Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಕುಂಭ ರಾಶಿಯಲ್ಲಿ ಶನಿ ಉದಯ: ಶನಿಯ ಕೃಪೆಯಿಂದ ಈ 3 ರಾಶಿಯವರಿಗೆ ಅದೃಷ್ಟಕರ
ಶನಿಯು ಕರ್ಮಕ್ಕೆ ತಕ್ಕ ಫಲ ನೀಡುವ ಗ್ರಹವೆಂದು ವೈದಿಕಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಶನಿಯು ನಿಧಾನವಾಗಿ ಚಲಿಸುವ ಗ್ರಹವಾಗಿದೆ, ಎರಡೂವರೆ ವರ್ಷಕ್ಕೊಮ್ಮೆ ಶನಿಯು ರಾಶಿ ಬದಲಾವಣೆ ಮಾಡುವದು, ಆದ್ದರಿಂದಾಗಿ ಅದರ ಪ್ರಭಾವವು ಜನರ ಜೀವನದ ಮೇಲೆ ದೀರ್ಘಕಾಲದವರೆಗೆ ಇರುತ್ತದೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶನಿಯು ಜಾತಕದಲ್ಲಿ ಮಂಗಳಕರ ಸ್ಥಾನದಲ್ಲಿದ್ದರೆ ಎಲ್ಲಾ ರೀತಿಯ ಸೌಕರ್ಯವನ್ನು ಒದಗಿಸುತ್ತಾನೆ, ಶನಿಯ ಪ್ರಭಾವದಿಂದ ನಮ್ಮ ಬದುಕಿನಲ್ಲಿ ಎಲ್ಲವೂ ಒಳಿತಾಗುವುದು. ಜಾತಕದಲ್ಲಿ ಶನಿಯು ಅಶುಭ ಸ್ಥಾನದಲ್ಲಿದ್ದರೆ ವ್ಯಕ್ತಿಯು ತನ್ನ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುವುದು.
ಇದೀಗ ಶನಿಯು ಕುಂಭ ರಾಶಿಯಲ್ಲಿ ಇದೆ. ಇದೀಗ ಕುಂಭ ರಾಶಿಯಲ್ಲಿ ಅಸ್ತವಾಗಿರುವ ಶನಿಯು ಮಾರ್ಚ್ 18 ರಂದು ಬೆಳಗ್ಗೆ 7.49 ಕ್ಕೆ ಉದಯಿಸುತ್ತದೆ.
ಶನಿ ಉದಯವಾದಾಗ ಶನಿ ಅಸ್ತವಾಗಿದ್ದಾಗ ಉಂಟಾದ ಅಡೆತಡೆಗಳು ದೂರಾಗುವುದು, ಶನಿ ಉದಯವಾದಾಗ ಈ 3 ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ:

ಮೇಷ ರಾಶಿ
ಮೇಷ ರಾಶಿಯವರಲ್ಲಿ ಶನಿಯು ನಿಮ್ಮ ರಾಶಿಯಿಂದ ಹನ್ನೊಂದನೇ ಮನೆಯಲ್ಲಿ ಉದಯಿಸುತ್ತಾನೆ. ಶನಿ ಉದಯದ ಬಳಿಕ ಮೇಷ ರಾಶಿಯವರಿಗೆ ಶನಿಯ ಪ್ರಭಾವ ತುಂಬಾ ಒಳ್ಳೆಯದು, ಇದರಿಂದ ತುಂಬಾ ಒಳಿತಾಗುವುದು. ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಹಠಾತ್ ಆರ್ಥಿಕ ಲಾಭದ ಲಕ್ಷಣಗಳಿವೆ, ನೀವು ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ನೀವು ಒಳ್ಳೆಯ ಉದ್ಯೋಗ ಪಡೆಯಬಹುದು. ಉದ್ಯೋಗಸ್ಥರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯಬಹುದು. ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ನಿರಂತರ ಸುಧಾರಣೆ ಇರುತ್ತದೆ. ನೀವು ಈ ಅವಧಿಯಲ್ಲಿ ವ್ಯವಹಾರದಲ್ಲಿ ಉತ್ತಮ ಆರ್ಥಿಕ ಲಾಭ ಸಿಗಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಲ್ಲಿ ಶನಿದೇವನು ನಿಮ್ಮ ರಾಶಿಚಕ್ರದ ಒಂಬತ್ತನೇ ಮನೆಯಲ್ಲಿ ಉದಯಿಸುತ್ತಾನೆ. ಇದರ ಬಳಿಕ ನಿಮ್ಮ ತೊಂದರೆಗಳು ತುಂಬಾ ಕಡಿಮೆಯಾಗುವುದು. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಉದ್ಯೋಗವನ್ನು ಬದಲಾಯಿಸಲು ಯೋಚಿಸುತ್ತಿರುವವರಿಗೆ ನಿಮ್ಮ ಆಯ್ಕೆಯ ಅವಕಾಶಗಳು ಸಿಗುತ್ತವೆ. ಕೆಲಸದ ಸ್ಥಳದಲ್ಲಿ ಗುರುತಿಸಿಕೊಳ್ಳುತ್ತೀರಿ. ವ್ಯಾಪಾರದಲ್ಲಿರುವವರು ಉತ್ತಮ ಲಾಭವನ್ನು ಪಡೆಯಬಹುದು. ನೀವು ಕುಟುಂಬ ಸದಸ್ಯರಿಂದ ಉತ್ತಮ ಬೆಂಬಲವನ್ನು ಪಡೆಯುತ್ತೀರಿ.
ಸಿಂಹ ರಾಶಿ
ನಿಮ್ಮ ಏಳನೇ ಮನೆಯಲ್ಲಿ ಶನಿಯ ಉದಯವಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ರೀತಿಯ ವ್ಯವಹಾರದಲ್ಲಿ ತೊಡಗಿರುವ ಜನರು ಅಲ್ಲಿಂದ ಉತ್ತಮ ಲಾಭವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನೀವು ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. ಹೊಸ ವ್ಯವಹಾರ ಮಾಡುವುದಾದರೆ ನೀವು ಶನಿ ಉದಯದ ಬಳಿಕ ಪ್ರಾರಂಭಿಸಿ, ಆರ್ಥಿಕ ಲಾಭ ಉಂಟಾಗುವುದು.
ಶನಿ ಮಹಾಮಂತ್ರ
''ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ|
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ||''
ಶನಿ ವೇದ ಮಂತ್ರ
''ಓಂ ಶನ್ನೋದೇವೀರ್-ಭಿಷ್ಟಯ ಆಪೋ ಭವಂತು ಪೀತಯೇ ಶಂಯ್ಯೋರ್ಭಿಸ್ತ್ರವಂತುನಃ''
ಶನಿ ಮಂತ್ರ
"ಓಂ ಹಿಲ್ಮ್ ಶಾಮ್ ಶನಾಯ ನಮ"'
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ
ತಾಂತ್ರಿಕ ಶನಿ ಮಂತ್ರ
'ಓಂ ಪ್ರಾಂ ಪ್ರೀಂ ಪ್ರೌಂ ಸಃ ಶನೈಶ್ಚರಾಯ ನಮಃ|'
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications