Latest Updates
-
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ!
ವರ್ಷದ ಬಳಿಕ ಧನು ರಾಶಿಗೆ ಶುಕ್ರ ಸಂಚಾರ: ಈ 6 ರಾಶಿಯವರಿಗೆ ಶುಕ್ರದೆಸೆ ಶುರು
ಶುಕ್ರನನ್ನು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗಿದೆ, ಶುಕ್ರನು ನವೆಂಬರ್ 7ಕ್ಕೆ ಧನು ರಾಶಿಗೆ ಸಂಚರಿಸಲಿದೆ. ಶುಕ್ರನು ಧನು ರಾಶಿಯ್ಲಿ ಇರುವಾಗ ಈ ರಾಶಿಯವರಿಗೆ ಎಲ್ಲಾ ರೀತಿಯಿಂದಲೂ ಅನುಕೂಲಕರ...

ಮೇಷ ರಾಶಿ
ಮೇಷ ರಾಶಿಯಲ್ಲಿ ಶುಕರ 9ನೇ ಮನೆಗೆ ಸಂಚರಿಸಲಿದೆ, ಇದನ್ನು ಅದೃಷ್ಟದ ಮನೆಯೆಂದು ಪರಿಗಣಿಸಲಾಗಿದೆ. ಈ ಅವಧಿ ವೃತ್ತಿ ಜೀವನದ ದೃಷ್ಟಿಯಿಂದ ತುಂಬಾನೇ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ನಿಮ್ಮ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಕುಟುಂಬ ಜೀವನದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಕುಟುಂಬದ ಜೊತೆ ಟ್ರಿಪ್ ಪ್ಲ್ಯಾನ್ ಮಾಡಬಹುದು. ಆರೋಗ್ಯದ ದೃಷ್ಟಿಯಿಂದಲೂ ಈ ಶುಕ್ರನ ಸ್ಥಾನ ನಿಮಗೆ ಅನುಕೂಲಕರವಾಗಿದೆ.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಶುಕ್ರ 7ನೇ ಮನೆಗೆ ಸಂಚರಿಸಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಒಳ್ಳೆಯ ಲಾಭ ಪಡೆಯುತ್ತೀರಿ. ಇನ್ನು ಪ್ರತಿಕೂಲ ಸಂದರ್ಭದಲ್ಲಿ ಪ್ರೀತಿ ಪಾತ್ರರ ಬೆಂಬಲ ಪಡೆಯುತ್ತೀರಿ. ಷೇರಿನಲ್ಲಿ ತೊಡಗಿಸಿಕೊಂಡಿದ್ದರೆ ಒಳ್ಳೆಯ ಲಾಭ ಪಡೆಯಲು ಸಾಧ್ಯವಾಗುವುದು, ಈ ಅವಧಿಯಲ್ಲಿ ವ್ಯಾಪಾರಿಗಳು ಲಾಭ ಪಡೆಯುತ್ತೀರಿ, ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ ಸೂರ್ಯನು 4ನೇ ಮನೆಗೆ ಸಂಚರಿಸಲಿದೆ. ಈ ಶುಕ್ರ ಸಂಚಾರ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯವು ಯೋಜನೆಯಂತೆಯೇ ಮುಂದುವರೆಯಲಿದೆ. ಹಣದ ದೃಷ್ಟಿಯಿಂದ ನೋಡುವುದಾದರೆ ಈ ಸಮಯ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ ಶುಕ್ರನು 3ನೇ ಮನೆಗೆ ಸಂಚರಿಸಲಿದೆ. ಈ ಸಂಚಾರ ನಿಮಗೆ ಅನುಕೂಲಕರವಾಗಿದೆ. ಉದ್ಯೋಗದ ಕಡೆಗೆ ಗಮನಹರಿಸಬೇಕು, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಹಣಕಾಸಿ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ. ಈ ಶುಕ್ರ ಸಂಚಾರ ನಿಮಗೆ ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ.
ಮಕರ ರಾಶಿ
ಮಕರ ರಾಶಿಯಲ್ಲಿ ಶುಕ್ರನು 12ನೇ ಮನೆಯಲ್ಲಿ ಇರಲಿದೆ. ಶುಕ್ರನು ಈ ಮನೆಯಲ್ಲಿ ಇರುವಾಗ ಅನುಕೂಲಕರ ಪ್ರಯೋಜನ ನೀಡಲಿದೆ. ಹೊಸ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿದ್ದರೆ ಕೆಲಸ ಸಿಗಲಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರ ಯೋಜನೆಯಲ್ಲಿ ಬದಲಾವಣೆ ಮಾಡುವುದು ಒಳ್ಳೆಯದು. ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಲೇಬೇಡಿ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಶುಕ್ರನು 11ನೇ ಮನೆಯಲ್ಲಿ ಇರಲಿದೆ. ವೃತ್ತಿ ಜೀವನದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ, ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಈ ಸಮಯದಲ್ಲಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications