Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
24 September Horoscope: ಸೆಪ್ಟೆಂಬರ್ 24ರಂದು ಯಾರಿಗೆಲ್ಲಾ ಶುಭ ದಿನ
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 24 (24 September Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಇಂದು ನಿಮಗೆ ಅನಿರೀಕ್ಷಿತ ಪ್ರಯೋಜನಗಳನ್ನು ತರುತ್ತದೆ. ನಿಮ್ಮ ಹೊರಗಿನ ಕೆಲಸಗಳ ಜೊತೆಗೆ ಮನೆಕೆಲಸಗಳಿಗೆ ನೀವು ಸಮಯವನ್ನು ಮೀಸಲಿಡಬೇಕಾಗುತ್ತದೆ. ನಿಮ್ಮ ಸಂಗಾತಿಯು ನಿಮ್ಮೊಂದಿಗೆ ವಾದ ಮಾಡುವ ಸಾಧ್ಯತೆ ಹೆಚ್ಚು. ನಿಮ್ಮ ಮಕ್ಕಳು ಏನನ್ನಾದರೂ ಬೇಡಿಕೊಳ್ಳಬಹುದು, ಅದನ್ನು ನೀವು ಖಂಡಿತವಾಗಿಯೂ ಪೂರೈಸುವಿರಿ
ವೃಷಭ ರಾಶಿ
ಇಂದು ನೀವು ಆರೋಗ್ಯದ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು. ಭೌತಿಕ ಸುಖ ಹೆಚ್ಚಾಗಲಿದೆ. ನಿಮ್ಮ ಮಕ್ಕಳ ಕೆಲಸ ಸಂಬಂಧವಾಗಿ ಬಹಳ ಲಾಭವಿದೆ.
ತಂದೆ ಅಥವಾ ತಾಯಿ ನಿಮಗೆ ಜವಾಬ್ದಾರಿಯನ್ನು ನೀಡಿದರೆ, ಅದನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ.

ಮಿಥುನ ರಾಶಿ
ಇಂದು ನೀವು ನಿಮ್ಮ ಬಾಕಿ ಇರುವ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಸೋಮಾರಿತನವನ್ನು ಬಿಟ್ಟು ಇಂದು ಕೆಲಸ ಮಾಡಿ. ನಿಮ್ಮ ಬಹುಮುಖತೆಯಿಂದ ಪ್ರಯೋಜನ ಪಡೆಯುತ್ತೀರಿ. ಆರೋಗ್ಯ ಸುಧಾರಿಸಲಿದೆ.
ಕರ್ಕ ರಾಶಿ
ಇಂದು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಗಮನಹರಿಸಬೇಕಾಗುತ್ತದೆ, ನೀವು ದೀರ್ಘಕಾಲದ ಸಮಸ್ಯೆಗಳ ಬಗ್ಗೆ ಚಿಂತಿತರಾಗುತ್ತೀರಿ. ಉದರ ಸಂಬಂಧಿ ಸಮಸ್ಯೆ ಹೆಚ್ಚಾಗಬಹುದು, ಆಹಾರ ಕುರಿತ ಎಚ್ಚರಿಕೆ ಅಗತ್ಯ. ಕೆಲಸಗಳಲ್ಲಿ ಗಮನವಿಡಿ.
ಸಿಂಹ ರಾಶಿ
ಇಂದು ನೀವು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ ಮತ್ತು ನಿಮ್ಮ ಬುದ್ಧಿವಂತಿಕೆ ಮತ್ತು ವೇಚನೆಯ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಕುಟುಂಬ ಸದಸ್ಯರನ್ನು ಅಚ್ಚರಿಗೊಳಿಸುವಿರಿ. ಹಣಕಾಸು ಪರಿಸ್ಥಿತಿ ಸುಧಾರಿಸಲಿದೆ.
ಕನ್ಯಾ ರಾಶಿ
ನಿಮ್ಮ ಆರೋಗ್ಯವು ಇಂದು ಏರುಪೇರಾಗುತ್ತದೆ. ಪ್ರಮುಖ ಒಪ್ಪಂದವನ್ನು ಅಂತಿಮಗೊಳಿಸುವವರು ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ರಾಜಕೀಯ ಪ್ರಭಾವವನ್ನು ಹೊಂದಿರುತ್ತೀರಿ, ಅದು ಹೊಸ ಸ್ಥಾನಕ್ಕೆ ಕಾರಣವಾಗಬಹುದು. ನಿಮ್ಮ ಖರ್ಚುಗಳ ನಿಯಂತ್ರಣದಲ್ಲಿಡಿ.
ತುಲಾ ರಾಶಿ
ಇಂದು ನಿಮಗೆ ಮಿಶ್ರ ದಿನವಾಗಿರುತ್ತದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನೀವು ಸ್ನೇಹಿತರೊಂದಿಗೆ ಮೋಜು ಮಾಡಲು ಸ್ವಲ್ಪ ಸಮಯ ಕಳೆಯುತ್ತೀರಿ. ನಿಮ್ಮ ಸಂಗಾತಿಯು ಕೆಲಸದಲ್ಲಿ ಬಡ್ತಿಯನ್ನು ಪಡೆಯಬಹುದು.
ವೃಶ್ಚಿಕ ರಾಶಿ
ನೀವು ಇಂದು ಯಾವುದೇ ಅಪಾಯಕಾರಿ ಸಾಹಸವನ್ನು ಕೈಗೊಂಡರೆ, ಅದು ನಿಮ್ಮ ತೊಂದರೆಗಳನ್ನು ಹೆಚ್ಚಿಸಬಹುದು. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳು ಸಹ ಸುಧಾರಿಸುತ್ತವೆ. ಉದರ ಸಂಬಂಧಿಸಿದ ಸಮಸ್ಯೆ ಉದ್ಭವಿಸಬಹುದು, ಆದ್ದರಿಂದ ಅತಿಯಾದ ಹುರಿದ ಅಥವಾ ಮಸಾಲ ಭರಿತ ಆಹಾರದಿಂದ ದೂರ ಇರುವುದು ಉತ್ತಮ.
ಧನು ರಾಶಿ
ಇಂದು ನಿಮಗೆ ಉತ್ತಮ ದಿನವಾಗಿರಲಿದೆ. ವೈವಾಹಿಕ ಸಮಸ್ಯೆಗಳು ಬಗೆಹರಿಯುತ್ತವೆ. ನಿಮ್ಮ ಪೋಷಕರ ಸಲಹೆಯನ್ನು ನಿರ್ಲಕ್ಷಿಸಬೇಡಿ. ಸಂಪತ್ತಿನ ಹೆಚ್ಚಳದಿಂದಾಗಿ ನಿಮ್ಮ ಸಂತೋಷವು ಅಪರಿಮಿತವಾಗಿರುತ್ತದೆ. ಸ್ನೇಹಿತರ ಭೇಟಿಯಾಗಬಹುದು.
ಮಕರ ರಾಶಿ
ಇಂದು ವ್ಯಾಪಾರಿಗಳು ಬಹಳ ಲಾಭ ಪಡೆಯಲಿದ್ದಾರೆ. ನಿಮ್ಮ ಬಹುದಿನದ ಆಸೆಯೊಂದನ್ನು ಈಡೇರಿಸಿಕೊಳ್ಳಬಹುದು. ವ್ಯವಹಾರದಲ್ಲಿ ಸಂಪೂರ್ಣ ಲಾಭ ಮಾಡಬಹುದು. ಪ್ರಗತಿಯ ಹಾದಿಯಲ್ಲಿ ಅಡ್ಡಿಗಳಿರಬಹುದು. ಆರ್ಥಿಕ ಸ್ಥಿತಿ ಸುಧಾರಿಸಲಿದೆ.
ಕುಂಭ ರಾಶಿ
ಇಂದು ನಿಮಗೆ ಸಂತೋಷದ ದಿನವಾಗಿರುತ್ತದೆ. ನೀವು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಕಾಶವಿದೆ. ಆಪ್ತರಿಂದ ಉತ್ತಮ ಸುದ್ದಿಯೊಂದನ್ನು ಕೇಳುವಿರಿ.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಇಂದು ಉತ್ತಮ ದಿನ. ಮಕ್ಕಳ ಕುರಿತಾದ ಚಿಂತೆಯೊಂದು ದೂರಾಗಲಿದೆ. ವಾಹನದಿಂದ ಲಾಭವಿದೆ. ಉಪಕರಣ ಸಂಬಂಧಿ ವ್ಯಾಪಾರಿಗಳು ಲಾಭ ಮಾಡುವ ದಿನವಿದು. ಮನೆಯ ಹಿರಿಯ ಸದಸ್ಯರ ಆರೋಗ್ಯಕ್ಕೆ ಶ್ರಮ ವಹಿಸಬೇಕಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ.



Click it and Unblock the Notifications