Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕುಂಭ ರಾಶಿಗೆ ಪಥ ಬದಲಾಯಿಸಿದ ಸೂರ್ಯ: ಈ ಸಂಚಾರ ಯಾವ ರಾಶಿಯ ಮೇಲೆ ಹೇಗೆ ಪ್ರಭಾವ ಬೀರುವುದು?
ಗ್ರಹಗಳ ಅಧಿಪತಿ ಸೂರ್ಯದೇವ ತನ್ನ ರಾಶಿಫಥ ಫೆಬ್ರವರಿ 12ಕ್ಕೆ ಬದಲಾಯಿಸಿದಾಗ ಅದು 12 ರಾಶಿಗಳ ಮೇಲೆ ಬೀರುವ ಪ್ರಭಾವ ಕೂಡ ಭಿನ್ನವಾಗಿರುತ್ತದೆ, ಮಕರದಿಂದ ಕುಂಭಕ್ಕೆ ಸೂರ್ಯನ ರಾಶಿ ಬದಲಾವಣೆ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ ಎಂದು ನೋಡೋಣ:
ಮೇಷ ರಾಶಿ
ಈ ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿದೆ, ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ತುಂಬಾನೇ ಉತ್ತಮವಾಗಲಿದೆ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ಸೂರ್ಯ ಸಂಚಾರ ನಿಮ್ಮ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ತರಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣಬಹುದು, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ಆರ್ಥಿಕ ದೃಷ್ಟಿಯಿಂದಲೂ ಉತ್ತಮವಾಗಿದೆ. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಆಧ್ಯಾತ್ಮಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಉದ್ಯೋಗದಲ್ಲಿ ತೃಪ್ತಿ ಇರಲಿದೆ, ವ್ಯಾಪಾರಸ್ಥರು ಕೂಡ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು.ಕುಟುಂಬ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಕುಂಭ ಸಂಚಾರ ನಿಮಗೆ ಶುಭವಾಗಿದೆ.
ಕರ್ಕ ರಾಶಿ
ಈ ಸಂಚಾರ ಖರ್ಚು ಹೆಚ್ಚಿಸಲಿದೆ, ವೃತ್ತಿ ಬದುಕಿನಲ್ಲಿಯೂ ಹಲವು ಅಡೆತಡೆ ಎದುರಾಗಬಹುದು,ನಿಮ್ಮ ಹಾಗೂ ಸಂಗಾತಿ ನಡುವೆ ಸಮಸ್ಯೆವಿರಬಹುದು, ಇದ ಜೊತೆಗೆ ಆರೋಗ್ಯದಲ್ಲಿಯೂ ಏರಳಿತವಿರಬಹುದು, ಈ ಅವಧಿಯಲ್ಲಿ ನೀವು ಪ್ರತಿಯೊಂದು ವಿಷಯದಲ್ಲಿಯೂ ಹೆಚ್ಚು ಜಾಗ್ರತೆವಹಿಸಿ, ಕೆಲಸ, ಆರೋಗ್ಯ ಇವುಗಳ ಬಗ್ಗೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿವೆ, ಆರ್ಥಿಕವಾಗಿ ನಿಮಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕನ್ಯಾ ರಾಶಿ
ಧಾರ್ಮಿಕ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ, ಉದ್ಯೋಗದ ದೃಷ್ಟಿಯಿಂದ ಈ ಅವಧಿ ನಿಮಗೆ ಉತ್ತಮವಾಗಿದೆ. ನಿಮ್ಮ ಕಠಿಣಶ್ರಮದಿಂದಾಗಿ ಹಣಕಾಸಿನ ವಿಷಯದಲ್ಲಿ ಉತ್ತಮವಾಗಿದೆ, ಈ ಅವಧಿ ಮಾನಸಿಕವಾಗಿ, ದೈಹಿಕವಾಗಿ ಉತ್ತಮವಾಗಿರಲಿದೆ.
ತುಲಾ ರಾಶಿ
ವೃತ್ತಿ ಬದುಕಿನಲ್ಲಿ ನಿಮಗೆ ಹೊಸ ಅವಕಾಶಗಳು ದೊರೆಯಲಿದೆ, ಆರ್ಥಿಕವಾಗಿಯೂ ನಿಮಗೆ ಉತ್ತಮವಾಗಿದೆ. ವೃತ್ತಿ ಜೀವನದಲ್ಲಿ ಹಾಗೂ ವೈಯಕ್ತಿಕ ಜೀವನದಲ್ಲಿ ಧನಾತ್ಮಕ ಬದಲಾವಣೆ ಕಾಣುವುದರಿಂದ ಖುಷಿಯಾಗಿರುತ್ತೀರಿ.
ವೃಶ್ಚಿಕ ರಾಶಿ
ಆಸ್ತಿಯಲ್ಲಿ ಹೂಡಿಕೆ ಮಾಡುವುದು ಅಥವಾ ಆಸ್ತಿ ಮಾರಾಟ ಮಾಡಲು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಜೀವನದ ದೃಷ್ಟಿಯಿಂದಲೂ ಉತ್ತಮವಾಗಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ತಾಯಿಯ ಆರೈಕೆ ಕಡೆಗೆ ಹಚ್ಚು ಗಮನಹರಿಸಿ, ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು.
ಧನು ರಾಶಿ
ಧಾರ್ಮಿಕ ವಿಷಯಗಳ ಕಡೆಗೆ ಪಲವು ಹೆಚ್ಚಾಗಲಿದೆ, ವಿದೇಶದಲ್ಲಿ ಕೆಲಸಕ್ಕೆ ಹೋಗ ಬಯಸುತ್ತಿರುವವರೆಗೆ ಈ ಅವಧಿ ತುಂಬಾನೇ ಉತ್ತಮವಾಗಿದೆ. ಇನ್ನು ಹಣದ ವಿಷಯದಲ್ಲಿ ಉತ್ತಮವಾಗಿ, ಹಣವನ್ನು ಉಳಿಸಲು ಸಾಧ್ಯವಾಗಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
ಮಕರ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಅದರೆ ವ್ಯಾಪಾರಿಗಳು ತಮ್ಮ ಬ್ಯುಸ್‌ನೆಸ್ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಯಾವುದೇ ದೊಡ್ಡ ಹೂಡಿಕೆ ಮಾಡುವುದಾದರೆ ಜಾಗ್ರತೆ. ಇನ್ನು ಚಿಕ್ಕ ಪುಟ್ಟ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಕುಂಭ ರಾಶಿ
ಈ ಅವಧಿ ಸ್ವಲ್ಪ ಒತ್ತಡದಿಂದ ಕೂಡಿರಲಿದೆ, ವೃತ್ತಿ ಬದುಕಿನಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು. ವೈಯಕ್ತಿಕ ಜೀವನದಲ್ಲಿಯೂ ಕೆಲ ಸಮಸ್ಯೆ ಉಂಟಾಗಬಹುದು, ಕೈ ಕಾಲು ನೋವು ಈ ಬಗೆಯ ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.
ಮೀನ ರಾಶಿ
ಆರ್ಥಿಕವಾಗಿ ನೋಡುವುದಾದರೆ ಸವಾಲಿನ ಸಮಯ, ಖರ್ಚು ಹೆಚ್ಚಿರಲಿದೆ. ವ್ಯಾಪಾರಿಗಳು ಕೂಡ ಆರ್ಥಿಕ ಜೀವನದ ಕಡೆಗೆ ಗಮನಹರಿಸಬೇಕು. ಆರ್ಥಿಕ ಸಮಸ್ಯೆ ಸಂಬಂಧದಲ್ಲಿಯೂ ಸಮಸ್ಯೆ ತರಬಹುದು, ಹಾಗಾಗಿ ಆರ್ಥಿಕ ವಿಷಯಗಳತ್ತ ಹೆಚ್ಚು ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications