Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ನೇರ ಸಂಚಾರದಲ್ಲಿರುವ ಶನಿ:ನಾಲ್ಕೂವರೆ ತಿಂಗಳು ದ್ವಾದಶ ರಾಶಿಗಳ ಮೇಲಿರಲಿದೆ ಈ ಪ್ರಭಾವ, ಯಾರಿಗೆ ಶುಭ, ಯಾರಿಗಲ್ಲ
ಶನಿಯು ಮಾರ್ಗಿಯಾಗಿ ಸಂಚರಿಸುತ್ತಿದೆ, ಇದರ ಪ್ರಭಾವ 12 ರಾಶಿಗಳ ಮೇಲೆ ಇದ್ದು ಕೆಲವರಿಗೆ ಧನಾತ್ಮಕವಾಗಿದೆ, ಇನ್ನು ಕೆಲವರಿಗೆ ಋಣಾತ್ಮಕವಾಗಿದೆ, ಈ ಪ್ರಭಾವ ಶನಿಯ ರಾಶಿ ಬದಲಾವಣೆವರೆಗೆ ಇರಲಿದೆ. ಶನಿಯ ನೇರ ಸಂಚಾರ ಯಾವ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ ನೋಡೋಣ ಬನ್ನಿ:
ಮೇಷ ರಾಶಿ
11ನೇ ಮನೆಯಲ್ಲಿ ಶನಿಯು ಮಾರ್ಗಿಯಾಗಿ ಚಲಿಸಿದೆ, ಹೀಗಾಗಿ ಉದ್ಯೋಗದಲ್ಲಿರುವವರು ತಮ್ಮ ಕೆಲಸದಲ್ಲಿ ಹಿಡಿತ ಸಾಧಿಸುತ್ತೀರಿ, ವ್ಯಾಪಾರಿಗಳಿಗೆ, ಉದ್ಯೋಗಸ್ಥರಿಗೆ ಮತ್ತಷ್ಟು ಉತ್ತಮ ಅವಕಾಶ ದೊರೆಯಲಿದೆ. ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ವೃಷಭ ರಾಶಿಯವರಲ್ಲಿ ಶನಿಯು 10ನೇ ಮನೆಯಲ್ಲಿ ಮಾರ್ಗಿಯಾಗಿದೆ. ಈ ಅವಧಿಯಲ್ಲಿ ಕೆಲಸದಲ್ಲಿ ತುಂಬಾನೇ ಕಾರ್ಯನಿರತವಾಗಿರುತ್ತೀರಿ. ವ್ಯಾಪಾರಿಗಳು ತಮ್ಮ ವ್ಯಾಪಾರದಲ್ಲಿ ಅಪಾರ ಲಾಭ ಗಳಿಸುತ್ತಾನೆ, ಹಣಕಾಸಿನ ದೃಷ್ಟಿಯಿಂದಲೂ ಈ ಸಮಯ ನಿಮಗೆ ತುಂಬಾ ಒಳ್ಳೆಯದಿದೆ. ಕುಟುಂಬ ಜೀವನದಲ್ಲಿಯೂ ಶನಿ ಕೃಪೆ ಅನುಕೂಲಕರವಾಗಿಯೇ ಇರಲಿದೆ.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಶನಿಯು 9ನೇ ಮನೆಯಲ್ಲಿ ಮಾರ್ಗಿಯಾಗಿದೆ, ಈ ಸಮಯ ಮಿಶ್ರಫಲ. ವೃತ್ತಿ ಬದುಕಿನಲ್ಲಿ ಏರಳಿತ ಉಂಟಾಗಬಹುದು, ಇರುವ ಕೆಲಸದಲ್ಲಿ ಅತೃಪ್ತಿಯಿಂದಾಗಿ ಕೆಲಸದ ಬದಲಾವಣೆಯ ಬಗ್ಗೆ ಆಲೋಚಿಸಬಹುದು, ವ್ಯವಹಾರಸ್ಥರಿಗೆ ಲಾಭ ಗಳಿಸಲು ಸಾಧ್ಯವಾಗುವುದು, ಶನಿಕೃಪೆಯಿಂದಾಗಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಬಗೆಹರಿಸಲ ಸಾಧ್ಯವಾಗುವುದು.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ ಶನಿಯು 8ನೇ ಮನೆಯಲ್ಲಿ ನೇರ ಸಂಚಾರ ಮಾಡುತ್ತಿದೆ. ಈ ಅವಧಿಯಲ್ಲಿ ಶನಿ ನೀಡುವ ತೊಂದರೆಗಳಿಂದಾಗಿ ಆತ್ಮವಿಶ್ವಾಸ ಕುಗ್ಗಬಹುದು, ಕೆಲವೊಂದು ಒಳ್ಳೆಯ ಅವಕಾಶಕೈತಪ್ಪಬಹುದು, ಮಾಡಿದ ಕೆಲಸಕ್ಕೆ ಊಹಿಸಿದಂತೆ ಫಲ ಸಿಗದೇ ಇರಬಹುದು, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಸವಾಲುಗಳನ್ನು ಎದುರಿಸಬಹುದು. ಆರೋಗ್ಯದಲ್ಲಿಯೂ ಏರಳಿತವಿರಬಹುದು.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ 7ನೇ ಮನೆಯಲ್ಲಿ ಶನಿಯು ಮಾರ್ಗಿಯಾಗಿದೆ. ವೃತ್ತಿ ಜೀವನದಲ್ಲಿ ತುಂಬಾನೇ ಒತ್ತಡವಿರಬಹುದು, ಕೆಲಸದ ವಿಷಯದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು, ವ್ಯಾಪಾರಿಗಳು ಈ ಅವಧಿಯಲ್ಲಿ ತುಂಬಾನೇ ಜಾಗರೂಕರಾಗಿರಬೇಕು. ಹಣಕಾಸಿನ ವಿಷಯದಲ್ಲಿಯೂ ಸವಾಲುಗಳನ್ನು ಎದುರಿಸಬಹುದು, ಆದಾಯಕ್ಕಿಂತ ಖರ್ಚು ಹೆಚ್ಚಿರಬಹುದು. ಕುಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆರೋಗ್ಯಕ್ಕಾಗಿ ಹೆಚ್ಚಿನ ಹಣ ಖರ್ಚಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ 6ನೇ ಮನೆಯಲ್ಲಿ ಇರಲಿದೆ, ಶನಿ ದೇವನ ಈ ಸ್ಥಾನ ನಿಮಗೆ ಮಿಶ್ರಫಲ ನೀಡಲಿದೆ. ಈವು ಆರೋಗ್ಯದ ಕಡೆಗೆ ಗಮನರಿಸಬೇಕು. ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಸವಾಲುಗಳನ್ನು ಎದುರಿಸಬಹುದು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು.
