Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಶನಿಯ ಹಿಮ್ಮುಖ ಚಲನೆ ಸಮಯದಲ್ಲಿ ಯಾವ ರಾಶಿಯವರು ಹೇಗೆ ಜಾಗ್ರತೆವಹಿಸಬೇಕು?
ಎಲ್ಲಾ ಗ್ರಹಗಳು ಹಿಮ್ಮುಖ ಚಲನೆ ಪ್ರಾರಂಭಿಸಿದಾಗ ಅದು ಒಳ್ಳೆಯದಕ್ಕಿಂತ ಕೆಟ್ಟ ಪ್ರಭಾವ ಹೆಚ್ಚು ಬೀರುತ್ತದೆ, ನವಗ್ರಹಗಳಲ್ಲಿ ನಿಧಾನವಾಗಿ ಸಾಗುವ ಶನಿಯು ಜೂನ್ ಮಾಸದ ಕೊನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ, ಸುಮಾರು 139 ದಿನ ಹಿಮ್ಮುಖ ಚಲನೆ ಮಾಡಲಿದೆ, ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ ಶನಿಯ ಹಿಮ್ಮುಖ ಚಲನೆಯ ಪ್ರಭಾವ:

ಮೇಷ ರಾಶಿ
ಮೇಷ ರಾಶಿಯಲ್ಲಿ ಶನಿಯು 11ನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸುವುದು. ಹನ್ನೊಂದನೇ ಮನೆಯಲ್ಲಿ ಹಿಮ್ಮುಖವಾಗಲಿದೆ. ಶನಿಯ ಹಿಮ್ಮುಖ ಚಲನೆ ವೃತ್ತಿ ಬದುಕಿಗೆ ಅನುಕೂಲಕರ. ವ್ಯಾಪಾರಿಗಳು ಲಾಭ ಪಡೆಯುತ್ತಾರೆ, ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಆರೋಗ್ಯದ ಕಡೆಗೆ ಗಮನಹರಿಸಿ.
"ಓಂ ನಮೋ ನಾರಾಯಣ"
ವೃಷಭ ರಾಶಿ
ವೃಷಭ ರಾಶಿಯವರ 10ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ. ಕುಟುಂಬದಲ್ಲಿ ಅಭಿವೃದ್ಧಿ ಕಾಣಬಹುದು. ವ್ಯಾಪಾರಿಗಳಿಗೆ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬಹುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ಸಂಬಂಧದಲ್ಲಿ ಏರಳಿತ ಉಂಟಾಗಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಪ್ರತಿದಿನ ಲಲಿತಾ ಸಹಸ್ರನಾಮ ಪಠಿಸಿ.
ಮಿಥುನ ರಾಶಿ
ಮಿಥುನ ರಾಶಿಯ 9ನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸಲಿದೆ, ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ವ್ಯಾಪಾರಿಗಳಿಗೂ ಈ ಸಮಯ ಅಷ್ಟೊಂದು ಅನುಕೂಲಕರವಲ್ಲ, ಇದರಿಂದಾಗಿ ನೀವು ಹಣವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಆರ್ಥಿಕ ಸ್ಥಿತಿ ಚೆನ್ನಾಗಿರಲ್ಲ. ಜೊತೆಗೆ ಆರೋಗ್ಯ ಸಮಸ್ಯೆಯೂ ಕಾಡುವುದು.
ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ 8ನೇ ಮನೆಯಲ್ಲಿ ಹಿಮ್ಮುಖ ಚಲನೆ ಉಂಟಾಗಲಿದೆ. ಈ ಅವಧಿಯಲ್ಲಿ ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯಬಹುದು. ಉದ್ಯೋಗದಲ್ಲಿ ಕೆಲವು ಉತ್ತಮ ಅವಕಾಶಗಳನ್ನು ಕಳೆದುಕೊಳ್ಳಬಹುದು. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಕುಸಿತ ಉಂಟಾಗಲಿದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ನೀವು ಏರಿಳಿತಗಳನ್ನು ಎದುರಿಸಬೇಕಾಗಬಹುದು.
ಪ್ರತಿದಿನ ದುರ್ಗಾ ಚಾಲೀಸಾ ಪಠಿಸಿ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ 7ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ. ವೃತ್ತಿ ಬದುಕಿನಲ್ಲಿ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳು ಹಣ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ.
ಆರ್ಥಿಕವಾಗಿ ಯಾರಿಗಾದರು ಸಾಲ ನೀಡಿದರೆ ಮರಳಿ ಸಿಗುವುದಿಲ್ಲ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗುವುದು. ಆರೋಗ್ಯ ಸಮಸ್ಯೆಗಳು ಇರಬಹುದು.
"ಓಂ ಭಾಸ್ಕರಾಯ ನಮಃ" ಎಂದು ಪ್ರತಿದಿನ ಪಠಿಸಿ.
ಕನ್ಯಾ ರಾಶಿ
ಕನ್ಯಾರಾಶಿಯ ಆರನೇ ಮನೆಯಲ್ಲಿ ಶನಿ ಹಿಮ್ಮುಖವಾಗಲಿದೆ. ಆರ್ಥಿಕ ತೊಂದರೆಯಿಂದ ಸಾಲ ತೆಗೆದುಕೊಳ್ಳಬೇಕಾಗುವುದು.
ಸ್ವಂತ ವ್ಯವಹಾರ ಮಾಡುತ್ತಿದ್ದರೆ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬಹುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಲಿದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
"ಓಂ ನಮೋ ನಾರಾಯಣ
ತುಲಾ ರಾಶಿ
ತುಲಾ ರಾಶಿಯ 5ನೇ ಮನೆಯಲ್ಲಿ ಶನಿ ಹಿಮ್ಮುಖ ಚಲನೆ ಮಾಡಲಿದೆ. ಈ ಅವಧಿಯಲ್ಲಿ ಭವಿಷ್ಯದ ಚಿಂತೆ ಕಾಡುವುದು. ವ್ಯಾಪಾರಿಗಳೂ ಹಲವು ಸವಾಲು ಎದುರಿಸಬಹುದು. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು. ಮಕ್ಕಳ ಆರೋಗ್ಯದ ಚಿಂತೆ ಕಾಡುವುದು, ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ.
"ಓಂ ನಮೋ ನಾರಾಯಣ ಮಂತ್ರ ಪ್ರತಿದಿನ ಪಠಿಸಿ
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ 4ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ. ಈ ಅವಧಿಯಲ್ಲಿ ಸೌಕರ್ಯಗಳು ಕಡಿಮೆಯಾಗುವುದು. ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸದಿದ್ದರೆ ಹಣ ನಷ್ಟವಾಗುವುದು. ಆರೊಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಪ್ರತಿ ಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ.
ಧನು ರಾಶಿ
ಧನು ರಾಶಿಯಲ್ಲಿ 3ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡುತ್ತಿದೆ. ಈ ಅವಧಿ ವೃತ್ತಿ ಬದುಕು ಚೆನ್ನಾಗಿರಲಿದೆ, ವ್ಯಾಪಾರಿಗಳು ಹೆಚ್ಚು ಪ್ರಯಾಣ ಮಾಡಬೇಕಾಗುವುದು, ಖರ್ಚು ಅಧಿಕ ಇರಲಿದೆ. ಸಂಗಾತಿ ಹಾಗೂ ನಿಮ್ಮ ನಡುವೆ ಕೆಲ ಭಿನ್ನಾಭಿಪ್ರಾಯ ತರಬಹುದು, ರೋಗ ನಿರೋಧಕ ಶಕ್ತಿ ಕೂಡ ಕಡಿಮೆ ಇರಲಿದೆ.
ಪ್ರತಿದಿನ ಶನಿ ಮಂತ್ರ ಪಠಿಸಿ.
ಮಕರ ರಾಶಿ
ಮಕರ ರಾಶಿಯಲ್ಲಿ 2ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಿದಾಗ ನೀವು ಆರ್ಥಿಕ ವಿಷಯದಲ್ಲಿ ಹೆಚ್ಚು ಪ್ರಗತಿವಹಿಸಬೇಕು. ವೃತ್ತಿ ಬದುಕಿನಲ್ಲಿ ತೃಪ್ತಿ ಇರಲ್ಲ, ವ್ಯಾಪಾರಿಗಳು ಕಠಿಣ ಪ್ರತಿಸ್ಪರ್ಧೆ ಎದುರಿಸಬಹುದು. ಹಣ ಉಳಿತಾಯ ಮಾಡುವುದು ಕಷ್ಟವಾಗುವುದು, ಕುಟುಂಬದಲ್ಲಿ ಅಪಸ್ವರ ಹೆಚ್ಚಾಗದಂತೆ ಜಾಗ್ರತೆವಹಿಸಿ.
ಶನಿವಾರ ಶಿವನಿಗೆ ರುದ್ರಾಭಿಷೇಕ ಮಾಡಿಸಿ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆ ಮಾಡಿದಾಗ ಖರ್ಚು ಅಧಿಕ ಇರಲಿದೆ. ಕೆಲಸದ ಬದಲಾಯಿಸುವ ನಿರ್ಧಾರ ಮಾಡುತ್ತೀರಿ, ವೈವಾಹಿಕ ಬದುಕಿನಲ್ಲಿ ಕೆಲ ಸಮಸ್ಯೆಗಳು ಇರಬಹುದು, ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ನಿರೀಕ್ಷೆ ಮಾಡಿದಷ್ಟು ಲಾಭ ಸಿಗಲ್ಲ. ಆರೋಗ್ಯದ ಬಗ್ಗೆ ನೋಡುವುದಾದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆವಿರಬಹುದು. ಹನುಮಾನ್ ಚಾಲೀಸ ಪಠಿಸಿ
ಮೀನ ರಾಶಿ
ಮೀನ ರಾಶಿಯಲ್ಲಿ 12ನೇ ಮನೆಯಲ್ಲಿ ಹಿಮ್ಮುಖ ಚಲನೆ ಮಾಡಲಿದೆ, ಈ ಅವಧಿಯಲ್ಲಿ ಹಣವನ್ನು ನೋಡಿಕೊಂಡು ಖರ್ಚು ಮಾಡಿ. ವೃತ್ತಿ ಬದುಕಿನಲ್ಲಿ ಸುಧಾರಣೆ ಕಂಡು ಬರುವುದು. ವ್ಯಾಪಾರಿಗಳು ಲಾಭ ಮತ್ತು ನಷ್ಟ ಎರಡನ್ನೂ ಎದುರಿಸಬೇಕಾಗಬಹುದು. ಸಂಗಾತಿ ನಡುವೆ ಹೊಂದಾಣಿಕೆ ಕೊರತೆ ಇರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಶನಿ ಮಂತ್ರ ಪಠಿಸಿ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











