Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಶನಿ ಗೋಚಾರ 2024: ಈ ವರ್ಷ 5 ರಾಶಿಯವರ ಆರ್ಥಿಕ ಬೆಳವಣಿಗೆಗೆ ಶನಿಯ ಬೆಂಬಲವಿದೆ
ಶನಿಯು ಕುಂಭ ರಾಶಿಯಲ್ಲಿದೆ, 2024ರಲ್ಲಿ ಶನಿಯ ಸ್ಥಾನದಿಂದಾಗಿ ಕೆಲ ರಾಶಿಯವರು ಉದ್ಯೋಗದಲ್ಲಿ, ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುತ್ತಾರೆ, ಆ ರಾಶಿಗಳು ಯಾವುವು ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಶನಿಯು ಅನುಕೂಲಕರ ಸ್ಥಾನದಲ್ಲಿ ಇರುವುದರಿಂದ ಈ ವರ್ಷ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುವಿರಿ. ಉದ್ಯೋಗಿಗಳು ಈ ವರ್ಷ ಬಡ್ತಿ ಪಡೆಯುವಿರಿ, ಈ ವರ್ಷದಲ್ಲಿ ನಿಮ್ಮ ಸಂಬಳ ಹೆಚ್ಚಾಗುವ ಸಾಧ್ಯತೆಗಳಿವೆ. ಈಮೇ ತಿಂಗಳ ನಂತರದ ಸಮಯ ನಿಮಗೆ ಮತ್ತಷ್ಟು ಉತ್ತಮವಾಗಲಿದೆ. ಹೂಡಿಕೆ ಮಾಡಲು ಈ ಅವಧಿಯು ನಿಮಗೆ ಉತ್ತಮವಾಗಿರುತ್ತದೆ. ಈ ವರ್ಷ ನೀವು ಶನಿಯ ಸ್ಥಾನದಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ.

ವೃಷಭ ರಾಶಿ
ವೃಷಭ ರಾಶಿಯವಿಗೂ ಶನಿಯು ಅನುಕೂಲಕರವಾದ ಸ್ಥಾನದಲ್ಲಿದೆ. ಶನು ಕುಂಭ ರಾಶಿಯಲ್ಲಿರುವಾಗ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ಕೆಲಸದ ನಿಮಿತ್ತ ವಿದೇಶಕ್ಕೆ ಹೋಗುವ ಅವಕಾಶವೂ ಸಿಗಲಿದೆ. ಸ್ವಂತ ವ್ಯಾಪಾರ ಮಾಡುವವರು ಈ ವರ್ಷ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ, ಈ ಅವಧಿಯಲ್ಲಿ ನೀವು ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗುತ್ತೀರಿ. ನಿಮಗೆ ಆರ್ಥಿಕ ಲಾಭ ಉಂಟಾಗುವುದರಿಂದ ಭೌತಿಕ ಸೌಕರ್ಯ ಹೆಚ್ಚಾಗಲಿದೆ. ನೀವು ಯಾವುದೇ ಆಸ್ತಿ ಅಥವಾ ಇತರ ವಿಷಯಗಳಲ್ಲಿ ಹೂಡಿಕೆ ಮಾಡಲು ಬಯಸಿದರೆ ಈ ಸಮಯವು ನಿಮಗೆ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಶನಿ ದೆಸೆಯಿಂದ ವೃತ್ತಿಜೀವನದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಜೀವನದಲ್ಲಿಯೂ ಶನಿಯ ಸಂಚಾರವು ನಿಮ್ಮ ಪರವಾಗಿರುವುದರಿಂದ ಆರ್ಥಿಕ ತೊಂದರೆಗಳು ಇರಲ್ಲ, ನೀವು ಸಾಲವನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನೀವು ಅದನ್ನು ಸುಲಭವಾಗಿ ಪಡೆಯಬಹುದು. ಈ ವರ್ಷ ನಿಮ್ಮ ಸಂಬಳವೂ ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಶನಿಯು ಹಿಮ್ಮುಖ ಚಲನೆಯಲ್ಲಿ ಇರುವಾಗ ಜಾಗ್ರತೆವಹಿಸಿ. ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ. ಈ ಅವಧಿಯಲ್ಲಿ ನಿಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ. ನಿಮ್ಮ ದೈನಂದಿನ ದಿನಚರಿಯಲ್ಲಿ ಯೋಗ ಮತ್ತು ವ್ಯಾಯಾಮವನ್ನು ಸೇರಿಸಲು ನಿಮಗೆ ಸಲಹೆ ನೀಡಲಾಗುವುದು.
ತುಲಾ ರಾಶಿ
ತುಲಾ ರಾಶಿಯವರಲ್ಲಿ ಶನಿಯು 5ನೇ ಮನೆಯಲ್ಲಿ ಶನಿ ಇರುವುದರಿಂದ ಆರ್ಥಿಕವಾಗಿ ಲಾಭ ಪಡೆಯುತ್ತಾರೆ . ನಿಮ್ಮ ವೃತ್ತಿಜೀವನದಲ್ಲಿ ನೀವು ತೃಪ್ತಿಯನ್ನು ಅನುಭವಿಸುವಿರಿ. ಜೊತೆಗೆ ಹೊಸ ಅವಕಾಶಗಳೂ ಸಿಗಲಿವೆ. ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗುವ ಸೂಚನೆಗಳಿವೆ. ನಿಮ್ಮ ಹಣದ ಅವಶ್ಯಕತೆಗಳು ಪೂರ್ಣವಾಗಲಿದೆ. ಈ ವರ್ಷ ನಿಮಗೆ ತುಂಬಾ ಅನುಕೂಲಕರವಾಗಿದೆ.
ಧನು ರಾಶಿ
ಶನಿ ರಾಶಿಯವರಿಗೆ ಶನಿಯ ಸ್ಥಾನ ಅನುಕೂಲಕರವಾಗಿದೆ. ನೀವು ವೃತ್ತಿಜೀವನದಲ್ಲಿ ನೀವು ಉತ್ತಮ ಅವಕಾಶ ಪಡೆಯುತ್ತೀರಿ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಮೇ ಶನಿಯು ಹಿಮ್ಮುಖ ಚಲನೆಯಲ್ಲಿರುವ ಸಮಯ ನಿಮ್ಮ ವೃತ್ತಿಜೀವನಕ್ಕೆ ಹೆಚ್ಚು ಮಂಗಳಕರವಾಗಿರುವುದಿಲ್ಲ ಈ ಅವಧಿಯಲ್ಲಿ ಜಾಗ್ರತೆವಹಿಸಿ. ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಉಳಿದಂತೆ ಶನಿಯು ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications