Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಸೂರ್ಯ ಗ್ರಹಣ: ಈ ಸೂರ್ಯಗ್ರಹಣ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ?
ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಈ ಸೂರ್ಯಗ್ರಹ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಸೂರ್ಯಗ್ರಹಣ ಕೆಲವು ಸವಾಲುಗಳನ್ನು ತರಬಹುದು, ಆರೋಗ್ಯ ಸಮಸ್ಯೆಗಳಿರಬಹುದು, ದೊಡ್ಡ ಹಣದ ವ್ಯವಹಾರ ಮಾಡಲು ಹೋಗಬೇಡಿ. ಇನ್ನು ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಅದರ ಸಾಧಕ ಬಾಧಕಗಳ ಬಗ್ಗೆ ಆಲೋಚನೆ ಮಾಡಿ ಮಾಡಬೇಕು.

ವೃಷಭ ರಾಶಿ
ಈ ಸೂರ್ಯಗ್ರಹಣ ನಿಮಗೆ ಮಿಶ್ರಫಲ, ಕುಟುಂಬ ಬದುಕಿನ ಕಡೆಗೆ ತುಂಬಾನೇ ಗಮನಹರಿಸಬೇಕು, ಚಿಕ್ಕ ವಿಷಯವನ್ನು ದೊಡ್ಡದು ಮಾಡಲು ಹೋಗಬೇಡಿ. ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಮಿಥುನ ರಾಶಿ
ಸೂರ್ಯಗ್ರಹಣದ ಬಳಿಕ ಕೆಲ ಸವಾಲುಗಳು ಎದುರಾಗಬಹುದು, ನಿಮ್ಮ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚು ಶ್ರಮವಹಿಸಬೇಕು. ನ್ಯಾಯಾಲಯದ ವಿಷಯದಲ್ಲಿ ಜಾಗ್ರತೆವಹಿಸಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ಸೂರ್ಯಗ್ರಹಣ ನಿಮ್ಮ ಮನಃಶಾಂತಿಗೆ ಭಂಗ ಉಂಟಾಗಬಹುದು. ನೀವು ನಿಮ್ಮ ನಡವಳಿಕೆ ಹಾಗೂ ಮಾತಿನ ಕಡೆಗೆ ಗಮನಹರಿಸಿ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ
ಈ ಸೂರ್ಯಗ್ರಹಣ ಸಿಂಹ ರಾಶಿಯವರಿಗೆ ಶುಭವಾಗಿದೆ. ಹಣಕಾಸಿನ ದೃಷ್ಟಿಯಿಂದ ನಿಮಗೆ ಶುಭವಾಗಿದೆ, ನಿಮ್ಮ ಸಂಬಂಧ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೂ ಈ ಸೂರ್ಯಗ್ರಹಣ ಅನುಕೂಲಕರವಾಗಿದೆ, ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಸೂರ್ಯಗ್ರಹಣ ಪ್ರಯೋಜನಕಾರಿಯಾಗಿದೆ, ವ್ಯಾಪಾರಸ್ಥರು ಲಾಭ ಪಡೆಯುತ್ತೀರಿ. ಕೆಲಸದಲ್ಲಿ ನೀವು ಎದುರಿಸುತ್ತಿರುವ ಅಡೆತಡೆ ದೂರಾಗಲಿದೆ.
ವೃಶ್ಚಿಕ ರಾಶಿ
ಈ ಸೂರ್ಯಗ್ರಹಣ ನಿಮಗೆ ಶುಭ ಲಾಭ ತರಲಿದೆ. ವಿದೇಶಕ್ಕೆ ಪ್ರಯಾಣ ಮಾಡಲು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಬದುಕಿನಲ್ಲಿ ಕೆಲ ಬದಲಾವಣೆಗಳನ್ನು ನೋಡಬಹುದು.
ಧನು ರಾಶಿ
ಈ ಸಂಚಾರ ನಮಗೆ ಅನುಕೂಲಕರವಾಗಿದೆ, ನಿಮಗೆ ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಅಪೂರ್ಣವಾಗಿರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ಸೂರ್ಯಗ್ರಹಣ ವಿಶೇಷವಾಗಿರಲಿದೆ, ಈವು ಬಯಸಿದ ಕ್ಷೇತ್ರದಲ್ಲಿ ಲಾಭ ಪಡೆಯಲು ಸಾಧ್ಯವಾಗುವುದು, ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿದೆ.
ಕುಂಭ ರಾಶಿ
ಕುಂಬ ರಾಶಿಯವರು ಸೂರ್ಯಗ್ರಹಣದ ಬಳಿಕ ವೃತ್ತಿ ಬದುಕಿನಲ್ಲಿ ಶುಭ ಫಲ ಪಡೆಯುತ್ತೀರಿ, ಹೊಸ ಉದ್ಯೋಗ ಅವಕಾಶ ದೊರೆಯಲಿದೆ. ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ.
ಮೀನ ರಾಶಿ
ನೀವು ಯಾರನ್ನೂ ಕುರುಡಾಗಿ ನಂಬಬೇಡಿ, ದೂರ ಪ್ರಯಾಣ ಮಾಡುವಾಗ ಜಾಗ್ರತೆವಹಿಸಿ. ಕೆಲಸದಲ್ಲಿ ಅಭದ್ರತೆ ಕಾಡಬಹುದು, ಉದ್ಯೋಗದ ಕಡೆಗೆ ಗಮನಹರಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications