Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೋಮಾವತಿ ಅಮವಾಸ್ಯೆ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?
ಸೋಮಾವತಿ ಅಮವಾಸ್ಯೆಯ ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ, ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ತುಂಬಾನೇ ಗಮನಹರಿಸಬೇಕಾಗುತ್ತದೆ. ಕುಟುಂಬದಲ್ಲಿನ ಸಮಸ್ಯೆಯಿಂದಾಗಿ ಮಾನಸಿಕ ಒತ್ತಡ ಹೆಚ್ಚಿರಲಿದೆ.

ವೃಷಭ ರಾಶಿ
'ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ, ಅಲ್ಲದೆ ಈ ದಿನ ದೊಡ್ಡ ಖರ್ಚು ಕೂಡ ಇರಲ್ಲ. ಆದರೆ ಈ ದಿನ ಯಾರಿಗೂ ಸಾ ನೀಡಬೇಡಿ, ಮರಳಿ ಪಡೆಯುವುದು ಕಷ್ಟವಾಗಬಹುದು.
ಮಿಥುನ ರಾಶಿ
ಈ ದಿನ ಶುಭ ಸುದ್ದಿ ಪಡೆಯುತ್ತೀರಿ, ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಇನ್ನು ಹೂಡಿಕೆಯ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ಮಕ್ಕಳ ಕಡೆಗೆ ಗಮನಹರಿಸಬೇಕು. ವ್ಯಾಪಾರಸ್ಥರು ಈ ದಿನ ನಿರೀಕ್ಷಿತ ಲಾಭ ಪಡೆಯಬಹುದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ತುಂಬಾ ಶುಭವಾಗಿದೆ, ನೀವು ಪ್ರಮುಖ ವಿಷಯದ ಬಗ್ಗೆ ನಿಮ್ಮ ಆಪ್ತರ ಜೊತೆ ಚರ್ಚಿಸುವುದರಿಂದ ನಿಮ್ಮ ಗೊಂದಲಕ್ಕೆ ಉತ್ತರ ಸಿಗಲಿದೆ, ಕೆಲಸಕ್ಕೆ ಸಂಬಂಧಿಸಿದ ವಿಷಯಗಳನ್ನು ಬೇರೆಯವರ ಜೊತೆ ಹಂಚಿಕೊಳ್ಳಬೇಡಿ, ಈ ದಿನ ನೀವು ಆಹಾರಕ್ರಮದ ಕಡೆಗೆ ಗಮನಹರಿಸಬೇಕು, ಇನ್ನು ಮನೆಯ ವಾತಾವರಣ ಅಷ್ಟೊಂದು ಅನುಕೂಲಕರವಾಗಿರಲ್ಲ.
ಸಿಂಹ ರಾಶಿ
ಈ ದಿನ ನೀವು ಕೆಲಸ ಕಾರ್ಯದ ಮೇಲೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು, ನಿಮ್ಮ ಶತ್ರುಗಳ ಬಗ್ಗೆ ಹೆಚ್ಚು ಗಮನಹರಿಸಬೇಕು, ಅವರು ನಿಮಗೆ ಸಮಸ್ಯೆಯನ್ನುಂಟು ಮಾಡಬಹುದು, ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದವರ ಬೆಂಬಲ ನಿಮಗಿರಲಿದೆ.
ಕನ್ಯಾ ರಾಶಿ
ನೀವು ಬೇಡದ ವಿಷಯಗಳಲ್ಲಿ ಸಮಯ ವ್ಯರ್ಥ ಮಾಡದಂತೆ ಸಲಹೆ ನೀಡಲಾಗುವುದು, ಕೆಲಸದಲ್ಲಿ ಕೆಲ ಸಮಸ್ಯೆ ಎದುರಿಸಬಹುದು, ಈ ದಿನ ಹಣದ ಖರ್ಚು ಹೆಚ್ಚಿರಬಹುದು, ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ತುಲಾ ರಾಶಿ
ಈ ದಿನ ಕೆಲಸದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ, ರಾಜಕಾರಣಿಗಳು ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು, ಇನ್ನು ಕುಟುಂಬಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಮನೆಯ ಹಿರಿಯರ ಅಭಿಪ್ರಾಯ ಪಡೆಯಿರಿ. ಹಣವನ್ನು ಹೂಡಿಕೆ ಮಾಡುವಾಗ ಕೂಡ ಜಾಗ್ರತೆವಹಸಿ, ವ್ಯಾಪಾರಿಗಳಿಗೆ ಸರಾಸರಿಯಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ವ್ಯಾಪಾರಸ್ಥರು ವಂಚನೆಗೆ ಒಳಗಾಗದಂತೆ ಜಾಗ್ರತೆವಹಿಸಬೇಕು. ಇನ್ನು ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಸಮಯಕ್ಕೆ ಸರಿಯಾಗಿ ಔಷಧ ತೆಗೆದುಕೊಳ್ಳಿ.ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ನೀವಾಡುವ ಮಾತಿನ ಕಡೆ ಕೂಡ ಹೆಚ್ಚು ಗಮಹರಿಸಬೇಕು, ಈ ದಿನ ನಿಮಗೆ ಖುಷಿಯ ಸುದ್ದಿ ಸಿಗಲಿದೆ, ಅದು ನಿಮ್ಮ ಸಂತೋಷ ಹೆಚ್ಚಿಸಲಿದೆ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುತ್ತೀರಿ, ಈ ದಿನ ನೀವು ಬೇರೆ ವ್ಯಕ್ತಿಗಳನ್ನು ನಂಬಬೇಡಿ, ನೀವು ನಿಮ್ಮ ಕುಟುಂಬದ ಜವಾಬ್ದಾರಿ ಪೂರೈಸುವುದರ ಕಡೆಗೆ ಹೆಚ್ಚಿನ ಗಮನಹರಿಸಬೇಕು.ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಲಾಭವನ್ನು ಪಡೆಯಲು ಸಾಧ್ಯವಾಗುವುದು, ಮನೆಉ ವಾತಾವರಣ ತುಂಬಾ ಚೆನ್ನಾಗಿರಲಿದೆ. ಮನೆಯಲ್ಲಿ ಶೀಘ್ರವೇ ಶುಭ ಕಾರ್ಯ ನಡೆಯಲಿದೆ. ಈ ದಿನ ದಪಡ್ಡ ಚಿಂತೆಯಿಲ್ಲದೆ ಆರಾಮವಾಗಿ ಕಳೆಯಬಹುದು.
ಮೀನ ರಾಶಿ
ಕೆಲಸಕ್ಕೆ ಸಂಬಂಧಿಸಿದ ಅಡೆತಡೆ ಬಗೆಹರಿಯುವ ಸೂಚನೆಯಿದೆ, ಆದರೆ ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಬೇರೆಕಡೆ ಕೆಲಸಕ್ಕೆಪ್ರಯತ್ನ ಮಾಡಿದ್ದರೆ ಅದರಿಂದ ಒಳ್ಳೆಯ ಸುದ್ದಿ ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications