Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕುಂಭದಲ್ಲಿ ಹಿಮ್ಮುಖ ಚಲನೆ ಪ್ರಾರಂಭಿಸಿದ ಶನಿ: ಈ 3 ರಾಶಿಗಳು ಲಾಭ ಪಡೆಯುವಿರಿ
ಶನಿಯು ಎರಡೂವರೆ ವರ್ಷಕ್ಕೊಮ್ಮೆ ಬದಲಾವಣೆ ಮಾಡುತ್ತದೆ, 2023ರಲ್ಲಿ ಕುಂಭ ರಾಶಿಗೆ ಪ್ರವೆಶಿಸಿರುವ ಶನಿಯು ಇನ್ನು 2025ಕ್ಕೆ ರಾಶಿ ಬದಲಾವಣೆ ಮಾಡುವುದು, ಆದರೆ ಶನಿಯು ಇದೇ ಅಗಸ್ಟ್ 29ರಿಂದ ಹಿಮ್ಮುಖ ಚಲನೆ ಮಾಡಲಿದೆ.
ಕುಂಭ ರಾಶಿಯಲ್ಲಿರುವ ಶನಿಯು ಆಗಸ್ಟ್ 29 ರಾತ್ರಿ 11:40ಕ್ಕೆ ಹಿಮ್ಮುಖ ಚಲನೆ ಪ್ರಾರಂಭಿಸುವುದು, ಈ ನವೆಂಬರ್ 15ರವರೆಗೆ ಶನಿಯು ಹಿಮ್ಮುಖ ಚಲನೆಯಲ್ಲಿ ಇರಲಿದೆ. ಎರಡೂವರೆ ತಿಂಗಳು ಶನಿಯು ಹಿಮ್ಮುಖ ಚಲನೆಯಲ್ಲಿದ್ದು ಈ ಅವಧಿ ಈ ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ ನೋಡಿ:

ಈ 3 ರಾಶಿಗಳಿಗೆ ಅದೃಷ್ಟದ ಸಮಯ
ಧನು ರಾಶಿ
ಶನಿ ದೇವನು ಧನು ರಾಶಿಯ ಮೂರನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುವುದು. ಈ ಅವಧಿಯಲ್ಲಿ ಧನು ರಾಶಿಯವರು ಅನುಕೂಲಕರ ಪ್ರಯೋಜನ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಧೈರ್ಯ ಮತ್ತು ಶೌರ್ಯ ಹೆಚ್ಚಾಗಲಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಶನಿಯು ಹಿಮ್ಮುಖ ಚಲನೆಯಲ್ಲಿರುವ ಈ ಅವಧಿಯಲ್ಲಿ ಹಠಾತ್ ಆರ್ಥಿಕ ಲಾಭ ಗಳಿಸುತ್ತೀರಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ತಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುವ ಬಲವಾದ ಅವಕಾಶಗಳಿವೆ. ಕುಟುಂಬ ಜೀವನದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿದೆ.
ಮೇಷ ರಾಶಿ
ಶನಿಯು ಹಿಮ್ಮುಖ ಚಲನೆಯಲ್ಲಿ ಇರುವಾಗ ಮೇಷ ರಾಶಿಯವರು ತುಂಬಾ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಆದಾಯದಲ್ಲಿ ಅಗಾಧವಾದ ಹೆಚ್ಚಳ ಕಂಡು ಬರುವುದು. ಆದಾಯದ ಹೊಸ ಮಾರ್ಗಗಳು ಸಹ ನಿಮಗಾಗಿ ತೆರೆದುಕೊಳ್ಳಬಹುದು. ನೀವು ಹಣ ಮತ್ತು ಆಸ್ತಿ ಗಳಿಸುತ್ತೀರಿ.ಈ ಅವಧಿಯಲ್ಲಿ ನಿಮಗಾಗಿ ಹೊಸ ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಬಹುದು. ನೀವು ಮೊದಲು ಯಾವುದೇ ಹೂಡಿಕೆ ಮಾಡಿದ್ದರೆ ಅದರ ಲಾಭ ಪಡೆಯುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯುತ್ತಾರೆ. ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಈ ಅವಧಿ ಅನುಕೂಲಕರವಾಗಿದೆ, ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿಯೇ ಶನಿಯು ಹಿಮ್ಮುಖ ಚಲನೆ ಮಾಡುತ್ತಿದೆ. ಶನಿಯ ಹಿಮ್ಮುಖ ಚಲನೆಯು ನಿಮಗೆ ಮಂಗಳಕರ ಫಲ ನೀಡಲಿದೆ. ಶನಿಯು ನಿಮ್ಮ ರಾಶಿಯಲ್ಲೂ ಷಶ ರಾಜಯೋಗವನ್ನು ಸೃಷ್ಟಿಸುತ್ತಿದ್ದಾನೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದು. ಸಮಾಜದಲ್ಲಿ ನಿಮ್ಮ ಗೌರವ, ಪ್ರತಿಷ್ಠೆ ಹೆಚ್ಚಾಗುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಇಉವವರಿಗೆ ಈ ಅವಧಿ ಅನುಕೂಲಕರವಾಗಿದೆ.ವೈವಾಹಿಕ ಜೀವನವೂ ಸುಖಮಯವಾಗಿರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications