Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಕರದಲ್ಲಿ ಸೂರ್ಯ: ಈ 5 ರಾಶಿಗಳಿಗೆ ಈ ಅವಧಿ ತುಂಬಾನೇ ಅದ್ಭುತವಾಗಿರಲಿದೆ
ಸೂರ್ಯನು ಇದೀಗ ಮಕರ ರಾಶಿಯಲ್ಲಿದೆ, ಫೆಬ್ರವರಿ 13ಕ್ಕೆ ಕುಂಭ ರಾಶಿಗೆ ಸಂಚರಿಸಿದೆ. ಸೂರ್ಯನು ಮಕರ ರಾಶಿಯಲ್ಲಿರುವ ಈ ಅವಧಿ ಈ ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿ:

ಕರ್ಕ ರಾಶಿ
ಸೂರ್ಯನು ಕರ್ಕ ರಾಶಿಯ 7ನೇ ಮನೆಯಲ್ಲಿದೆ, ಸೂರ್ಯನ ಈ ಸ್ಥಾನ ಕರ್ಕ ರಾಶಿಯವರಗೆ ಶುಭ ಫಲಿತಾಂಶ ತರಲಿದೆ. ಈ ಅವಧಿ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿ ನಡೆಯಲಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ನಿಮ್ಮ ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಉಳಿತಾಯಕ್ಕೆ ಈ ಅವಧಿ ಅನುಕೂಲಕರವಾಗಿದೆ.
ಹಣದ ಕಾರಣದಿಂದಾಗಿ ಯಾವುದಾದರು ಕೆಲಸ ಬಾಕಿಯುಳಿದಿದ್ದರೆ ಅದು ಬಗೆಹರಿಯಲಿದೆ, ಅರ್ಧದಲ್ಲಿ ನಿಂತಿದ್ದ ಕೆಲಸ ಕಾರ್ಯಗಳು ಮತ್ತೆ ಚುರುಕುಗೊಳ್ಳಲಿದೆ. ಈ ಸೂರ್ಯನ ಈ ಸ್ಥಾನ ಸಂಬಂಧದ ದೃಷ್ಟಿಯಿಂದಲೂ ಉತ್ತಮವಾಗಿದೆ, ಗಂಡ-ಹೆಂಡತಿ ನಡುವಿನ ಸಂಬಂಧ ತುಂಬಾ ಚೆನ್ನಾಗಿರಲಿದೆ.
ತುಲಾ ರಾಶಿ
ಸೂರ್ಯನು ಮಕರ ರಾಶಿಯಲ್ಲಿರುವಾಗ ನಿಮ್ಮ ರಾಶಿಯಲ್ಲಿ ನಾಲ್ಕನೇ ಮನೆಯಲ್ಲಿ ಇದೆ, ಸೂರ್ಯನ ಈ ಸ್ಥಾನ ನಿಮಗೆ ಅನುಕೂಲಕರ ಫಲಿತಾಂಶ ನೀಡಲಿದೆ. ಈ ಸಮಯ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ಹಣ ಗಳಿಸುವುದು ಮಾತ್ರ ಹಣವನ್ನು ಉಳಿಸಲು ಕೂಡ ನಿಮಗೆ ಸಾಧ್ಯವಾಗಲಿದೆ.
ವೃತ್ತಿ ಬದುಕಿನಲ್ಲಿ ನೀವು ಊಹಿಸಿದಂತೆಯೇ ಫಲಿತಾಂಶ ಪಡೆಯುವುದರಿಂದ ಸಂತೋಷವಾಗಿರುತ್ತೀರಿ. ಹೊಸ ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ಶುಭ ಸುದ್ದಿ ಪಡೆಯಬಹುದು. ಕೆಲಸದಲ್ಲಿನ ಬದಲಾವಣೆಗೆ ಈ ಅವಧಿ ಅನುಕೂಲಕರವಾಗಿದೆ.
ಪ್ರೇಮ ಜೀವನ ಚೆನ್ನಾಗಿರಲಿದೆ.ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆದರೆ ನೀವು ಆರೋಗ್ಯದ ಕಡೆಗೆ ಗಮನಹರಿಸಲು ಲಹೆ ನೀಡಲಾಗುವುದು.
ವೃಶ್ಚಿಕ ರಾಶಿ
ಈ ಮಕರ ಸಂಕ್ರಾಂತಿಯ ಬಳಿಕ ವೃಶ್ಚಿಕ ರಾಶಿಯವರು ಉತ್ತಮ ಫಲಿತಾಂಶ ಪಡೆಯುತ್ತಿದ್ದೀರಿ, ಸೂರ್ಯನ ಪ್ರಭಾವು ನಿಮಗೆ ಅನುಕೂಲಕರವಾಗಿರುವುದರಿಂದ ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಇನ್ನು ಈ ಅವಧಿಯಲ್ಲಿ ಹಣವನ್ನು ಉಳಿಸಲು ಸಾಧ್ಯವಾಗುವುದು.
ಈ ಅವಧಿಯಲ್ಲಿ ಸಂಬಂಧಗಳು ಚೆನ್ನಾಗಿರುತ್ತದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಸೂರ್ಯನ ಈ ಸಂಚಾರ ಧನು ರಾಶಿಯವರಿಗೆ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿಯನ್ನು ಕಾಣಬಹುದು. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಆದರೆ ಈ ಸಮಯದಲ್ಲಿ ಖರ್ಚು ಕೂಡ ಹೆಚ್ಚಿರಲಿದೆ. ಈ ಸಮಯದಲ್ಲಿ ಕುಟುಂಬ ಜೀವನ ಚೆನ್ನಾಗಿರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಸೂರ್ಯನ ಈ ಸಂಚಾರ ಮೀನ ರಾಶಿಯವರಿಗೂ ತುಂಬಾನೇ ಅನುಕೂಲಕರವಾಗಿದೆ. ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ನಿಮಗೆ ತುಂಬಾನೇ ಉತ್ತಮವಾಗಿದೆ. ಒಟ್ಟಿನಲ್ಲಿ ಈ ಸೂರ್ಯ ಸಂಚಾರ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರ ಫಲಿತಾಂಶ ತರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
