Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಕುಂಭದಲ್ಲಿ ಉಂಟಾಗಿದೆ ಶನಿ ಶುಕ್ರ ಯುತಿ: ಈ 7 ರಾಶಿಗೆ ಸಂಪತ್ತಿಗೆ ಕೊರತೆಯಿರಲ್ಲ
ಶುಕ್ರನನ್ನು ಸಂಪತ್ತಿನ ಗ್ರಹವೆಂದು ಕರೆಯಲಾಗುವುದು. ಶುಕ್ರನು ಅನುಕೂಲಕರ ಸ್ಥಾನದಲ್ಲಿದ್ದರೆ ಸಂಪತ್ತು ಹೆಚ್ಚಾಗಲಿದೆ. ಶುಕ್ರನು ಬಲವಾಗಿದ್ದರೆ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ. ಶನಿಯು ಕರ್ಮದ ಫಲ ನೀಡುವ ಗ್ರಹವಾಗಿದೆ. ಶನಿಯು ಕುಂಭ ರಾಶಿಯಲ್ಲಿದೆ, ಇದೇ ರಾಶಿಗೆ ಡಿಸೆಂಬರ್ 28ಕ್ಕೆ ಶುಕ್ರನು ಬಂದಿದ್ದಾನೆ. ಕುಂಭ ರಾಶಿಯಲ್ಲಿ ಶನಿ-ಶುಕ್ರ ಯುತಿ ಈ ರಾಶಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ:

ಮೇಷ ರಾಶಿ
ಶುಕ್ರ ಮತ್ತು ಶನಿಯ ಯುತಿ ತುಂಬಾನೇ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಹಣಕಕೆ ಸಂಬಂಧಿಸಿದ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಶನಿ ಶುಕ್ರ ಯುತಿ ವೃತ್ತಿ ಬದುಕಿಗೂ ತುಂಬಾನೇ ಅನುಕೂಲಕರವಾಗಿದೆ.
ವೃಷಭ ರಾಶಿ
ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ವೃತ್ತಿ ಬದುಕಿನಲ್ಲಿ ಒತ್ತಡ ತುಂಬಾ ಇರಲಿದೆ, ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ. ಇನ್ನು ನೀವು ಹೊಸ ಗಾಡಿ ಖರೀದಿಸಲು ಪ್ರಯತ್ನಿಸಿದರೆ ಈ ಅವಧಿಯಲ್ಲಿ ಸಾಧ್ಯವಾಗಲಿದೆ. ಈ ಯುತಿ ಆರ್ಥಿಕ ಲಾಭವನ್ನು ನೀಡಲಿದೆ.
ಮಿಥುನ ರಾಶಿ
ಈ ಶನಿ ಶುಕ್ರ ಯುತಿ ಅದೃಷ್ಟ ತರಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆಧ್ಯಾತ್ಮದ ಕಡೆಗೆ ಒಲವು ಹೆಚ್ಚಾಗಲಿದೆ, ದೀರ್ಘ ತೀರ್ಥ ಯಾತ್ರೆ ಮಾಡಬಹುದು, ಈ ಸಮಯದಲ್ಲಿ ನಿಮಗೆ ಮಾಸಿಕ ನೆಮ್ಮದಿ ಇರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಸಿಂಹ ರಾಶಿ
ಶನಿ ಮತ್ತು ಶುಕ್ರ ಯುತಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಹೊಸ ವ್ಯಾಪಾರ ವ್ಯವಹಾರದಲ್ಲಿ ತೊಡಗಿಕೊಳ್ಳಲು ಅನುಕೂಲಕರವಾಗಿದೆ. ಈ ಯುತಿ ನಿಮ್ಮ ಹರ್ಷವನ್ನು ಹೆಚ್ಚಿಸಲಿದೆ, ಆರ್ಥಿಕ ದೃಷ್ಟಿಯಿಂದ ಈ ಸಮಯ ಅನುಕೂಲಕರವಾಗಿರಲಿದೆ.
ತುಲಾ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ನಿಮ್ಮ ಸಂಬಂಧ ಮತ್ತಷ್ಟು ಬಲವಾಗಲಿದೆ. ಮಗುವಿನ ಅಪೇಕ್ಷಿತ ದಂಪತಿ ಶುಭ ಸುದ್ದಿ ಪಡೆಯುತ್ತೀರಿ. ಈ ಅವಧಿಯಲ್ಲಿ ಆರ್ಥಿಕ ಲಾಭ ಪಡೆಯುತ್ತೀರಿ.
ವೃಶ್ಚಿಕ ರಾಶಿ
ಶನಿ ಶುಕ್ರ ಯುತಿ ವೃಶ್ಚಿಕ ರಾಶಿಯವರಿಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಸೌಕರ್ಯ ಹೆಚ್ಚಾಗಲಿದೆ, ವ್ಯಾಪಾರಿಗಳಿಗೆ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಉದ್ಯೋಗದಲ್ಲಿಯೂ ನೀವ ಉತ್ತಮ ಯಶಸ್ಸು ಪಡೆಯಲು ಸಾಧ್ಯವಾಗುವುದು.
ಮಕರ ರಾಶಿ
ಕುಂಭ ರಾಶಿಯಲ್ಲಿ ಶನಿ ಮತ್ತು ಶುಕ್ರ ಇರುವುದರಿಂದ ನಿಮ್ಮ ಆದಾಯ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಉಳಿತಾಯ ಹೆಚ್ಚಾಗಲಿದೆ. ಏನಾದರು ಸಾಲ ಮಾಡಿದ್ದರೆ ಅದನ್ನು ತೀರಿಸಲು ಸಾಧ್ಯವಾಗುವುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











