮಾಡುವವರಿಗೆ ಧನಾತ್ಮಕ ದಿನ. ಪೋಷಕರ ಆರೋಗ್ಯ ಕುರಿತು ಗಮನವಿಡಿ. ಮಕ್ಕಳ ಕುರಿತ ಚಿಂತೆಯೊಂದು ದೂರಾಗಲಿದೆ. ದುಂದು ವೆಚ್ಚ ಕಡಿಮೆ ಮಾಡುವುದು ಉತ್ತಮ.



Click it and Unblock the Notifications