Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 30, ದಿನ ಭವಿಷ್ಯ: ಈ ಮಾಸದ ಕೊನೆಯ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಏರಳಿತಗಳಿಂದ ಕೂಡಿಲರಿದೆ, ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಇನ್ನು ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಈ ದಿನ ಸವಾಲುಗಳಿರಬಹುದು. ಇನ್ನು ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಹೂಡಿಕೆ ಮಾಡಲು ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳಿರಬಹುದು. ಪಾಲುದಾರಿಕೆಯ ವ್ಯಾಪಾರ ಮಾಡುತ್ತಿದ್ದರೆ ಈ ಅವಧಿಯಲ್ಲಿ ನೀವು ಜಾಗ್ರತೆವಹಿಸಬೇಕು. ಕೆಲಸದಲ್ಲಿ ಮೇಲಾಧಿಕಾರಿಯ ಸಲಹೆ ನಿರ್ಲಕ್ಷ್ಯ ಮಾಡಬೇಡಿ, ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ಉತ್ತಮವಾಗಿರಲಿದೆ. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಖರ್ಚು ಹೆಚ್ಚಿರಲಿದೆ, ಅದರೆ ಹೆಚ್ಚು ಚಿಂತಿಸಬೇಕಾಗಿಲ್ಲ. ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಿ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಿಮ್ಮ ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಬಾಕಿಯುಳಿದಿರುವ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುವುದರಿಂದ ವ್ಯಾಪಾರಿಗಳಿಗೆ ಅನುಕುಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅರೋಗ್ಯದ ಬಗ್ಗೆ ನೋಡುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಬೆಳವಣಿಗೆ ಕಾಣಬಹುದು. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಏನೇ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ಖರ್ಚು ಹೆಚ್ಚಿರಬಹುದು, ಅದರೆ ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದರೆ ಒಳ್ಳೆಯದು. ತುಂಬಾ ಸಮಯದಿಂದ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಈ ದಿನ ನಿಮಗೆ ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಈ ದಿನ ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ತುಂಬಾನೇ ಜಾಗ್ರತೆವಹಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ, ವಿವಾಹಿತರ ವೈವಾಹಿಕ ಬದುಕು ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ಸ್ಥಿತಿ ತುಂಬಾ ಉತ್ತಮವಾಗಿರಲಿದೆ. ಇತರರ ಮಾತು ಕೇಳಿ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಸಂಗಾತಿ ಜೊತೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯಕ್ಕಾಗಿ
ಆಹಾರಕ್ರಮದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ. ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಬೇರೆ ಕಡೆ ಕೆಲಸ ಹುಡುಕುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.
ಮಕರ ರಾಶಿ
ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಬೇಕು. ಕಲಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ದಿನವು ಬಹಳ ಮುಖ್ಯವಾಗಿರುತ್ತದೆ. ಕೆಲಸದಲ್ಲಿ ಈ ಅವಧಿ ಉತ್ತಮವಾಗಿರಲಿದೆ. ವೈವಾಹಿಕ ಬದುಕು ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಅವಧಿಯಲ್ಲಿ ನೀವು ಜಾಗ್ರತೆವಹಿಸಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸ ಕಾರ್ಯದ ಕಡೆಗೆ ಗಮನಹರಿಸಿ, ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಯೋಚಿಸುತ್ತಿದ್ದರೆ ಕೆಲ ಸಮಸ್ಯೆಗಳು ಎದುರಾಗಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಹೆಚ್ಚು ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ.
ಮೀನ ರಾಶಿ
ಆರೋಗ್ಯದಲ್ಲಿ ಏರುಪೇರುಗಳಿರುತ್ತದೆ, ನೀವು ವಿಶ್ರಾಂತಿ ಕಡೆಗೆ ಗಮನಹರಿಸಿ.ನೀವು ಯಾವುದೇ ಭೂಮಿ ಅಥವಾ ಆಸ್ತಿಯಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ಖಂಡಿತವಾಗಿಯೂ ನಿಮ್ಮ ಆಪ್ತರ ಸಲಹೆ ಪಡೆಯಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಅಭಿಪ್ರಾಯಕ್ಕೆ ಸಂಗಾತಿಯ ಬೆಂಬಲ ದೊರೆಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications