Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶುಕ್ರ ಸಂಚಾರ: ಡಿಸೆಂಬರ್ 2ರವರೆಗೆ ಈ 7 ರಾಶಿಗಳಿಗೆ ಶುಕ್ರದೆಸೆ, ಹಣದ ಕೊರತೆ ಇರಲ್ಲ
ಅದೃಷ್ಟದ ಗ್ರಹವೆಂದು ಕರೆಯಲ್ಪಡುವ ಶುಕ್ರನು ನವೆಂಬರ್ 7ರಿಂದ ಡಿಸೆಂಬರ್ 2ರವರೆಗೆ ಧನು ರಾಶಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಶುಕ್ರನ ಸ್ಥಾನ ನಿಮ್ಮ ಆರ್ಥಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಹಣಕಾಸಿನ ವಿಚಾರದಲ್ಲಿ ಯಾವ ರಾಶಿಯವರಿಗೆ ಹೇಗೆ ಇರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಶುಕ್ರನು ಧನು ರಾಶಿಯಲ್ಲಿ ಇರುವಾಗ ಮೇಷ ರಾಶಿಯವರಿಗೆ ಆರ್ಥಿಕವಾಗಿ ಅನುಕೂಲಕರವಾಗಿರಲಿದೆ. ಈ ಸಮಯದಲ್ಲಿ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯಬಹುದು. ಶುಕ್ರನ ಕೃಪೆಯಿಂದ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತ,ವಾಗಿ ನೆರವೇರಲಿದೆ.
ವೃಷಭ ರಾಶಿ
ಶುಕ್ರನು ವೃಷಭ ರಾಶಿಯವರಿಗೆ ಆರ್ಥಿಕವಾಗಿ ಅನುಕೂಲಕರವಾಗಿರಲಿದೆ. ದೊಡ್ಡ ಖರ್ಚುಗಳು ಇರಲ್ಲ, ವ್ಯಾಪಾರಿಗಳು ಕೂಡ ಉತ್ತಮ ಆರ್ಥಿಕ ಪ್ರಯೋಜನ ಪಡೆಯಬಹುದು. ಇತರ ಸವಾಲುಗಳಿರಲಿದೆ ಆದರೆ ಆರ್ಥಿಕವಾಗಿ ತೊಂದರೆ ಇರಲ್ಲ.
ಮಿಥುನ ರಾಶಿ
ಈ ಶುಕ್ರ ಸಂಚಾರ ಮಿಥುನ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಅನುಕೂಲಕರವಾಗಿದೆ. ನೀವು ಹೂಡಿಕೆಯಿಂದ ಲಾಭ ಗಳಿಸುವಿರಿ, ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿದ್ದರೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರ್ಥಿಕವಾಗಿ ಉತ್ತಮವಾಗಿರುವುದರಿಂದ ಈ ಸಂಚಾರದ ಅವಧಿ ಸಂತೋಷದಿಂದ ಕೂಡಿರಲಿದೆ.
ಕರ್ಕ ರಾಶಿ
ಈ ಶುಕ್ರ ಸಂಚಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಆರ್ಥಿಕ ತೊಂದರೆಗಳು ಎದುರಾಗಬಹುದು, ಹಣವನ್ನು ಹೊಂದಿಸುವುದೇ ದೊಡ್ಡ ಸವಾಲಾಗಬಹುದು, ನೀವು ಸಾಲ ಮಾಡಿದ್ದರೆ ಅದನ್ನು ಮರು ಪಾವತಿಸುವ ಒತ್ತಡವಿರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ, ಆದಾಯವಿರಲಿದೆ, ಆದರೆ ಅದರಂತೆ ಖರ್ಚು ಕೂಡ ಇರಲಿದೆ. ಈ ಅವಧಿಯಲ್ಲಿ ಯಾವುದೇ ಹೊಸ ಹೂಡಿಕೆ ಮಾಡಬೇಡಿ, ವ್ಯಾಪಾರಿಗಳು ತಮ್ಮ ವ್ಯವಹಾರ ವಿಸ್ತರಣೆಗೆ ಯೋಚಿಸುತ್ತಿದ್ದರೆ ಇನ್ನೂ ಸ್ವಲ್ಪ ಕಾಯುವುದು ಒಳ್ಳೆಯದು.
ಕನ್ಯಾ ರಾಶಿ
ಶುಕ್ರನು ಧನು ರಾಶಿಗೆ ಸಂಚರಿಸಿದಾಗ ಕನ್ಯಾ ರಾಶಿಯವರು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಹಣದ ತೊಂದರೆಯಿಲ್ಲದ ಕಾರಣ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಈ ಅವಧಿಯಲ್ಲಿ ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು.
ತುಲಾ ರಾಶಿ
ಶುಕ್ರನು ಧನು ರಾಶಿಗೆ ಸಂಚರಿಸಿದಾಗ ತುಲಾ ರಾಶಿಯಲ್ಲಿ 3ನೇ ಮನೆಯಲ್ಲಿ ಇರಲಿದೆ, ಈ ಸಂಚಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ಹಣಕ್ಕಾಗಿ ಮಾಡಿದ ಪ್ರಯತ್ನಗಳಲ್ಲಿ ಯಶಸ್ಸು ಕಂಡು ಬರಲಿದೆ.
ವೃಶ್ಚಿಕ ರಾಶಿ
ಈ ಶುಕ್ರ ಸಂಚಾರ ವೃಶ್ಚಿಕ ರಾಶಿಯವರಿಗೆ ಅನುಕೂಲಕರವಲ್ಲ, ನೀವು ಹಣದ ವಿಷಯದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು, ವ್ಯಾಪಾರಿಗಳು ನಷ್ಟ ಉಂಟಾಗದಂತೆ ಜಾಗ್ರತೆ ಮಾಡಬೇಕು. ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ.
ಧನು ರಾಶಿ
ಶುಕ್ರನು ನಿಮ್ಮ ಲಗ್ನ ಮನೆಯಲ್ಲಿರುವಾಗ ಖರ್ಚು ಹೆಚ್ಚಿಸಲಿದೆ, ಆರೋಗ್ಯ ಸಮಸ್ಯೆಯ ಕಾರಣ ಹಣದ ಖರ್ಚು ಹೆಚ್ಚಿರಲಿದೆ, ಈ ಅವಧಿಯಲ್ಲಿ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ, ಸಲ ಪಡೆಯದಂತೆ ಜಾಗ್ರತೆವಹಿಸಿ.
ಮಕರ ರಾಶಿ
ಶುಕ್ರನ 12ನೇ ಮನೆಯ ಸ್ಥಾನ ನಿಮಗೆ ಅನುಕೂಲಕರವಾಗಿದೆ, ನೀವು ಆರ್ಥಿಕವಾಗಿ ಉತ್ತಮ ಪ್ರಯೋಜನ ಕಾಣುತ್ತೀರಿ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಹೊಸ ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ.
ಕುಂಭ ರಾಶಿ
ಶುಕ್ರನು ಧನು ರಾಶಿಯಲ್ಲಿ ಶುಕ್ರನು 11ನೇ ಮನೆಗೆ ಇರಲಿದೆ, ವ್ಯಾಪಾರಿಗಳಿಗೆ ಆರ್ಥಿಕ ಪ್ರಯೋಜನ ಪಡೆಯಬಹುದು. ಹಣಕಾಸಿನ ದೃಷ್ಟಿಯಿಂದ ಡಿಸೆಂಬರ್ 2ರವರೆಗೆ ತುಂಬಾನೇ ಅನುಕೂಲಕರವಾಗಿರಲಿದೆ. ಈ ಅವಧಿ ಉಳಿತಾಯದ ದೃಷ್ಟಿಯಿಂದ ಅನುಕೂಲಕರವಾಗಿರಲಿದೆ.
ಮೀನ ರಾಶಿ
ನೀವು ಹಣದ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಸ್ವಲ್ಪ ಜಾಗ್ರತೆವಹಿಸದಿದ್ದರೆ ಹಣದ ನಷ್ಟ ಉಂಟಾಗಬಹುದು. ವ್ಯಾಪಾರಿಗಳು ಹೊಸ ಹೂಡಿಕೆಯ ಬಗ್ಗೆ ಜಾಗ್ರತೆವಹಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications