Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾರ್ಚ್ 29ರಿಂದ ಎರಡೂವರೆ ವರ್ಷ ಈ ಮೂರು ರಾಶಿಗಳ ಮೇಲೆ ಶನಿ ಬೀರಲಿದ್ದಾನೆ ಈ ಪ್ರಭಾವ
ಶನಿಯು ಮಾರ್ಚ್ 29ಕ್ಕೆ ಎರಡೂವರೆ ವರ್ಷಗಳ ಬಳಿ ರಾಶಿ ಬದಲಾವಣೆ ಮಾಡಲಿದ್ದಾನೆ, ಶನಿಯು ಕುಂಭ ರಾಶಿಯನ್ನು ಬಿಟ್ಟು ಮೀನ ರಾಶಿಗೆ ಸಂಚರಿಸಲಿದೆ. ಶನಿಯು ಮೀನ ರಾಶಿಗೆ ಸಂಚಾರ ಅದರ ಪ್ರಭಾವ ಎಲ್ಲಾ ರಾಶಿಗಳಿಗೆ ಇರಲಿದೆ, ಇನ್ನು ಕೆಲವು ರಾಶಿಗಳಿಗಂತೂ ತುಂಬಾನೇ ಶುಭವಾಗಿದೆ. ಶನಿ ಕೃಪೆಯಿಂದಾಗಿ ಆ ರಾಶಿಯವರ ಸಂಪತ್ತು ಹೆಚ್ಚಾಗಲಿದೆ, ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು, ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.
ಶನಿಯು ಮೀನ ರಾಶಿಗೆ ಸಂಚರಿಸಿದಾಗ ಹಣಕಾಸಿನ ವಿಷಯದಲ್ಲಿ ಪ್ರಗತಿ ಹೊಂದಲಿರುವ ರಾಶಿಗಳೆಂದರೆ:

ಕರ್ಕ ರಾಶಿ
ಶನಿಯು ಮೀನ ರಾಶಿಗೆ ಸಂಚಾರ ಮಾಡಿದಾಗ ಕರ್ಕ ರಾಶಿಯವರು ಅಪಾರ ಪ್ರಯೋಜನ ಪಡೆಯುತ್ತೀರಿ. ನೀವು ನಿಮ್ಮ ವೃತ್ತಿ ಬದುಕಿನಲ್ಲಿ ತುಂಬಾನೇ ಯಶಸ್ಸು ಪಡೆಯುತ್ತೀರಿ, ಹಣಕಾಸಿಗೆ ಸಂಬಂಧಿಸಿದ ನಿಮ್ಮ ವ್ಯವಹಾರಗಳಲ್ಲಿ, ನಿಮ್ಮ ಪ್ರಯತ್ನಗಳಲ್ಲಿ ಉತ್ತಮ ಪ್ರತಿಫಲ ಪಡೆಯುತ್ತೀರಿ. ಇನ್ನು ಅನಿರೀಕ್ಷಿತ ಮೂಲಗಳಿಂದಲೂ ಹಣ ಪಡೆಯಲು ಸಾಧ್ಯವಾಗಲಿದೆ.
ಇನ್ನು ಹೊಸ ವ್ಯಾಪಾರಕ್ಕೆ ಪ್ರಯತ್ನ ಮಾಡಬೇಕು ಎಂದು ಬಯಸುವವರು ಶನಿಯು ಮೀನ ರಾಶಿಗೆ ಪ್ರವೇಶ ಮಾಡಿದ ಬಳಿಕ ಪ್ರಾರಂಭಿಸಿದರೆ ಆರ್ಥಿಕವಾಗಿ ತುಂಬಾ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗಲಿದೆ, ವ್ಯಾಪಾರವನ್ನು ವಿಸ್ತರಿಸಲು ಬಯಸುವವರೆಗೆ ಈ ಅವಧಿ ಅನುಕೂಲಕರವಾಗಿದೆ.\
ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ, ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಪಡೆಯಲು ಸಾಧ್ಯವಾಗಲಿದೆ.
ಹೂಡಿಕೆ ದೃಷ್ಟಿಯಿಂದಲೂ ಈ ಅವಧಿ ಅನುಕೂಕರವಾಗಿದೆ, ಈ ಹಿಂದೆ ಮಾಡಿರುವ ಹೂಡಿಕೆ ನಿಮಗೆ ತುಂಬಾನೇ ಉತ್ತಮ ಆರ್ಥಿಕ ಪ್ರಯೋಜನ ನೀಡಲಿದೆ..
ವೃಶ್ಚಿಕ ರಾಶಿ
ಶನಿಯು ಮೀನ ರಾಶಿಗೆ ಪ್ರವೇಶ ಮಾಡಿದಾಗ ವೃಶ್ಚಿಕ ರಾಶಿಯವರು ಕೂಡ ತುಂಬಾ ಉತ್ತಮ ಪ್ರಯೋಜನ ಪಡೆಯಬಹುದು, ಈ ಅವಧಿಯಲ್ಲಿ ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿರುವವರು ಕೂಡ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಮನೆಯ ವಾತಾವರಣ ಕೂಡ ತುಂಬಾ ಚೆನ್ನಾಗಿರಲಿದೆ, ಇನ್ನು ನೀವು ಮನೆ ಕಟ್ಟಬೇಕು ಅಥವಾ ಖರೀದಿಸಬೇಕು, ಹೊಸ ಗಾಡಿ ಖರೀದಿಸಬೇಕೆಂದು ಬಯಸುವುದಾದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಈ ಶನಿ ಸಂಚಾರ ವ್ಯಾಪಾರಸ್ಥರಿಗೂ ಅನುಕೂಲಕರವಾಗಿದೆ, ನಿಮಗೆ ವ್ಯವಹಾರದಲ್ಲಿ ಲಾಭ ಗಳಿಸಲು ಹಾಗೂ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು.
ಕುಟುಂಬ ಜೀವನ ಚೆನ್ನಾಗಿರಲಿದೆ, ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಶನಿಯು ಕುಂಭ ರಾಶಿಯಿಂದ ಮೀನ ರಾಶಿಗೆ ಸಂಚರಿಸಲಿದೆ, ಶನಿಯು ಮೀನ ರಾಶಿಗೆ ಸಂಚರಿಸಿದಾಗ ಕುಂಭ ರಾಶಿಯಲ್ಲಿ 2ನೇ ಮನೆಯಲ್ಲಿ ಕೂರುವ ಶನಿಯು ತುಂಬಾ ಉತ್ತಮ ಪ್ರಯೋಜನ ನೀಡಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ತುಂಬಾನೇ ಸುಧಾರಣೆ ಕಂಡು ಬರಲಿದೆ.
ಆರ್ಥಿಕ ತೊಂದರೆಗಳು ದೂರಾಗುವುದು, ನೀವು ಮಾಡಿದ ಹೂಡಿಕೆಯಿಂದ ನೀವು ಉತ್ತಮ ಪ್ರಯೋಜನ ಪಡೆಯಿರಿ. ಈ ಹಿಂದೆ ನೀವು ಅನುಭವಿಸಿದ ಕಷ್ಟಗಳು ಕಡಿಮೆಯಾಗಲಿದೆ. ನಿಮ್ಮ ಖ್ಯಾತಿ ಹೆಚ್ಚಾಗಲಿದೆ.
ಕುಟುಂಬ ಬದುಕು ಚೆನ್ನಾಗಿರಲಿದೆ, ಸಂಗಾತಿಯ ಬೆಂಬಲ ದೊರೆಯಲಿದೆ, ಉದ್ಯೋಗಿಗಳು ತಮ್ಮ ಕೆಲಸದಲ್ಲಿ ತುಂಬಾನೇ ಪ್ರಗತಿ ಕಂಡು ಬರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications



