Latest Updates
-
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್!
ಶನಿ ನಕ್ಷತ್ರ ಬದಲಾವಣೆ: ಅಕ್ಟೋಬರ್ 3ರವರೆಗೆ ಈ 3 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ
ಶನಿಯು ತುಂಬಾ ನಿಧಾನವಾಹಿ ಚಲಿಸುವಾಗಿದ್ದು ಇದೀಗ ಕುಂಭ ರಾಶಿಯಲ್ಲಿದೆ. ಶನಿಯು 2025ರವರೆಗೆ ಕುಂಭ ರಾಶಿಯಲ್ಲಿರಲಿದೆ. ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ಸಮಯ ತೆಗೆದುಕೊಳ್ಳುವುದು.
ಆದ್ದರಿಂದಲೇ ಶನಿಯ ಪ್ರಭಾವ ತಿಳಿಯಲು ಬಯಸುತ್ತಾರೆ. ಏಕೆಂದರೆ ಶನಿಯು ನಮ್ಮ ಅನುಕೂಲಕರ ಸ್ಥಾನದಲ್ಲಿದ್ದರೆ ಎರಡೂವರೆ ವರ್ಷ ತುಂಬಾ ಒಳ್ಳೆಯದಿರುತ್ತದೆ, ಇಲ್ಲದಿದ್ದರೆ ಆ ಎರಡೂವರೆ ವರ್ಷ ಒಂದಲ್ಲಾ ಒಂದು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ಆದರೆ ಶನಿಯು ಆಗಾಗ ನಕ್ಷತ್ರ ಬದಲಾವಣೆ ಮಾಡುತ್ತದೆ. ಶನಿಯು ಈ ಏಪ್ರಿಲ್ 6ಕ್ಕೆ ಪೂರ್ವಾಭಾದ್ರಪದ ನಕ್ಷತ್ರಕ್ಕೆ ಸಾಗಿದೆ. ಶನಿಯು ಈ ಬರುವ ಅಕ್ಟೋಬರ್ 3 , 2024 ರವರೆಗೆ ಅದೇ ನಕ್ಷತ್ರದಲ್ಲಿ ಇರಲಿದೆ. ಶನಿಯು ಈ ನಕ್ಷತ್ರದಲ್ಲಿ ಇರುವ ಸಮಯದಲ್ಲಿ ಈ 3 ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ.
ವೃಷಭ ರಾಶಿ
ಶನಿಯ ನಕ್ಷತ್ರ ಬದಲಾವಣೆಯಿಂದಾಗಿ ವೃಷಭ ರಾಶಿಯವರಿಗೆ ಶುಭವಾಗಿದೆ. ನೀವು ಈ ವಾಧಿಯಲ್ಲಿ ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಸಂಬಳ ಹೆಚ್ಚಾಗಲಿದೆ, ಬಡ್ತಿ ಸಿಗಲಿದೆ, ವ್ಯಾಪಾರಸ್ಥರು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಗಳಿಸಬಹುದು. ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಹಲವು ಕೆಲ ಕೆಲಸಗಳು ಮತ್ತೆ ಚುರುಕುಗೊಳ್ಳುವುದು, ನಿಮಗೆ ಅದೃಷ್ಟದ ಬೆಂಬಲ, ಶನಿಯ ಕೃಪೆ ಇರುವುದರಿಂದ ನಿಮ್ಮೆಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗುವುದು. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ಪ್ರಣಯ ಜೀವನದಲ್ಲಿ ಪ್ರೀತಿ ಹೆಚ್ಚಾಗಲಿದೆ.
ಕನ್ಯಾರಾಶಿ
ಶನಿಯು ಪೂರ್ವಾಭಾದ್ರಪದ ನಕ್ಷತ್ರದಲಲ್ಇ ಇರುವುದರಿಂದ ನಿಮಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣಬಹುದು. ನ್ಯಾಯಾಲಯದಲ್ಲಿ ಏನಾದರೂ ಪ್ರಕರಣವಿದ್ದರೆ ನೀವು ಉತ್ತಮ ಫಲ ಪಡೆಯುತ್ತೀರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯಬಹುದು. ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ. ನಿಮ್ಮ ಸಂಬಳ ಹೆಚ್ಚಲಿದೆ, ವ್ಯವಹಾರಸ್ಥರಿಗೆ ತಮ್ಮ ವ್ಯವಹಾರ ವಿಸ್ತರಿಸಲು ಸಾಧ್ಯವಾಗುವುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೂ ಶನಿಯು ಅನುಕೂಲಕರ ಸ್ಥಾನದಲ್ಲಿದೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭ ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ ಇದ್ದಂಥ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳು ಬಡ್ತಿ ಹೋಮದುವಿರಿ. ನಿಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ, ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಹೊಸ ಗುರುತು ಮೂಡಿಸುವಲ್ಲಿ ಯಶಸ್ವಿಯಾಗುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿಂದ ಪರಿಹಾರ ಸಿಗಲಿದೆ.
ಪ್ರತಿ ಶನಿವಾರ ಶನಿ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆ ಅರ್ಪಿಸಿ ಪೂಜೆ ಸಲ್ಲಿಸಿ, ಇದರಿಂದ ನಿಮ್ಮ ಅದೃಷ್ಟದ ಬಲ ಹೆಚ್ಚಾಗುವುದು. ಶನಿಯ ಕೃಪೆ ಇರುವುದರಿಂದ ಈ ಅವಧಿಯಲ್ಲಿ ನೀವು ಬಯಸಿದ್ದೆಲ್ಲಾ ನೆರವಾಗಲಿದೆ. ಬಡವರಿಗೆ ದಾನ ಮಾಡಿ, ನಿರ್ಗತಿಕರಿಗೆ ಸಹಾರ ಮಾಡುವುದರಿಂದ ಅವರಿಗೆ ಆಹಾರ ಬಟ್ಟೆ ನೀಡುವುದರಿಂದ ಶನಿಯ ಸಂತುಷ್ಟನಾಗಿ ಮತ್ತಷ್ಟು ಒಳ್ಳೆಯ ಫಲ ನೀಡುತ್ತಾನೆ.
ಶನಿ ದೇವನ ಮಂತ್ರ ಪಠಿಸಿದರೆ ಇನ್ನೂ ಒಳಿತಾಗುವುದು
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications