Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 8-14ರ ವಾರ ಭವಿಷ್ಯ ಪ್ರಕಾರ ಈ 5 ರಾಶಿಗಳಿಗೆ ಶುಭ ವಾರ
ಈ ವಾರದ(ಸೆಪ್ಟೆಂಬರ್ 8-14ರ)ಭವಿಷ್ಯ ಪ್ರಕಾರ ಈ 5 ರಾಶಿಗಳಿಗೆ ಶುಭವಾಗಿದೆ ನೋಡಿ:
ಮೇಷ ರಾಶಿ
ಈ ವಾರ ನಿಮಗೆ ಶುಭವಾಗಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಕಂಡು ಬರುವುದಿಲ್ಲ, ಕೆಲಸದಲ್ಲಿ ಪ್ರಗತಿ ಕಂಡು ಬರಲಿದೆ, ಈ ವಾರ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಈ ವಾರ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ.

ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಪ್ರೀತಿ ಗಟ್ಟಿಯಾಗಿರಲಿದೆ. ಆದರೆ ಪ್ರೇಮಿಗಳಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆದರೆ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮಾತ್ರ ನೀವು ಖರ್ಚು ಮಾಡಿ ಉಳಿತಾಯ ಮಾಡಲು ಪ್ರಯತ್ನಿಸುವುದು ಒಳ್ಳೆಯದು. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ನೇರಳೆ
ಅದೃಷ್ಟದ ಸಂಖ್ಯೆ 8
ಶುಭ ದಿನ: ಶನಿವಾರ
ಕನ್ಯಾ ರಾಶಿ
ಈ ವಾರ ನಿಮಗೆ ತುಂಬಾ ಶುಭವಾಗಿದೆ. ಕೆಲಸದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಇನ್ನು ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿರುವವರು ಈ ವಾರ ಶುಭ ಸುದ್ದಿ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ನಿಮ್ಮ ಮನೆಯಲ್ಲಿ ಅವಾಹಿತರು ಇದ್ದರೆ ಅವರಿಗೆ ಮದುವೆ ಪ್ರಸ್ತಾಪ ಬರಬಹುದು. ವಿದ್ಯಾರ್ಥಿಗಳಿಗೆ ಈ ಅವಧಿ ಉತ್ತಮವಾಗಿದೆ. ಇನ್ನು ಈ ವಾರ ಅರ್ಥಿಕವಾಗಿ ಕೂಡ ತುಂಬಾ ಚೆನ್ನಾಗಿರಲಿದೆ. ಹೀಗಾಗಿ ನೀವು ತುಂಬಾ ದಿನದಿಂದ ಬಯಸಿದ ವಸ್ತುವನ್ನು ಖರೀದಿಸುತ್ತೀರಿ, ಅಲ್ಲದೆ ಈ ಅವಧಿಯಲ್ಲಿ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 6
ಶುಭ ದಿನ: ಮಂಗಳವಾರ
ಧನು ರಾಶಿ
ಧನು ರಾಶಿಯವರಿಗೆ ಈ ವಾರ ಆಹ್ಲಾದಕರವಾಗಿರುತ್ತದೆ, ಮನೆಯಲ್ಲಿ ಕೆಲ ಶುಭ ಕಾರ್ಯಗಳು ದೊರೆಯಲಿದೆ. ಆರ್ಥಿಕವಾಗಿ ಈ ವಾರ ಉತ್ತಮವಾಗಿರುವುದರಿಮದ ಹಳೆಯ ಸಾಲ ಮರು ಪಾವತಿ ಮಾಡಲು ಸಾಧ್ಯವಾಗುವುದು. ಇನ್ನು ಕೆಲಸವನ್ನು ಕೂಡ ಯೋಜನೆಯ ಪ್ರಕಾರ ಮಾಡುವುದರಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಆರೊಗ್ಯ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಒಟ್ಟಿನಲ್ಲಿ ಈ ವಾರ ನಿಮಗೆ ಶುಭವಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 25
ಶುಭ ದಿನ: ಶುಕ್ರವಾರ
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಅವಧಿ ಉತ್ತಮವಾಗಿರಲಿದೆ. ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳನ್ನು ಮಾಡುತ್ತಿದ್ದರೆ, ನೀವು ಯಶಸ್ಸನ್ನು ಪಡೆಯಬಹುದು. ಅತಿಯಾದ ಆತ್ಮವಿಶ್ವಾಸದಿಂದ ವರ್ತಿಸಬೇಡಿ. ನೀವು ಅಜಾಗರೂಕರಾಗಿದ್ದರೆ, ದೊಡ್ಡ ನಷ್ಟ ಸಂಭವಿಸಬಹುದು. ಮನೆಯಲ್ಲಿ ಏನಾದರು ಸಮಸ್ಯೆವಿದ್ದರೆ ಅದು ಬಗೆಹರಿಯುವ ಸೂಚನೆಯಿದೆ. ಇನ್ನು ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು. ವೈವಾಹಿಕ ಜೀವನದಲ್ಲಿ ಪ್ರೀತಿ-ನಂಬಿಕೆ ಇರಲಿದೆ. ಪ್ರೇಮಿಗಳಿಗೂ ಈ ವಾರ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 8
ಶುಭ ದಿನ: ಭಾನುವಾರ
ಮೀನ ರಾಶಿ
ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದಕ್ಕೆ ಈ ವಾರ ಪರಿಹಾರ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೀತಿಪಾತ್ರರಿಂದಲೂ ನೀವು ಬೆಂಬಲವನ್ನು ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸದಲ್ಲಿ ಕೆಲ ಸವಾಲುಗಳು ಎದುರಾದರು ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ. ಒಟ್ಟಿನಲ್ಲಿ ವಾರ ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ 12
ಶುಭ ದಿನ: ಮಂಗಳವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications