Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಾಶಿವರಾತ್ರಿ ಬಳಿಕ ಈ ದಿನಾಂಕಗಳಲ್ಲಿ ಜನಿಸಿದವರಿಗೆ ಶುಭ ಫಲ
ಸಂಖ್ಯಾಶಾಸ್ತ್ರವು ಈ ವರ್ಷದ ಶಿವರಾತ್ರಿ ಭವಿಷ್ಯ ಹೇಳಿದ್ದು ಅದರ ಪ್ರಕಾರ ಈ ಶಿವರಾತ್ರಿ ಕೆಲವೊಂದು ಜನರಿಗೆ ತುಂಬಾನೇ ಶುಭಕಾರಿ ಎಂದು ಹೇಳಲಾಗಿದೆ. ಯಾವ ದಿನಾಂಕದಲ್ಲಿ ಜನಿಸಿದವರಿಗೆ ಈ ಶಿವರಾತ್ರಿ ಹೆಚ್ಚಿನ ಶುಭಯೋಗ ತಂದಿದೆ ಎಂದು ನಫಡುವುದಾದರೆ:

ಸಂಖ್ಯೆ (ಜನ್ಮ ದಿನಾಂಕ 1, 10,19, 28)
ಈ ದಿನಾಂಕಗಳಲ್ಲಿ ಜನಿಸಿದವರಿಗೆ ಶಿವನ ಕೃಪೆ ಹೆಚ್ಚಿರಲಿದೆ. ನೀವು ಈ ಶಿವರಾತ್ರಿಯ ಬಳಿಕ ನಿಮ್ಮ ಕೆಲಸ ಕಾರ್ಯದಲ್ಲಿ ತುಂಬಾನೇ ಪ್ರಗತಿ ಕಾಣುವಿರಿ, ಯಾವುದೋ ಕಾರಣದಿಂದ ನಿಮ್ಮ ಕೆಲಸ ಬಾಕಿಯುಳಿದ್ದರೆ ಅದು ಈ ಅವಧಿಯಲ್ಲಿ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ, ಕೆಲಸಕ್ಕೆ ಹುಡುಕುತ್ತಿದ್ದರೆ ಬಯಸಿದ ಕೆಲಸ ಸಿಗಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರಸ್ಥರು ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಗತಿ ಪಡೆಯುತ್ತೀರಿ.
ಸಂಖ್ಯೆ 2 (ಜನ್ಮ ದಿನಾಂಕ 2, 11, 20, 29)
ನೀವು ಈ ದಿನಾಂಕಗಳಲ್ಲಿ ಜನಿಸಿದ್ದರೆ ಈ ಅವಧಿ ತುಂಬಾನೇ ಪ್ರಯೊಜನಕಾರಿಯಾಗಿದೆ. ನೀವು ನಿಮ್ಮ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ಪಡೆಯುತ್ತೀರಿ. ಇನ್ನು ಹಣದ ಉಳಿತಾಯವಾಗಲಿದೆ. ಆಸ್ತಿ ಅಥವಾ ಮನೆಯಲ್ಲಿ ಹೂಡಿಕೆ ಮಾಡಲು ಬಯಸಿದ್ದರೆ ಈ ಸಮಯ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಇನ್ನು ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಶಿವರಾತ್ರಿಯ ಬಳಿಕ ನೀವು ಉತ್ತಮ ಫಲ ಪಡೆಯುತ್ತೀರಿ, ವ್ಯಾಪಾರಿಗಳು ಲಾಭ ಪಡೆಯುತ್ತೀರಿ, ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗಲಿದೆ.
ಸಂಖ್ಯೆ 5 ( ಜನ್ಮ ದಿನಾಂಕ 5, 14, 23)
ಈ ಜನ್ಮ ದಿನಾಂಕಗಳಲ್ಲಿ ಜನಿಸಿದ್ದರೆ ನೀವು ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ, ಬಹುಕಾಲದಿಂದ ನೀವು ಅತಿಯಾಗಿ ಬಯಸುತ್ತಿದ್ದ ಆಸೆ ಈಡೇರಲಿದೆ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಖುಷಿ, ತೃಪ್ತಿ ಸಿಗಲಿದೆ. ಶಿವಕೃಪೆಯಿಂದ ಪ್ರತಿ ಹೆಜ್ಜೆಯಲ್ಲಿ ಯಶಸ್ಸು ನಿಮ್ಮದಾಗಲಿದೆ. ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ.
ಸಂಖ್ಯೆ 6(ಜನ್ಮ ದಿನಾಂಕ 6, 15, 24)
ಈ ಸಂಖ್ಯೆಯವರು ಕೂಡ ಅತ್ಯಂತ ಮಂಗಳಕರ ಪ್ರಯೋಜನ ಪಡೆಯುತ್ತೀರಿ. ಮದುವೆಗೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಸಂಬಂಧ ಬರುವ ಸಾಧ್ಯತೆ ಇದೆ, ಇನ್ನು ಅಪೂರ್ಣವಾಗಿದ್ದ ಕಾರ್ಯಗಳು ಪೂರ್ಣವಾಗಿದೆ. ಇನ್ನು ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ನೀವು ಬಯಸಿದ ಕೆಲಸ ಸಿಗಲಿದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
8 ಸಂಖ್ಯೆಯವರು ಕೂಡ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಕೆಲಸ ಸಿಗಲಿದೆ. ವ್ಯಾಪಾರಸ್ಥರು ಹಾಗೂ ಉದ್ಯಮಿಗಳು ಹೂಡಿಕೆ ಮಾಡಿದರೆ ಅದರಿಂದ ಲಾಭ ಪಡೆಯುವಲ್ಲಿ ಯಶಸ್ಸು ಪಡೆಯುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications