Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜುಲೈ 7ಕ್ಕೆ ಕರ್ಕ ರಾಶಿಗೆ ಶುಕ್ರ ಸಂಚಾರ: ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ
ಇದೇ ಜುಲೈ 7ಕ್ಕೆ ಶುಕ್ರನು ಕರ್ಕ ರಾಶಿಗೆ ಸಂಚರಿಲಿಸಲಿದೆ. ಶುಕ್ರನನ್ನು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗಿದೆ, ಆದರೆ ಇದು ರಾಶಿಯಲ್ಲಿ ಇದರ ಸ್ಥಾನದ ಪ್ರಕಾರ ಫಲ ನೀಡುವುದು. ಈ ಸಂಚಾರ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ
ಈ ಶುಕ್ರ ಸಂಚಾರ ನಿಮಗೆ ಅನುಕೂಲಕರವಲ್ಲ, ಈ ಅವಧಿಯಲ್ಲಿ ನಿಮ್ಮ ಜೀವನದಲ್ಲಿ ಹೆಚ್ಚಿನ ಒತ್ತಡ ಇರಲಿದೆ. ವೃತ್ತಿ ಬದುಕಿನಲ್ಲಿ ಹೆಚ್ಚು ಒತ್ತಡ ಇರಲಿದೆ. ನಿಮ್ಮ ಕೆಲಸಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ. ವ್ಯಾಪಾರಿಗಳಿಗೂ ಈ ಅವಧಿ ತುಂಬಾ ಸವಾಲಿನಿಂದ ಕೂಡಿರಲಿದೆ. ಹಣದ ಖರ್ಚು ಹೆಚ್ಚಿರಲಿದೆ, ಕುಟುಂಬ ಜೀವನದಲ್ಲಿಯೂ ಕೆಲ ಸಮಸ್ಉಎಗಳಿರಬಹುದು, ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ವೃಷಭ ರಾಶಿ
ಈ ಸಂಚಾರ ನಿಮಗೆ ಅನುಕೂಲಕರವಾಗಿದೆ. ಕೆಲಸಕ್ಕಾಗಿ ಮಾಡುವ ಪ್ರಯಾಣದಿಂದ ನೀವು ಉತ್ತಮ ಫಲ ಪಡೆಯುತ್ತೀರಿ. ಈ ಅವಧಿಯಲ್ಲಿ ಹಣದ ಖರ್ಚು ಹೆಚ್ಚಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂವಹನದ ಕೊರತೆ ಸಮಸ್ಯೆ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ಅವಧಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಶುಕ್ರ ಸಂಚಾರ ಅನುಕೂಲಕರವಾಗಿದೆ. ನೀವು ಹೊಸ ಕೆಲಸವನ್ನು ಪಡೆಯುವ ಸಾಧ್ಯತೆಯಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ಅವಧಿ ನಿಮಗೆ ಶುಭವಾಗಿದೆ, ನೀವು ಗುರಿ ಮುಟ್ಟಲು ಯಶಸ್ವಿಯಾಗುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ತಾಯಿಯ ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ವೃತ್ತಿ ಬದುಕಿನಲ್ಲಿ ಕೆಲ ಸಮಸ್ಯೆಗಳಿರಬಹುದು, ಈ ಸಮಯದಲ್ಲಿ ಯಾವುದೇ ಬದಲಾವಣೆಗೆ ಪ್ರಯತ್ನಿಸಬೇಡಿ. ವ್ಯಾಪಾರಿಗಳಿಗೆ ಸವಾಲಿನ ಸಮಯ , ಆರ್ಥಿಕವಾಗಿ ಏರಳಿತದ ಸಮಯ, ಆದ್ದರಿಂದ ಉಳಿತಾಯ ಮಾಡುವುದು ಕಷ್ಟವಾಗುವುದು. ಹಾಗಾಗಿ ಉಳಿತಾಯ ಮಾಡುವುದು ಕಷ್ಟವಾಗುವುದು. ಸಂಬಂಧದ ಕಡೆಗೆ ಗಮನಹರಿಸಿ, ಆರೋಗ್ಯ ಸಮಸ್ಯೆಗಳಿರಬಹುದು.
ಕನ್ಯಾ ರಾಶಿ
ಕರ್ಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಲಾಭ ಗಳಿಸುತ್ತೀರಿ, ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಅವಧಿ ನಿಮಗೆ ಉತ್ತಮವಾಗಿದೆ.
ತುಲಾ ರಾಶಿ
ಈ ಸಮಯದಲ್ಲಿ ನೀವು ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಈಗೀನ ಕೆಲಸದಲ್ಲಿ ನಿಮಗೆ ತೃಪ್ತಿ ಇರಲ್ಲ, ಹೀಗಾಗಿ ನೀವು ಕೆಲಸ ಬದಕಲಾವಣೆಯ ಬಗ್ಗೆ ಯೋಚಿಸಬಹುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಬಹುದು, ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು. ನಿಮ್ಮ ಸಂಬಂಧದಲ್ಲಿ ಪ್ರಕ್ಷುಬ್ಧತೆ ಇರಲಿದೆ. ವೃತ್ತಿ ಬದುಕಿನಲ್ಲಿ ತೃಪ್ತಿ ಇರಲಿದೆ. ಖರ್ಚು ಹೆಚ್ಚಿರಲಿದೆ, ಖರ್ಚು ಭರಿಸಲು ಕಷ್ಟವಾಗುವುದು, ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನಿಮ್ಮ ಹಾಗೂ ಸಂಗಾತಿಯ ನಡುವೆ ಭಿನ್ನಾಭಿಪ್ರಾಯವಿರಲಿದೆ. ನೀವು ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ಶುಕ್ರ ಸಂಚಾರ ನಿಮ್ಮ ವೃತ್ತಿ ಬದುಕಿನಲ್ಲಿ ಹಲವು ಸಮಸ್ಯೆಗಳನ್ನುಂಟು ಮಾಡಬಹುದು. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲ್ಲ ಅಂತ ಬೇಸರ ಉಂಟಾಗಬಹುದು.
ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ಹಣದ ನಷ್ಟ ಉಂಟಾಗಬಹುದು. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ಆರೋಗ್ಯಕ್ಕಾಗಿ ಹಣದ ಖರ್ಚು ಹೆಚ್ಚಿರಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ನಿಮಗೆ ಅನುಕೂಲಕರವಾಗಿದೆ, ಕೆಲಸದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಆರ್ಥಿಕ ಲಾಭ ಗಳಿಸುತ್ತೀರಿ, ನೀವು ಈ ಅವಧಿಯಲ್ಲಿ ದೊಡ್ಡ ಆರ್ಥಿಕ ಲಾಭವನ್ನು ಪಡೆಯುತ್ತೀರಿ . ಸಂಗಾತಿಯೊಂದಿಗೆ ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ಕುಟುಂಬ ಸದಸ್ಯರ ಆರೋಗ್ಯಕ್ಕೆ ಹಣ ಖರ್ಚಾಗುವುದು.
ಕುಂಭ ರಾಶಿ
ಕುಂಭ ರಾಶಿಯವರಿಗೆ, ಶುಕ್ರನು ನಾಲ್ಕನೇ ಮತ್ತು ಒಂಬತ್ತನೇ ಮನೆಯ ಅಧಿಪತಿ ಮತ್ತು ನಿಮ್ಮ ಆರನೇ ಮನೆಯಲ್ಲಿ ಸಾಗಲಿದ್ದಾನೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಹೆಚ್ಚಿರಬಹುದು, ಕೆಲಸದಲ್ಲಿ ನಿಮ್ಮಿಂದ ತಪ್ಪಾಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ.
ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಘಲಿರಬಹುದು. ಆರೋಗ್ಯಕ್ಕಾಗಿ ಹಣದ ಖರ್ಚು ಹೆಚ್ಚಿರಲಿದೆ.
ಮೀನ ರಾಶಿ
ಮಕ್ಕಳ ಕುರಿತ ಚಿಂತೆ ಕಾಡುವುದು, ಕೆಲಸ ಬದಲಾಯಿಸಲು ಯೋಚಿಸುತ್ತೀರಿ, ಆರ್ಥಿಕವಾಗಿ ಈ ಅವಧಿ ಮಿಶ್ರಫಲ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವಿರಬಹುದು. ಮಕ್ಕಳ ಆರೋಗ್ಯಕ್ಕಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಚರ್ಮ ಸಂಬಂಧಿಸ ಸಮಸ್ಯೆ ಕಾಡಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











