ಸೆಪ್ಟೆಂಬರ್ 25ರ ರಾಶಿಫಲ: ಈ ದಿನ 12 ರಾಶಿಗಳಲ್ಲಿ ಯಾರಿಗೆ ಶುಭ ಯಾರಿಗಲ್ಲ

ಸೆಪ್ಟೆಂಬರ್ 25ರ ರಾಶಿಫಲ ಪ್ರಕಾರ ಈ ದಿನ 12 ರಾಶಿಗಳಿಗೆ ಹೇಗಿರಲಿದೆ:

ಮೇಷ ರಾಶಿ

ಈ ದಿನ ನಿಮಗೆ ಏರಳಿತಗಳಿಂದ ಕೂಡಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದ್ದೂರಿಯಾಗಿ ಖರ್ಚು ಮಾಡುವುದನ್ನು ತಪ್ಪಿಸಬೇಕು. ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ವೈವಾಹಿಕ ಜೀವನದಲ್ಲಿ ಸಂತೋಷ, ಶಾಂತಿ ಇರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.

September 25 daily Horoscope

ವೃಷಭ ರಾಶಿ

ವ್ಯಾಪಾರಿಗಳು ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ಆರೋಗ್ಯ ಸಮಸ್ಯೆಯಿದ್ದರೆ ಬಗೆಹರಿಸಲು ಪ್ರಯತ್ನಿಸಿ. ಇತರರನ್ನು ಟೀಕಿಸುವ ಬದಲು, ನಿಮ್ಮೊಳಗೆ ಕೆಲವು ಬದಲಾವಣೆಗಳನ್ನು ತರಲು ಪ್ರಯತ್ನಿಸಿದರೆ ಉತ್ತಮ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ

ಈ ದಿನ ನಿಮಗೆ ಶುಭವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತದೆ. ಸಂಬಂಧಗಳ ವಿಷಯದಲ್ಲಿ ದಿನವು ತುಂಬಾ ಉತ್ತಮವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.ಕೆಲಸದ ಸ್ಥಳದಲ್ಲಿ ನೀವು ಹೆಚ್ಚು ಕೆಲಸ ಮಾಡಬೇಕಾಗಬಹುದು. ಕೆಲಸದ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ.

ಕರ್ಕ ರಾಶಿ

ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ನಿಮಗೆವಹಿಸಿದ ಯಾವುದೇ ಕೆಲಸವನ್ನು ಮಾಡಲು ತುಂಬಾ ಹಿಂಜರಿಯಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ಪ್ರೆಮಿಗಳು ನಿಮ್ಮ ಸಂಬಂಧಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರವನ್ನು ನೀವು ತೆಗೆದುಕೊಳ್ಳಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸ ಅಂತ ಹೆಚ್ಚು ಆಯಾಸ ಮಾಡಿಕೊಳ್ಳದೆ ವಿಶ್ರಾಂತಿ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ಕೆಲಸದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ಸಂಬಂಧದ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಿ. ಪ್ರಮುಖ ಕೆಲಸ ಮಾಡುವಾಗ ಆತುರಪಡಬೇಡಿ. ನಿಮ್ಮ ಮಾತುಗಳು ಇತರರನ್ನು ನೋಯಿಸದಂತೆ ಜಾಗ್ರತೆವಹಿಸಿ.

ಕನ್ಯಾ ರಾಶಿ

ಈ ದಿನ ಕೆಲಸ ಕಾರ್ಯಗಳಲ್ಲಿ ಶುಭವಾಗಿದೆ, ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಸಹ ನೀವು ಪಡೆಯುತ್ತೀರಿ.ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಕೆಲಸ ಪೂರ್ಣಗೊಳ್ಳಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ತುಂಬಾ ಹೊತ್ತು ಹಸಿವಿನಿಂದ ಇರಬೇಡಿ.

ತುಲಾ ರಾಶಿ

ಈ ದಿನ ಓಡಾಟ ಅಧಿಕವಿರಲಿದೆ, ವೈಯಕ್ತಿಕ ಅಥವಾ ವೃತ್ತಿಪರ ಜೀವನ ಜವಾಬ್ದಾರಿಗಳು ಹೆಚ್ಚಿರಲಿದೆ, ನಿಮ್ಮ ಕೆಲಸವನ್ನು ಯೋಜನೆಯಂತೆ ಮಾಡುತ್ತಾ ಹೋದರೆ ಒಳ್ಳೆಯದು, ಹಣದ ಬಗ್ಗೆ ಹೆಚ್ಚು ಚಿಂತಿಸುವುದನ್ನು ತಪ್ಪಿಸಿ. ನಿಮ್ಮ ಮನಸ್ಥಿತಿ ತುಂಬಾ ಉತ್ತಮವಾಗಿರುತ್ತದೆ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದರೆ ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ಈ ದಿನ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ಈ ದಿನ ಮನೆಯ ವಾತಾವರಣ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಕೂಡ ಈ ದಿನ ನಿಮಗೆ ಉತ್ತಮವಾಗಿದೆ.

ಧನು ರಾಶಿ

ಈ ದಿನ ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಇರುತ್ತದೆ. ನಿಮಗೆ ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ. ಬಹಳ ಸಮಯದ ನಂತರ, ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ. ದೊಡ್ಡ ಆರ್ಥಿಕ ಲಾಭಗಳಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಸಂಗಾತಿಗೆ ಮನಸ್ಸಿಗೆ ನೋವಾಗದಂತೆ ಜಾಗ್ರತೆವಹಿಸಿ. ಅರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಮಕರ ರಾಶಿ

ಈ ದಿನ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ, ಅರೋಗ್ಯ ಉತ್ತಮವಾಗಿರಲಿದೆ.

ಕುಂಭ ರಾಶಿ

ವೈಯಕ್ತಿಕ ಅಥವಾ ವೃತ್ತಿಪರ ಜೀವನವಾಗಿರಲಿ ನಿಮಗೆ ಅನುಕೂಲಕರವಾಗಿರಲಿದೆ. ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಕೆಲಸ ಹುಡುಕುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ.ನೀವು ವೈವಾಹಿಕ ಜೀವನದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯವು ಉತ್ತಮವಾಗಿರುತ್ತದೆ.

ಮೀನ ರಾಶಿ

ನಿಮ್ಮ ಪ್ರೀತಿಪಾತ್ರರ ಹೆಚ್ಚುತ್ತಿರುವ ನಿರೀಕ್ಷೆಗಳು ನಿಮ್ಮನ್ನು ಬಹಳಷ್ಟು ನಿರಾಶೆಗೊಳಿಸುತ್ತವೆ. ತರಾತುರಿಯಲ್ಲಿ ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಬೇಡಿ, ಇಲ್ಲದಿದ್ದರೆ ಭಾರೀ ನಷ್ಟದ ಸಾಧ್ಯತೆಯಿದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ, ಆರೋಗ್ಯ ದುರ್ಬಲವಾಗಿರುತ್ತದೆ, ಅನಾರೋಗ್ಯವಿದ್ದರೆ ನಿರ್ಲಕ್ಷ್ಯ ದುಬಾರಿಯಾಗಬಹುದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

Story first published: Tuesday, September 24, 2024, 22:38 [IST]
X
Desktop Bottom Promotion