ತುಲಾ ರಾಶಿ
ತುಲಾ ರಾಶಿಯಲ್ಲಿ ಶನೊಯು 5ನೇ ಮನೆಯಲ್ಲಿ ನೇರ ಸಂಚಾರ ಮಾಡುತ್ತಿದೆ. ವೃತ್ತಿ ಜೀವನದ ದೃಷ್ಟಿಯಿಂದ ತುಂಬಾ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಸಮಸ್ಯೆಯಿಲ್ಲದೆ ಬಗೆಹರಿಯಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರೆ ಲಾಭ ಗಳಿಸುತ್ತೀರಿ. ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವಶ್ಚಿಕ ರಾಶಿಯಲ್ಲಿ ಶನಿಯು ನಾಲ್ಕನೇ ಮನೆಯಲ್ಲಿ ಮಾರ್ಗಿಯಾಗಿ ಸಂಚಾರ ಮಾಡುತ್ತಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಹಲವು ಸವಾಲುಗಳನ್ನು ಎದುರಿಸಬಹುದು, ವ್ಯಾಪಾರಿಗಳು ಆರ್ಥಿಕ ನಷ್ಟ ಅನುಭವಿಸಬಹುದು, ಹಾಗಾಗಿ ವ್ಯವಹಾರದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಹಣದ ಖರ್ಚು ಹೆಚ್ಚಿರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲ ಪಡೆಯುತ್ತೀರಿ, ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯುತ್ತೀರಿ, ವ್ಯಾಪಾರಿಗಳು ಹಣ ಗಳಿಸುತ್ತೀರಿ. ಆರ್ಥಿಕ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ. ಕುಟುಂಬ ಜೀವನದಲ್ಲಿಯೂ ಸಂತೋಷ ಇರಲಿದೆ.
ಮಕರ ರಾಶಿ
ಮಕರ ರಾಶಿಯಲ್ಲಿ 2ನೇ ಮನೆಯಲ್ಲಿ ನೇರ ಸಂಚಾರ ಮಾಡುತ್ತಿದೆ, ಈ ಸಮಯದಲ್ಲಿ ಹೂಡಿಕೆ ಮಾಡಬಹುದು,ಮ ವೃತ್ತಿ ಬದುಕಿನಲ್ಲಿ ಕೆಲಸದ ಒತ್ತಡ ಹೆಚ್ಚಿದೆ, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಖರ್ಚು ಹೆಚ್ಚಿರಲಿದೆ. ಆರೋಗ್ಯ ಬಗ್ಗೆ ಕೂಡ ಜಾಗ್ರತೆವಹಿಸಿ.
ಕುಂಭ ರಾಶಿ
ಕುಂಭ ರಾಶಿಯ ಲಗ್ನ ಮನೆಯಲ್ಲಿ ಶನಿಯು ಮಾರ್ಹಿಯಾಗಿದೆ. ಈ ಅವಧಿಯಲ್ಲಿ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಕೆಲಸವನ್ನು ಸಮಯಕ್ಕೆ ಮಾಡಿ ಮುಗಿಸಲು ಸಾಧ್ಯವಾಗುವುದು. ವೈಯಕ್ತಿಕ ಬದುಕಿನಲ್ಲಿಯೂ ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಿರಲಿದೆ.
ಮೀನ ರಾಶಿ
ಮೀನ ರಾಶಿಯ 12ನೇ ಮನೆಯಲ್ಲಿ ಶನಿಯು ಮಾರ್ಗಿಯಾಗಿ ಸಂಚರಿಸಿದೆ, ಈ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಕಠಿಣ ಸ್ಪರ್ಧೆ ಎದುರಿಸಬಹುದು, ಆರ್ಥಿಕ ಬದುಕಿನಲ್ಲಿ ಹಣಕಾಸಿನ ಸಮಸ್ಯೆವಿರಬಹುದು, ಆರೋಗ್ಯದ ಕಡೆಗೆ ಗಮನಹರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











